ಬ್ರೇಕಿಂಗ್ ನ್ಯೂಸ್
06-05-25 08:18 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 6 : ಭಾರೀ ಸಂಚಲನ ಸೃಷ್ಟಿಸಿದ್ದ ಓಬಳಾಪುರಂ ಮೈನಿಂಗ್ ಕಂಪನಿ(ಒಎಂಸಿ) ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಗಂಗಾವತಿ ಹಾಲಿ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಏಳು ವರ್ಷ ಜೈಲು ಶಿಕ್ಷೆ ವಿಧಿಸಿ ಸಿಬಿಐ ವಿಶೇಷ ಕೋರ್ಟ್ ತೀರ್ಪು ನೀಡಿದೆ.
ಒಎಂಸಿ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿ ವಾದ ಆಲಿಸಿದ್ದ ಹೈದರಾಬಾದ್ ಸಿಬಿಐ ನ್ಯಾಯಾಲಯ ತೀರ್ಪನ್ನು ಕಾಯ್ದಿರಿಸಿತ್ತು. ಮೇ 6ರಂದು ತೀರ್ಪು ಪ್ರಕಟಿಸಿದ ಕೋರ್ಟ್, ಒಎಂಸಿ ಕಂಪನಿ ಮಾಲೀಕ ಜನಾರ್ದನ ರೆಡ್ಡಿಗೆ ಏಳು ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಆಂಧ್ರ ಪ್ರದೇಶದ ಅನಂತಪುರ ಜಿಲ್ಲೆಯ ಓಬಳಾಪುರಂನಲ್ಲಿ ನಡೆದಿದ್ದ ಅಕ್ರಮ ಗಣಿಗಾರಿಕೆ ಪ್ರಕರಣ ಸಂಬಂಧಿಸಿ ಬರೋಬ್ಬರಿ 13 ವರ್ಷಗಳಿಂದ ನಡೆದ ಸುದೀರ್ಘ ವಿಚಾರಣೆ ಪ್ರಕ್ರಿಯೆಯಲ್ಲಿ ಸಿಬಿಐ ಒದಗಿಸಿದ್ದ 3,400ಕ್ಕೂ ಹೆಚ್ಚು ದಾಖಲೆಗಳನ್ನು ಪರಿಶೀಲಿಸಿ, 219 ಸಾಕ್ಷಿಗಳನ್ನು ವಿಚಾರಣೆಗೆ ಒಳಪಡಿಸಿ ಕೋರ್ಟ್ ತೀರ್ಪು ನೀಡಿದೆ.
ಏಳು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಜನಾರ್ದನ ರೆಡ್ಡಿ ಅವರ ಶಾಸಕ ಸ್ಥಾನಕ್ಕೆ ಕುತ್ತು ಬರುವ ಸಾಧ್ಯತೆ ಇದೆ. ಇದೇ ಪ್ರಕರಣದಲ್ಲಿ ವಿ.ಡಿ.ರಾಜಗೋಪಾಲ್, ದಿ. ರಾವ್ ಲಿಂಗಾರೆಡ್ಡಿ, ಕೆ.ಮೆಹಫೂಸ್ ಅಲಿ ಖಾನ್ ಕೂಡ ಅಪರಾಧಿ ಎಂದು ಕೋರ್ಟ್ ತೀರ್ಪು ನೀಡಿದೆ.
ಶಾಸಕ ಜನಾರ್ದನ ರೆಡ್ಡಿ, ಬಿ.ವಿ ಶ್ರೀನಿವಾಸ ರೆಡ್ಡಿ (ಒಎಂಸಿ ವ್ಯವಸ್ಥಾಪಕ ನಿರ್ದೇಶಕ), ಮೆಫಾಜ್ ಅಲಿ ಖಾನ್ (ಜನಾರ್ದನ ರೆಡ್ಡಿ ಆಪ್ತ ಸಹಾಯಕ), ವಿ.ಡಿ ರಾಜಗೋಪಾಲ್ (ಗಣಿ ಇಲಾಖೆಯ ಮಾಜಿ ನಿರ್ದೇಶಕ), ಕೃಪಾನಂದಂ (ನಿವೃತ್ತ ಐಎಎಸ್ ಅಧಿಕಾರಿ), ಸಬಿತಾ ಇಂದ್ರಾರೆಡ್ಡಿ (ತೆಲಂಗಾಣದ ಮಾಜಿ ಸಚಿವೆ ಹಾಗೂ ಹಾಲಿ ಶಾಸಕಿ), ವೈ. ಶ್ರೀಲಕ್ಷ್ಮಿ (2022ರಲ್ಲಿ ಸೇವೆಯಿಂದ ಬಿಡುಗಡೆಯಾದ ಐಎಎಸ್ ಅಧಿಕಾರಿ) ಮತ್ತು ದಿವಂಗತ ಆರ್. ಲಿಂಗಾ ರೆಡ್ಡಿ (ಅಂದಿನ ಗಣಿ ಇಲಾಖೆಯ ಸಹಾಯಕ ನಿರ್ದೇಶಕ) ಈ ಪ್ರಕರಣದ ಆರೋಪಿಗಳಾಗಿದ್ದಾರೆ. ಇವರ ವಿರುದ್ಧ ಐಪಿಸಿ ಸೆಕ್ಷನ್ 120 ಬಿ, 420, 409, 468 ಮತ್ತು 471 ಹಾಗೂ ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 13(2) ಜೊತೆಗೆ 13(1)(ಡಿ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
2009 ರಲ್ಲಿ ಸಿಬಿಐ ಒಎಂಸಿ ಕಂಪನಿಯ ಅಕ್ರಮ ಗಣಿಗಾರಿಕೆ ಆರೋಪ ಸಂಬಂಧ ತನಿಖೆ ಪ್ರಾರಂಭಿಸಿತ್ತು. ವೈ.ಎಸ್. ರಾಜಶೇಖರ ರೆಡ್ಡಿ ಅವಿಭಜಿತ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಗಾಲಿ ಜನಾರ್ದನ ರೆಡ್ಡಿ ಅವರ ಒಎಂಸಿ ಕಂಪನಿಗೆ ಓಬಳಾಪುರಂ ಮತ್ತು ಡಿ. ಹಿರೇಹಾಳದಲ್ಲಿ ಕ್ರಮವಾಗಿ 68.5 ಹೆಕ್ಟೇರ್ ಮತ್ತು 39.5 ಹೆಕ್ಟೇರ್ ಪ್ರದೇಶದಲ್ಲಿ ಕಬ್ಬಿಣದ ಅದಿರು ಗಣಿಗಾರಿಕೆ ಗುತ್ತಿಗೆ ನೀಡುವಲ್ಲಿ ಅಕ್ರಮ ನಡೆದಿದೆ ಎಂದು ಆರೋಪ ಕೇಳಿಬಂದಿತ್ತು.
A CBI court in Telangana’s Nampally on Tuesday convicted former Karnataka Minister Gali Janardhan Reddy and three others in the long-standing Obulapuram illegal mining case.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm