ಬ್ರೇಕಿಂಗ್ ನ್ಯೂಸ್
02-05-25 08:44 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 02: ಹಿಂದುತ್ವ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಫಾಝಿಲ್ ಕೊಲೆಗೆ ಪ್ರತಿಕಾರ ಅಲ್ಲ ಎಂದು ಸ್ವತಃ ಫಾಝಿಲ್ ಅವರ ಕುಟುಂಬಸ್ಥರೇ ತಿಳಿಸಿದ್ದಾರೆ ಎಂದು ಸ್ಪೀಕರ್ ಯು.ಟಿ ಖಾದರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಶುಕ್ರವಾರ ಮಾತನಾಡಿದ ಅವರು, ಫಾಝಿಲ್ ತಂದೆ ಹಾಗೂ ಸಹೋದರರು ಮಾತನಾಡಿದ್ದಾರೆ. ಸುಹಾಸ್ ಕೊಲೆಗೂ ನಮಗೂ ಯಾವುದೇ ಸಂಬಂಧ ಇಲ್ಲ ನಮಗೂ ಈ ಕೃತ್ಯಕ್ಕೂ ಯಾವುದೇ ಸಂಬಂಧ ಇಲ್ಲ. ಇಂತಹ ಪ್ರತಿಕಾರದ ಆಲೋಚನೆಯನ್ನು ನಾವು ಮಾಡಿಯೂ ಇಲ್ಲ. ನಾವು ಎಲ್ಲವನ್ನೂ ಅಂದೇ ದೇವರ ಪಾಲಿಗೆ ಬಿಟ್ಟಿದ್ದೇವೆ ಎಂದಿದ್ದಾರೆ ಎಂದು ತಿಳಿಸಿದರು.
ಇದೆಲ್ಲವೂ ವೈಯಕ್ತಿಕವಾದ ದ್ವೇಷಕ್ಕಾಗಿ ನಡೆದಿರುವ ಘಟನೆಯಾಗಿದೆ. ಕೊಲ್ಲಲ್ಪಟ್ಟ ಸುಹಾಸ್ ಶೆಟ್ಟಿ ಈ ಹಿಂದೆ ಕೀರ್ತಿ ಶೆಟ್ಟಿ ಮರ್ಡರ್ ಕೇಸಲ್ಲಿ ಪ್ರಮುಖ ಆರೋಪಿಯಾಗಿದ್ದರು. ಅಷ್ಟೇ ಅಲ್ಲದೆ, 2022 ರಲ್ಲಿ ನಡೆದ ಫಾಝಿಲ್ ಕೊಲೆ ಪ್ರಕರಣದಲ್ಲೂ ಪ್ರಮುಖ ಆರೋಪಿ. ವೈಯಕ್ತಿಕವಾದ ಗುಂಪು ಗಳ ನಡುವಿನ ಘರ್ಷಣೆ ಇದು. ಧರ್ಮ ಧರ್ಮದ ದ್ವೇಷ ಅಲ್ಲ ಇದು ಎಂದು ತಿಳಿಸಿದರು.
ಪೊಲೀಸ್ ತನಿಖೆಯಿಂದ ಸತ್ಯ ಹೊರಬರಲಿದೆ, ಯಾವುದೇ ತನಿಖೆಗೂ ನಾವು ಸಿದ್ಧ ;
ಯಾವುದೇ ಸಂದರ್ಭದಲ್ಲಿ ಪೊಲೀಸರಿಗೆ ಸಹಕಾರ ನೀಡಲು ನಾವು ಸಿದ್ಧ. ನಾವು ಮನೆಯಲ್ಲೇ ಇರುತ್ತೇವೆ. ಯಾವುದೇ ತನಿಖೆಗೂ ನಾವು ಸಿದ್ಧ, ತನಿಖೆ ಎದುರಿಸಲೂ ಸಿದ್ಧ ಎಂದು ಅವರು ನನಗೆ ತಿಳಿಸಿದ್ದಾರೆ. ಎಲ್ಲವೂ ಪೊಲೀಸ್ ತನಿಖೆಯ ಮೂಲಕ ಬಹಿರಂಗವಾಗಲಿದೆ. ಮೊದಲು ದುಷ್ಕರ್ಮಿಗಳ ಬಂಧನ ಆಗಬೇಕು. ಹೀಗಾಗಿ ಜನರು ಶಾಂತವಾಗಿ ವರ್ತಿಸಬೇಕು. ಇಂತಹ ಘಟನೆಗಳು ಮುಂದೆ ಆಗದಂತೆ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳಬೇಕು ಎಂದರು.
ಇದು ಒಂದು ವರ್ಗದ ಸಮಸ್ಯೆ ಅಲ್ಲ. ದಕ್ಷಿಣ ಕನ್ನಡ ಜಿಲ್ಲೆ ಎಲ್ಲಾ ಕ್ಷೇತ್ರದಲ್ಲೂ ಪ್ರಸಿದ್ಧ. ಎಲ್ಲರೂ ಮಂಗಳೂರಿಗೆ ಬರಬೇಕು ಎಂಬ ಪ್ರೇರಣೆ ಕೊಡುವ ಪ್ರದೇಶವಾಗಿದೆ. ಬೆಂಗಳೂರು ನಂತರ ಮಂಗಳೂರು ಪ್ರಸಿದ್ಧ ಜಿಲ್ಲೆಯಾಗಿದೆ. ಜಿಲ್ಲೆಯಲ್ಲಿ ಮತ್ತಷ್ಟು ಅಭಿವೃದ್ದಿ ಆಗಲು ಎಲ್ಲಾ ಸಮಾಜದ ಜನರು ಸಹಕಾರ ಕೊಡಬೇಕು ಎಂದು ಮನವಿ ಮಾಡಿದರು.
ಕಾನೂನು ಸುವ್ಯವಸ್ಥೆ ಕಾಪಾಡಿ ಸುಹಾಸ್ ಶೆಟ್ಟಿ ಕೊಲೆ ನಂತರ ನಗರದಲ್ಲಿ ಪರಿಸ್ಥಿತಿ ಸಾಕಷ್ಟು ಹದಗೆಟ್ಟಿದೆ. ಹೀಗಾಗಿ, ಆರೋಪಿಗಳನ್ನು ಶೀಘ್ರ ಪತ್ತೆ ಹಚ್ಚಿ, ಕಾನೂನು ಸುವ್ಯವಸ್ಥೆ ಕಾಪಾಡಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಸ್ಪೀಕರ್ ಯು.ಟಿ ಖಾದರ್ ಸೂಚನೆ ನೀಡಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಹಾಗೂ ಗೃಹ ಇಲಾಖೆಯೊಂದಿಗೂ ಚರ್ಚೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಹದಗೆಡದಂತೆ ನೋಡಿಕೊಳ್ಳಲು ಬೇಕಾದ ಸೂಕ್ತ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.
ಗುರುವಾರ ರಾತ್ರಿ 8.30 ಕ್ಕೆ ಸುಹಾಸ್ ಶೆಟ್ಟಿ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿ ಹತ್ಯೆ ಮಾಡಿದ್ದರು. ಮಂಗಳೂರಿನ ಕಿನ್ನಿಪದವು ಎಂಬಲ್ಲಿ ಈ ಕೃತ್ಯ ನಡೆದಿದೆ. ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ಈ ಕೃತ್ಯವನ್ನು ಎಸಗಿದೆ. ಈಗಾಗಲೇ ಆರೋಪಿಗಳಿಗೆ ಪೊಲೀಸರು ಬಲೆ ಬೀಸಿದ್ದಾರೆ. ಈ ಘಟನೆಯ ಬೆನ್ನಲ್ಲೇ ಕೆಲವು ಚೂರಿ ಇರಿತ, ತಲವಾರು ದಾಳಿಯಂತಹ ಘಟನೆಗಳು ನಡೆದಿವೆ.
U.T. Khader on Thursday clarified that the murder of Suhas Shetty does not have any religious angle or links to the revenge killing of Fazil, as speculated by some groups.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm