ಬ್ರೇಕಿಂಗ್ ನ್ಯೂಸ್
13-05-25 09:37 pm HK News Desk ಕರ್ನಾಟಕ
ದಾವಣಗೆರೆ, ಮೇ 13 : ಕರ್ತವ್ಯ ನಿಮಿತ್ತ ಲಾರಿ ನಿಲ್ಲಿಸಲು ಯತ್ನಿಸಿದ ಪೊಲೀಸ್ ಸಿಬ್ಬಂದಿ ಮೇಲೆ ಚಾಲಕ ಲಾರಿ ಹತ್ತಿಸಿದ ಪರಿಣಾಮ ಪೊಲೀಸ್ ಕಾನ್ಸ್ಟೇಬಲ್ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಾವಣಗೆರೆ ತಾಲೂಕಿನ ಹೆಬ್ಬಾಳ ಟೋಲ್ ಗೇಟ್ ಬಳಿ ನಡೆದಿದೆ.
ಡಿಎಆರ್ ಕಾನ್ಸ್ಟೇಬಲ್ ರಾಮಪ್ಪ ಪೂಜಾರ್ ಸಾವನ್ನಪ್ಪಿದ ಸಿಬ್ಬಂದಿ. ಹೆಬ್ಬಾಳ ಟೋಲ್ ಗೇಟ್ ಬಳಿ ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ರಾಮಪ್ಪ ಪೂಜಾರ್ ಸಂಚಾರಿ ಪೊಲೀಸರೊಂದಿಗೆ ಲಾರಿ ನಿಲ್ಲಿಸಲು ಯತ್ನಿಸಿದ್ದಾರೆ. ಈ ವೇಳೆ, ಅತಿ ವೇಗದಲ್ಲಿ ಇದ್ದ ಲಾರಿ ಸಿಬ್ಬಂದಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ, ಚಾಲಕನನ್ನು ಹಿಡಿಯವ ಪ್ರಯತ್ನ ನಡೆಸಲಾಯಿತಾದರೂ ಆತ ಪರಾರಿಯಾಗಿದ್ದ. ಘಟನೆ ಸಂಬಂಧ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆ ಮಾಹಿತಿ ಬೆನ್ನಲ್ಲೇ ಎಸ್ಪಿ ಉಮಾಪ್ರಶಾಂತ್ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನಾ ಸ್ಥಳವಾಗಿರುವ ಟೋಲ್ ಗೇಟ್ ಬಳಿ ಯಾವುದೇ ಸಿಸಿಟಿವಿ ಕ್ಯಾಮರಾ ಅಳವಡಿಸದೇ ಇರುವ ಹಿನ್ನಲೆ ಎಸ್ಪಿ ಅಲ್ಲಿನ ಟೋಲ್ ಆಡಳಿತ ಹಾಗೂ ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡರು.
ಖಾಸಗಿ ಆಸ್ಪತ್ರೆಯ ಶವಾಗಾರದಲ್ಲಿ ಮೃತರ ದೇಹ ಇಡಲಾಗಿದ್ದು, ಸ್ಥಳಕ್ಕೆ ಐಜಿಪಿ ರವಿಕಾಂತೇ ಗೌಡ ಅವರು ಭೇಟಿ ನೀಡಿದರು. ಮೃತ ಪೊಲೀಸ್ ಸಿಬ್ಬಂದಿಯ ಕುಟುಂಬಕ್ಕೆ ಧೈರ್ಯ ನೀಡಿ ಸಾಂತ್ವನ ಹೇಳಿದರು.
ಈ ವೇಳೆ ಮಾತನಾಡಿದ ಎಸ್ಪಿ ಉಮಾಪ್ರಶಾಂತ್, ಘಟನಾ ಸ್ಥಳಕ್ಕೆ ಭೇಟಿ ನೀಡಲಾಗಿದೆ. ಸಿಸಿಟಿವಿ ಕ್ಯಾಮರಾ ಅಳವಡಿಸದೆ ಇರುವುದರಿಂದ ಸಮಸ್ಯೆ ಆಗಿದೆ. ಈ ಕುರಿತು ಪರಿಶೀಲನೆ ನಡೆಸಿ ಮಾಹಿತಿ ಕೊಡುವಂತೆ ಎಚ್ಚರಿಕೆ ನೀಡಲಾಗಿದೆ ಎಂದರು.
ಚಾಲಕನ ಬಂಧನ:
ಅತಿವೇಗ ಮತ್ತು ನಿರ್ಲಕ್ಷ್ಯತನದ ಮೂಲಕ ಲಾರಿ ಚಲಾಯಿಸಿ ಪೊಲೀಸ್ ಸಿಬ್ಬಂದಿ ಸಾವಿಗೆ ಕಾರಣನಾದ ಆರೋಪಿಯನ್ನು ಪತ್ತೆ ಮಾಡಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಮೂಲದ ಸುರೇಶ್ ಎಂದು ಗುರುತಿಸಲಾಗಿದೆ.
A police constable was killed on duty after being hit by a speeding truck he was attempting to stop near the Hebbalu toll gate in Davanagere district on Monday. The truck driver reportedly drove straight into the officer and fled the scene.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm