ಬ್ರೇಕಿಂಗ್ ನ್ಯೂಸ್
06-05-25 11:23 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 06 : ಭಾರತ-ಪಾಕಿಸ್ತಾನ ನಡುವೆ ಉದ್ವಿಗ್ನ ಸ್ಥಿತಿ ಏರ್ಪಟ್ಟಿದ್ದು ಈ ಮಧ್ಯೆ ದೇಶಾದ್ಯಂತ 244 ಜಿಲ್ಲೆಗಳಲ್ಲಿ ಭಾರತೀಯ ಸೇನೆಯು ಮೇ 7 ರಂದು ನಾಗರಿಕ ರಕ್ಷಣಾ ಅಣಕು ಕವಾಯತು ಆಯೋಜಿಸಿದೆ. ಇದೇ ವೇಳೆ, ಕೆಲವು ಪ್ರದೇಶಗಳಲ್ಲಿ ನಡೆಯಬೇಕಿದ್ದ ಮಾಕ್ ಡ್ರಿಲ್ ಮುಂದೂಡಲಾಗಿದೆ. ಕರ್ನಾಟಕದ ಮೂರು ಕಡೆ ನಿಗದಿಯಾಗಿದ್ದ ಕವಾಯತನ್ನು ಬೆಂಗಳೂರಿನಲ್ಲಿ ಮಾತ್ರ ನಡೆಸಲು ನಿರ್ಧರಿಸಲಾಗಿದೆ.
ಉತ್ತರ ಕನ್ನಡ (ಕಾರವಾರ) ಮತ್ತು ರಾಯಚೂರು ಜಿಲ್ಲೆಗಳಲ್ಲಿ ಯೋಜಿತವಾಗಿದ್ದ ಮಾಕ್ ಡ್ರಿಲ್‌ಗಳನ್ನು ಮುಂದೂಡಲಾಗಿದೆ. ಈ ಬಗ್ಗೆ ಜಿಲ್ಲಾಡಳಿತ, ಗೃಹ ರಕ್ಷಕ ದಳ, ಮತ್ತು ಅಗ್ನಿಶಾಮಕ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಬೆಂಗಳೂರು ನಗರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಗೃಹ ರಕ್ಷಕ ದಳ, ಅಗ್ನಿಶಾಮಕ ಇಲಾಖೆ, ಮತ್ತು ಜಿಲ್ಲಾಡಳಿತದ ಸಹಭಾಗಿತ್ವ ಇರಲಿದೆ. ನಾಗರಿಕರ ಸುರಕ್ಷತೆ ಮತ್ತು ತುರ್ತು ಪರಿಸ್ಥಿತಿಗಳಿಗೆ ಸಿದ್ಧತೆಯನ್ನು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ಕವಾಯತು ಆಯೋಜಿಸಲಾಗಿದೆ.
ಕಾರವಾರದಲ್ಲಿ ಮುಂದೂಡಿಕೆ ; ಡೀಸಿ
ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕದಂಬ ನೌಕಾನೆಲೆ ಮತ್ತು ಕೈಗಾ ಅಣುವಿದ್ಯುತ್ ಸ್ಥಾವರದ ಆಸುಪಾಸಿನ ಗ್ರಾಮಗಳಲ್ಲಿ ನಡೆಯಬೇಕಿದ್ದ ಮಾಕ್ ಡ್ರಿಲ್ ಅನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ. ಈ ಬಗ್ಗೆ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ ಮಾಹಿತಿ ನೀಡಿದ್ದು, ಮುಂದಿನ ದಿನಾಂಕವನ್ನು ಶೀಘ್ರದಲ್ಲಿ ಘೋಷಿಸಲಾಗುವುದು ಎಂದು ತಿಳಿಸಿದ್ದಾರೆ.
ಗೃಹ ಇಲಾಖೆ ಸೂಚನೆಯಿಂದ ಮುಂದೂಡಿಕೆ
ರಾಯಚೂರಿನಲ್ಲಿ ನಡೆಯಬೇಕಿದ್ದ ಮಾಕ್ ಡ್ರಿಲ್ ಅನ್ನು ಕೇಂದ್ರ ಗೃಹ ಇಲಾಖೆಯ ಸೂಚನೆಯಂತೆ ಮುಂದೂಡಲಾಗಿದೆ. ದೇಶದ 244 ಜಿಲ್ಲೆಗಳಲ್ಲಿ ಮಾಕ್ ಡ್ರಿಲ್ ಆಯೋಜಿಸುವ ಯೋಜನೆಯ ಭಾಗವಾಗಿ, ಜಿಲ್ಲೆಗಳನ್ನು ಸೂಕ್ಷ್ಮತೆಯ ಆಧಾರದ ಮೇಲೆ ವರ್ಗ-1, ವರ್ಗ-2, ಮತ್ತು ವರ್ಗ-3 ಎಂದು ವಿಂಗಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ರಾಯಚೂರಿನ ಮಾಕ್ ಡ್ರಿಲ್ ಅನ್ನು ಮುಂದಿನ ಒಂದು ವಾರದೊಳಗೆ ನಿಗದಿಪಡಿಸಲು ತೀರ್ಮಾನಿಸಲಾಗಿದೆ.
ಕೇಂದ್ರ ಗೃಹ ಇಲಾಖೆಯ ಮಾರ್ಗಸೂಚಿಯಂತೆ, ಮುಂದಿನ ಒಂದು ವಾರದೊಳಗೆ ರಾಯಚೂರು, ಕಾರವಾರ ಸೇರಿದಂತೆ ಮುಂದೂಡಲಾದ ಜಿಲ್ಲೆಗಳಲ್ಲಿ ಮಾಕ್ ಡ್ರಿಲ್‌ಗೆ ದಿನಾಂಕ ನಿಗದಿಪಡಿಸಲಾಗುವುದು. ಈ ಅಭ್ಯಾಸಗಳು ದೇಶದ ಸುರಕ್ಷತೆ ಮತ್ತು ತುರ್ತು ಸನ್ನಿವೇಶಗಳಿಗೆ ಸಿದ್ಧತೆಯನ್ನು ಬಲಪಡಿಸುವ ಗುರಿಯನ್ನು ಹೊಂದಿವೆ.
ಬೆಂಗಳೂರಿನಲ್ಲಿ 35 ಕಡೆ ಸೈರನ್ !
ಬೆಂಗಳೂರಿನಲ್ಲಿ ರಕ್ಷಣಾ ಕವಾಯತು ಅಂಗವಾಗಿ 35 ಕಡೆ ಸೈರನ್ ಮೊಳಗಲಿದೆ ಎನ್ನುವ ಮಾಹಿತಿಯಿದೆ. ರಕ್ಷಣಾ ಇಲಾಖೆಯ ಕಚೇರಿ, ಐಟಿ ಫೀಲ್ಡ್ ಸೇರಿದಂತೆ ಪ್ರಮುಖ ಪ್ರದೇಶಗಳನ್ನು ಗುರಿಯಾಗಿಸಿ ತುರ್ತು ಸಂದರ್ಭದಲ್ಲಿ ರಕ್ಷಣಾ ಕಾರ್ಯಾಚರಣೆ ಹೇಗಿರಬೇಕು ಮತ್ತು ಜನರು ಯಾವೆಲ್ಲ ಮುಂಜಾಗ್ರತೆ ವಹಿಸಬೇಕು ಎನ್ನುವ ಬಗ್ಗೆ ಸೂಚನೆ ನೀಡಲಿದ್ದಾರೆ. ಇದರಲ್ಲಿ ಎನ್ ಸಿಸಿ, ಎನ್ನೆಸ್ಸೆಸ್ ಸೇರಿದಂತೆ ವಿದ್ಯಾರ್ಥಿಗಳನ್ನೂ ತೊಡಗಿಸಲಿದ್ದಾರೆ.
Mock drills will be conducted in Bengaluru, Karwar, and Raichur on May 7, given the "new and complex threats" that have emerged amid rising tensions with Pakistan following the Pahalgam terror attack.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
17-09-25 09:44 pm
HK News Desk
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm