ಬ್ರೇಕಿಂಗ್ ನ್ಯೂಸ್
08-05-25 11:07 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 8 : ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಿಬಿಐ ವಿಶೇಷ ನ್ಯಾಯಾಲಯದಿಂದ ಏಳು ವರ್ಷಗಳ ಶಿಕ್ಷೆ ಪ್ರಕಟವಾದ ಬೆನ್ನಲ್ಲೇ ಗಾಲಿ ಜನಾರ್ದನ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹ ಮಾಡಲಾಗಿದೆ. ಈ ಬಗ್ಗೆ ವಿಧಾನಸಭೆ ಸಚಿವಾಲಯ ಆದೇಶ ಹೊರಡಿಸಿದೆ.
ಕೋರ್ಟ್ ತೀರ್ಪು ಪ್ರಕಟವಾದ ಮೇ 6 ರಿಂದ ಅನ್ವಯವಾಗುವಂತೆ ಜನಾರ್ದನ ರೆಡ್ಡಿ ಅವರನ್ನು ವಿಧಾನಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿ ಅಧಿಸೂಚನೆ ಹೊರಡಿಸಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ಕ್ಷೇತ್ರದಿಂದ ರೆಡ್ಡಿ ವಿಧಾನಸಭೆಗೆ ಆಯ್ಕೆಯಾಗಿದ್ದು ಅಲ್ಲಿನ ಶಾಸಕ ಸ್ಥಾನ ಖಾಲಿಯಾದಂತಾಗಿದೆ.
ಸಂವಿಧಾನದ 191 (1) ವಿಧಿ ಅನ್ವಯ ಹಾಗೂ ಜನತಾ ಪ್ರಾತಿನಿಧ್ಯ ಕಾಯಿದೆ 1951 ರ ಸೆಕ್ಷನ್ 8 ರಡಿ ಜನಾರ್ದನ ರೆಡ್ಡಿ ಅವರನ್ನು ವಿಧಾನಸಭಾ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ. ಶಿಕ್ಷೆಯ ತೀರ್ಪಿಗೆ ಮೇಲಿನ ಕೋರ್ಟ್ ತಡೆಯಾಜ್ಞೆ ನೀಡದ ಹೊರತು ಮುಂದಿನ 6 ವರ್ಷಗಳ ಅವಧಿಗೆ ಅನರ್ಹತೆ ಜಾರಿಯಲ್ಲಿ ಇರಲಿದೆ. ಇದರೊಂದಿಗೆ ಕರ್ನಾಟಕ ವಿಧಾನಸಭೆಯಲ್ಲಿ ಒಂದು ಸ್ಥಾನ ತೆರವಾದಂತಾಗಿದೆ ಎಂದು ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಕ್ರಮ ಗಣಿಗಾರಿಕೆ ಸಂಬಂಧ ಸಿಬಿಐ ವಿಶೇಷ ನ್ಯಾಯಾಲಯವು ಶಾಸಕ ಜನಾರ್ದನ ರೆಡ್ಡಿ ಅವರಿಗೆ ಏಳು ವರ್ಷಗಳ ಶಿಕ್ಷೆ ವಿಧಿಸಿತ್ತು. ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದ ಖಾದರ್, ಕೋರ್ಟ್ ತೀರ್ಪು ಬಗ್ಗೆ ಪತ್ರಿಕೆಗಳ ಮೂಲಕ ಗಮನಿಸಿದ್ದೇನೆ. ನ್ಯಾಯಾಲಯದ ಅಧಿಕೃತ ಆದೇಶ ಪ್ರತಿ ತಲುಪಿದ ಬಳಿಕ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ವಿಧಾನಸಭಾಧ್ಯಕ್ಷ ಯುಟಿ ಖಾದರ್ ಹೇಳಿದ್ದರು.
Former Minister and BJP leader, Gali Janardhana Reddy, representing Gangavati in the Legislative Assembly, has been disqualified from the House following his conviction by the court of Principal Special Judge for CBI cases in Hyderabad.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm