Kumki elephants, Pawan Kalyan, Cm Siddaramaiah: ಆಂಧ್ರಕ್ಕೆ ಕುಮ್ಕಿ ಆನೆಗಳ ಹಸ್ತಾಂತರ ; ವಿಧಾನಸೌಧದಲ್ಲಿ ಆನೆಗಳ ದಂಡು, ರಾಜ್ಯದ ಗಜಪಡೆಗಳು ಇನ್ಮುಂದೆ ಆಂಧ್ರದಲ್ಲಿ ಕಾರ್ಯಾಚರಣೆ, ಕಾರ್ಯಕ್ರಮದಲ್ಲಿ ಸಿದ್ದು - ಪವನ್ ಕಲ್ಯಾಣ್ ಭೇಟಿ ! 

21-05-25 02:35 pm       Bangalore Correspondent   ಕರ್ನಾಟಕ

ರಾಜ್ಯದ ಶಕ್ತಿ ಸೌಧ ವಿಧಾನಸೌಧಲ್ಲಿ ಆನೆಗಳ ಕಾರುಬಾರು ಕಂಡು ಬಂತು. ಆಂದ್ರಪ್ರದೇಶಕ್ಕೆ ಹಸ್ತಾಂತರ ಮಾಡುವ ನಿಟ್ಟಿನಲ್ಲಿ ಐದು ಆನೆಗಳನ್ನು ವಿಧಾನಸೌಧದಲ್ಲಿ ಹಸ್ತಾಂತರ ಮಾಡಲಾಯ್ತು. ಸಿಎಂ ಸಿದ್ದರಾಮಯ್ಯ ಅವರು ಆಂಧ್ರಪ್ರದೇಶದ ಡಿಸಿಎಂ ಪವನ್ ಕಲ್ಯಾಣ್ ಅವರಿಗೆ ಹಸ್ತಾಂತರ ಮಾಡಿದರು. ಅದಕ್ಕೂ ಮುನ್ನ ವಿಧಾನಸೌಧದಲ್ಲಿ ಆನೆಗಳಿಗೆ ಪೂಜೆ ಸಲ್ಲಿಸಲಾಯಿತು.

ಬೆಂಗಳೂರು, ಮೇ 21 : ರಾಜ್ಯದ ಶಕ್ತಿ ಸೌಧ ವಿಧಾನಸೌಧಲ್ಲಿ ಆನೆಗಳ ಕಾರುಬಾರು ಕಂಡು ಬಂತು. ಆಂದ್ರಪ್ರದೇಶಕ್ಕೆ ಹಸ್ತಾಂತರ ಮಾಡುವ ನಿಟ್ಟಿನಲ್ಲಿ ಐದು ಆನೆಗಳನ್ನು ವಿಧಾನಸೌಧದಲ್ಲಿ ಹಸ್ತಾಂತರ ಮಾಡಲಾಯ್ತು. ಸಿಎಂ ಸಿದ್ದರಾಮಯ್ಯ ಅವರು ಆಂಧ್ರಪ್ರದೇಶದ ಡಿಸಿಎಂ ಪವನ್ ಕಲ್ಯಾಣ್ ಅವರಿಗೆ ಹಸ್ತಾಂತರ ಮಾಡಿದರು. ಅದಕ್ಕೂ ಮುನ್ನ ವಿಧಾನಸೌಧದಲ್ಲಿ ಆನೆಗಳಿಗೆ ಪೂಜೆ ಸಲ್ಲಿಸಲಾಯಿತು.

ಆಂದ್ರಪ್ರದೇಶಕ್ಕೆ ಒಟ್ಟು ಐದು ಕುಮ್ಕಿ ಆನೆಗಳನ್ನು ಹಸ್ತಾಂತರ ಮಾಡಲಾಯ್ತು. ಸಕ್ರೆಬೈಲು ಆನೆ ಶಿಬಿರದಿಂದ 2 ಹಾಗೂ ದುಬಾರೆ ಆನೆ ಶಿಬಿರದಿಂದ 3 ಆನೆಗಳನ್ನು ತರಿಸಲಾಗಿದೆ. ಈ ಆನೆಗಳನ್ನು ಕಾಡಾನೆ ಹಿಡಿಯುವ ಕಾರ್ಯಾಚರಣೆಗಾಗಿ ಪಳಗಿಸಲಾಗಿದೆ.

ನೆರೆ ರಾಜ್ಯದೊಂದಿಗಿನ ಸೌಹಾರ್ದ ಸಂಬಂಧ ಹೆಚ್ಚಿಸುವುದರ ಜೊತೆಗೆ, ಕರ್ನಾಟಕ ಗಡಿ ಮತ್ತು ಆಂಧ್ರದ ಆನೆ-ಮಾನವ ಸಂಘರ್ಷಕ್ಕೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಐದು ಆನೆಗಳನ್ನು ಹಸ್ತಾಂತರ ಮಾಡಲಾಗಿದೆ.

ವಿಧಾನಸೌಧದ ಮುಂಭಾಗದ ಮೆಟ್ಟಿಲುಗಳ ಮೇಲೆ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಹಾಗೂ ಅರಣ್ಯ ಸಚಿವ ಪವನ್ ಕಲ್ಯಾಣ್ ಅವರಿಗೆ ಪಳಗಿಸಿದ ಆನೆಗಳನ್ನು ಹಸ್ತಾಂತರ ಮಾಡಿದರು.

ಕಳೆದ ಆಗಸ್ಟ್ ನಲ್ಲಿ ಬೆಂಗಳೂರಿನಲ್ಲಿ ನಡೆದ ಆನೆ-ಮಾನವ ಸಂಘರ್ಷ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನದ ವೇಳೆ ಕರ್ನಾಟಕ- ಆಂಧ್ರಪ್ರದೇಶ, ತೆಲಂಗಾಣ ಹಾಗೂ ಕೇರಳ ರಾಜ್ಯಗಳ ನಡುವೆ ಆಗಿರುವ ಉತ್ತಮ ರೂಢಿಗಳ ವಿನಿಮಯ ಒಪ್ಪಂದದ ಭಾಗವಾಗಿ ಈ ಆನೆಗಳನ್ನು ಆಂಧ್ರಪ್ರದೇಶಕ್ಕೆ ಹಸ್ತಾಂತರಿಸಲಾಗುತ್ತಿದೆ.‌

ಕಳೆದ ವರ್ಷ ಖಂಡ್ರೆ ಭೇಟಿಯಾಗಿದ್ದ ಪವನ್‌ ಕಲ್ಯಾಣ್ ;

ಕಳೆದ ವರ್ಷ ಆಗಸ್ಟ್ 8ರಂದು ಪವನ್ ಕಲ್ಯಾಣ್ ಅವರು ಬೆಂಗಳೂರಿಗೆ ಆಗಮಿಸಿ ಖಂಡ್ರೆ ಅವರನ್ನು ಭೇಟಿ ಮಾಡಿ ಆಂಧ್ರದಲ್ಲಿ ಹೆಚ್ಚುತ್ತಿರುವ ಪುಂಡಾನೆಗಳ ಸೆರೆಗೆ ಕುಮ್ಕಿ ಆನೆ ನೀಡುವಂತೆ ಮತ್ತು ತಮ್ಮ ರಾಜ್ಯದ ಮಾವುತರು ಮತ್ತು ಅರಣ್ಯ ಸಿಬ್ಬಂದಿಗೆ ಆನೆ ಸೆರೆ ಕಾರ್ಯಾಚರಣೆಯ ತರಬೇತಿ ನೀಡುವಂತೆ ಮನವಿ ಮಾಡಿದ್ದರು

ಸೆಪ್ಟೆಂಬರ್ 27ರಂದು ಖಂಡ್ರೆ ನೇತೃತ್ವದ ನಿಯೋಗ ವಿಜಯವಾಡಕ್ಕೆ ಭೇಟಿ ನೀಡಿದ್ದ ವೇಳೆ ಈ ಸಂಬಂಧ ಎರಡೂ ರಾಜ್ಯಗಳ ನಡುವೆ ತಿಳಿವಳಿಕೆ ಒಪ್ಪಂದಕ್ಕೆ ಸಹಿ ಹಾಕಲಾಗಿತ್ತು.

ಗಡಿ ಜಿಲ್ಲೆ ಆನೆ ಸಮಸ್ಯೆಗೂ ಪರಿಹಾರ ;

ಆಂಧ್ರಪ್ರದೇಶದ ಚಿತ್ತೂರು ಗಡಿಗೆ ಹೊಂದಿಕೊಂಡಿರುವ ಕೋಲಾರ ಜಿಲ್ಲೆ ವ್ಯಾಪ್ತಿಯಲ್ಲೂ ಆನೆ- ಮಾನವ ಸಂಘರ್ಷ ಹೆಚ್ಚುತ್ತಿದ್ದು, ನೆರೆಯ ಆಂಧ್ರಪ್ರದೇಶದಿಂದ ನಮ್ಮ ರಾಜ್ಯಕ್ಕೆ ಪುಂಡಾನೆಗಳು ಬಾರದಂತೆ ತಡೆಯಲೂ ಆಂಧ್ರ ನಡೆಸಲಿರುವ ಆನೆ ಸೆರೆ ಕಾರ್ಯಾಚರಣೆ ಮುಂದಿನ ದಿನಗಳಲ್ಲಿ ನೆರವಾಗಲಿದೆ. ಈ ನಿಟ್ಟಿನಲ್ಲಿ ಕುಮ್ಕಿ ಆನೆಗಳ ಹಸ್ತಾಂತರದಿಂದ ರಾಜ್ಯಕ್ಕೂ ಪರೋಕ್ಷವಾಗಿ ಲಾಭವಾಗಲಿದೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.

n a rare and symbolic event, five elephants were handed over to the state of Andhra Pradesh at Karnataka’s seat of power, Vidhana Soudha. The ceremony was part of an inter-state initiative, with the majestic animals being officially transferred in the presence of dignitaries. Karnataka Chief Minister Siddaramaiah formally handed over the elephants to Andhra Pradesh Deputy Chief Minister Pawan Kalyan. Before the official proceedings, a traditional puja was performed for the elephants on the premises of Vidhana Soudha, adding a spiritual touch to the handover event.