ಬ್ರೇಕಿಂಗ್ ನ್ಯೂಸ್
15-05-25 10:16 pm HK News Desk ಕರ್ನಾಟಕ
ದಾವಣಗೆರೆ, ಮೇ 15 : ವಾಹನ ತಪಾಸಣೆ ವೇಳೆ ಪೊಲೀಸ್ ಕಾನ್ಸ್‌ಟೇಬಲ್ ಮೇಲೆ ಲಾರಿ ಹರಿದು ಸಾವನ್ನಪ್ಪಿರುವ ಘಟನೆ ದಾವಣಗೆರೆಯ ಹೆಬ್ಬಾಳು ಟೋಲ್ ಗೇಟ್ ಬಳಿ ನಡೆದಿತ್ತು. ರಾಮಪ್ಪ ಪೂಜಾರ್ (27) ಮೃತ ಡಿಎಆರ್ ಕಾನ್ಸ್‌ಟೇಬಲ್.
ಕ್ಯಾಂಟರ್ ಚಾಲಕ ವಾಹನವನ್ನು ಎಡಕ್ಕೆ ತೆಗೆದುಕೊಳ್ಳುವ ಬದಲು ಬಲಭಾಗಕ್ಕೆ ಬಂದಿದ್ದರಿಂದ ಪಿಸಿಯ ಮೇಲೆ ಅದು ಹರಿದು ಸಾವು ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿ ಹೇಳಿದರು. ಟೋಲ್ ಗೇಟ್ ಬಳಿ ಸಿಸಿಟಿವಿ ಇರಲಿಲ್ಲ ಅಂತ ಹೇಳಿದ್ದನ್ನು ಖಡಾಖಂಡಿತವಾಗಿ ಅಲ್ಲಗಳೆದ ಅವರು ಲೇನ್ ಡಿಸಿಪ್ಲಿನ್ ಪ್ರಾಜೆಕ್ಟ್ 2022 ರಿಂದ ಕಾರ್ಯ ನಿರ್ವಹಿಸುತ್ತಿದೆ ಮತ್ತು ಯೋಜನೆ ಅಡಿ 12 ಕೆಮೆರಾಗಳನ್ನು ಅಳವಡಿಸಲಾಗಿದೆ, ಲೇನ್ ಉಲ್ಲಂಘನೆಯಂಥ ಪ್ರಕರಣ ನಡೆದರೆ ಪಿಡಿಎಂಎಸ್ ಡಿವೈಸ್ಗಳಲ್ಲಿ ಅದು ಸೆರೆಯಾಗುತ್ತದೆ ಎಂದು ಹೇಳಿದರು.
ಹೆಬ್ಬಾಳು ಟೋಲ್ ಗೇಟ್ ಬಳಿ ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದರು. ಈ ವೇಳೆಗೆ ಲಾರಿಯನ್ನು ತಪಾಸಣೆ ಮಾಡಲು ಹೋದ ರಾಮಪ್ಪ ಪೂಜಾರ್ ಮೇಲೆ ಚಾಲಕ ಲಾರಿ ಹರಿಸಿ ಪರಾರಿಯಾಗಿದ್ದಾನೆ. ಈ ಘಟನೆಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಕೆಲ ಕಿಡಿಗೇಡಿಗಳು ಮಾಡಿದ ಅನಾಗರಿಕ ಕಾಮೆಂಟ್‌ಗಳು ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಉಮಾ ಪ್ರಶಾಂತ್ ಇದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ರಾಮಪ್ಪ ಅವರ ಸಾವನ್ನು ಸಂಭ್ರಮಿಸುವಂತೆ ಅನಾಗರಿಕ ಕಾಮೆಂಟ್‌ಗಳನ್ನು ಮಾಡಿದ್ದಾರೆ. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಎಸ್‌ಪಿ ಉಮಾ ಪ್ರಶಾಂತ್, 'ಒಬ್ಬರ ಸಾವನ್ನು ಸಂಭ್ರಮಿಸುವ ನಿಮ್ಮ ಮನಸ್ಥಿತಿಯನ್ನು ನೋಡಿದರೆ, ನಿಮ್ಮ ಗುಣಲಕ್ಷಣ ಏನೆಂದು ತಿಳಿಯುತ್ತದೆ. ಎಲ್ಲೋ ಕುಳಿತು ಪೊಲೀಸ್ ಇಲಾಖೆಯ ಬಗ್ಗೆ ಅಪಪ್ರಚಾರ ಮಾಡುವ ಬದಲು, ಏನಾದರೂ ದೂರು ಇದ್ದರೆ ಠಾಣೆಗೆ ಬಂದು ದೂರು ಸಲ್ಲಿಸಿ,' ಎಂದು ಕಿಡಿಗೇಡಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಪೊಲೀಸ್ ಇಲಾಖೆಯವರು ಎಷ್ಟೇ ಒಳ್ಳೆಯದು ಮಾಡಿದರು ನಮ್ಮ ಬಗ್ಗೆ ಕೆಟ್ಟದಾಗಿ ಕಮೆಂಟ್ ಮಾಡ್ತೀರಿ ಎಂದು ಕಿಡಿ ಕಾರಿದರು. ಪೊಲೀಸ್ ಇಲಾಖೆ ಬಗ್ಗೆ ಯಾರೆಲ್ಲ ಕೆಟ್ಟದಾಗಿ ಕಾಮೆಂಟ್ ಮಾಡುತ್ತಿದ್ದಾರೋ ಅವರ ವಿರುದ್ಧ ಸರಿಯಾದ ಕಾನೂನು ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ತಿಳಿಸಿದ್ದೇನೆ ಎಂದರು.
In the wake of a constable's death, Davangere Superintendent of Police (SP) has issued a stern warning against those posting negative and defamatory comments on social media platforms. The SP expressed her displeasure over the nature of several posts and said such behavior will not be tolerated.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 07:56 pm
Mangalore Correspondent
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm