BJP Chalavadi Narayanaswamy, Congress, Priyank Kharge: ಕಲಬುರಗಿಯಲ್ಲಿ ಚಲವಾದಿ ನಾರಾಯಣಸ್ವಾಮಿಗೆ ದಿಗ್ಬಂಧನ ; ನಾಲ್ವರು ಬಿಜೆಪಿ ಮುಖಂಡರಿಗೆ ಹಲ್ಲೆ, ಸಚಿವ ಪ್ರಿಯಾಂಕ ಖರ್ಗೆ ಬೆಂಬಲಿಗರಿಂದ ಹಲ್ಲೆ ಆರೋಪ, ರಾಜ್ಯಪಾಲರ ಭೇಟಿಯಾದ ಬಿಜೆಪಿ ನಿಯೋಗ 

22-05-25 06:31 pm       Bangalore Correspondent   ಕರ್ನಾಟಕ

ರಾಜ್ಯ ಬಿಜೆಪಿ ಎಸ್ ಸಿ ಮೋರ್ಚಾ ಉಪಾಧ್ಯಕ್ಷ ಅಂಬಾರಾಯ ಅಷ್ಟಗಿ ಮೇಲೆ ಸಚಿವ ಪ್ರಿಯಾಂಕ್​ ಖರ್ಗೆ ಅಭಿಮಾನಿಗಳು ಕಲಬುರಗಿಯಲ್ಲಿ ಹಲ್ಲೆಗೈದ ಆರೋಪ ಕೇಳಿಬಂದಿದೆ. ನಿನ್ನೆ ರಾತ್ರಿ ಕಲಬುರಗಿ ಜಿಲ್ಲೆಯ ಚಿತ್ತಾಪುರದ ಪ್ರವಾಸಿ ಮಂದಿರ ಮುಂಭಾಗದಲ್ಲಿ ಪರಿಷತ್ ವಿಪಕ್ಷ ನಾಯಕ ಚಲವಾದಿ ನಾರಾಯಣಸ್ವಾಮಿ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು ದಿಗ್ಬಂಧನ ಹಾಕಿದ್ದರು.

ಬೆಂಗಳೂರು, ಮೇ 22 : ರಾಜ್ಯ ಬಿಜೆಪಿ ಎಸ್ ಸಿ ಮೋರ್ಚಾ ಉಪಾಧ್ಯಕ್ಷ ಅಂಬಾರಾಯ ಅಷ್ಟಗಿ ಮೇಲೆ ಸಚಿವ ಪ್ರಿಯಾಂಕ್​ ಖರ್ಗೆ ಅಭಿಮಾನಿಗಳು ಕಲಬುರಗಿಯಲ್ಲಿ ಹಲ್ಲೆಗೈದ ಆರೋಪ ಕೇಳಿಬಂದಿದೆ. ನಿನ್ನೆ ರಾತ್ರಿ ಕಲಬುರಗಿ ಜಿಲ್ಲೆಯ ಚಿತ್ತಾಪುರದ ಪ್ರವಾಸಿ ಮಂದಿರ ಮುಂಭಾಗದಲ್ಲಿ ಪರಿಷತ್ ವಿಪಕ್ಷ ನಾಯಕ ಚಲವಾದಿ ನಾರಾಯಣಸ್ವಾಮಿ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು ದಿಗ್ಬಂಧನ ಹಾಕಿದ್ದರು. ಈ ವೇಳೆ, ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಾಟೆ ನಡೆದಿದ್ದು, ನಾಲ್ವರು ಬಿಜೆಪಿ ಮುಖಂಡರಿಗೆ ಹಲ್ಲೆ ಮಾಡಲಾಗಿದೆ. 

ರಾಜ್ಯ ಬಿಜೆಪಿ ಎಸ್ಸಿ ಮೋರ್ಚಾ ಉಪಾಧ್ಯಕ್ಷ ಅಂಬಾರಾಯ ಅಷ್ಟಗಿ ಮೇಲೆ ಸಚಿವ ಪ್ರಿಯಾಂಕ್​ ಖರ್ಗೆ ಅಭಿಮಾನಿಗಳು ಹಲ್ಲೆ ಮಡೆಸಿದ್ದಾರೆ. ಪೊಲೀಸರ ಎದುರೇ ನೂಕಾಟ-ತಳ್ಳಾಟ ನಡೆದಿದ್ದು ಅಂಬಾರಾಯ ಅಷ್ಟಗಿ ಅವರ ಜಾಕೆಟ್, ಶರ್ಟ್ ಹರಿದಿದ್ದಾರೆ. ಅಂಬಾರಾಯ ಅಷ್ಟಗಿ ಸೇರಿ ನಾಲ್ವರು ಬಿಜೆಪಿ ಮುಖಂಡರಿಗೆ ಹಲ್ಲೆ ಮಾಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. 

ಕಲಬುರಗಿಯಲ್ಲಿ ತಿರಂಗಾ ಯಾತ್ರೆಯಲ್ಲಿ ಪಾಲ್ಗೊಳ್ಳಲು ಚಲವಾದಿ ಅವರು ಚಿತ್ತಾಪುರದ ಪ್ರವಾಸಿ ಮಂದಿರಕ್ಕೆ ಆಗಮಿಸಿದ್ದರು. ಇದಕ್ಕೂ ಮುನ್ನ ಸುದ್ದಿಗೋಷ್ಟಿಯಲ್ಲಿ ಪ್ರಿಯಾಂಕ ಖರ್ಗೆ ವಿರುದ್ಧ ಹರಿಹಾಯ್ದಿದ್ದು ಪ್ರತಿ ಬಾರಿ ಪ್ರಧಾನಿ ಬಗ್ಗೆ ನಾಲಿಗೆ ಹರಿಯ ಬಿಡುತ್ತಾರೆ. ಇವರಿಗೆ ಪ್ರಶ್ನೆಗಳಿದ್ದರೆ ತಂದೆಗೆ ಹೇಳಲಿ, ಅವರು ಮೋದಿಗೆ ಕೇಳುತ್ತಾರೆ. ನಾಯಿ ಬೊಗಳುತ್ತೆ ಅಂತ ಆನೆ ಹೆದರಿ ಹೋಗಲ್ಲ. ಇಲ್ಲಿ ಬೊಗಳುತ್ತಿರುವವರು ನಾಯಿಗಳು ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಯಿಂದ ಆಕ್ರೋಶಗೊಂಡ  ಪ್ರಿಯಾಂಕ್ ಖರ್ಗೆ ಅಭಿಮಾನಿಗಳು ಛಲವಾದಿ ನಾರಾಯಣಸ್ವಾಮಿ ವಿರುದ್ದ ಪ್ರತಿಭಟನೆ ನಡೆಸುತ್ತಿದ್ದರು. ಐಬಿ ಒಳಗಡೆ ದಿಗ್ಬಂಧನ ಹಾಕಿ ಅಭಿಮಾನಿಗಳು ಪ್ರತಿಭಟನೆ ನಡೆಸುತ್ತಿದ್ದು, ಈ ವೇಳೆ ಬಿಜೆಪಿ ಮುಖಂಡರು ಸ್ಥಳಕ್ಕೆ ಆಗಮಿಸಿ, ಸಚಿವ ಪ್ರಿಯಾಂಕ ಖರ್ಗೆ ವಿರುದ್ಧ ಧಿಕ್ಕಾರ ಕೂಗಿ ಗಲಾಟೆ ಮಾಡಿದ್ದಾರೆ. 

ನಾಲ್ಕು ಗಂಟೆ ಕಾಲ ಐಬಿಯಲ್ಲಿ ದಿಗ್ಬಂಧನ ಹಾಕಿದ ಪ್ರಿಯಾಂಕ ಖರ್ಗೆ ಬೆಂಬಲಿಗರು, ಬಳಿಕ ಚಲವಾದಿ ನಾರಾಯಣಸ್ವಾಮಿ ಕಾರಿನ ಮೇಲೆ ನೀಲಿ ಬಣ್ಣ ಎರಚಿದ್ದಾರೆ. ಇದೇ ವೇಳೆ, ಛಲವಾದಿ ನಾರಾಯಣ ಸ್ವಾಮಿ ಅವರು ಪ್ರಿಯಾಂಕ್ ವಿರುದ್ಧ ಆ ರೀತಿಯ ಪದ ಬಳಕೆ ಮಾಡಿದ್ದಕ್ಕೆ ಕ್ಷಮೆ ಯಾಚಿಸಿದ್ದಾರೆ. ಗಾದೆ ಮಾತು ಹೇಳುವಾಗ ಪ್ರಿಯಾಂಕ್ ಅವರ ಹೆಸರನ್ನು ಉಲ್ಲೇಖಿಸಿದ್ದೆ. ಇದರಿಂದ ಸಚಿವರ ಮನಸ್ಸಿಗೆ ನೋವಾಗಿದ್ದರೆ ವಿಷಾಧಿಸುತ್ತೇನೆ ಎಂದಿದ್ದಾರೆ. 

ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಕಾರಿನ ಮೇಲೆ ಬಣ್ಣ ಸುರಿದು ಕಾಂಗ್ರೆಸ್ ಕಾರ್ಯಕರ್ತರು ನಡೆಸಿದ ದಾಂಧಲೆಯನ್ನು ರಾಜ್ಯ ಬಿಜೆಪಿ ನಾಯಕರು ಖಂಡಿಸಿದ್ದು, ಈ ಸಂಬಂಧ ಬಿಜೆಪಿ ನಿಯೋಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿದ್ದು, ಘಟನೆ ಸಂಬಂಧ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಮನವಿ ಮಾಡಿದ್ದಾರೆ. ಅಲ್ಲದೇ ಪ್ರಿಯಾಂಕ್ ಖರ್ಗೆ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕೆಂದು ಮನವಿ ಪತ್ರ ನೀಡಿದ್ದಾರೆ. ಆರ್.ಅಶೋಕ್, ಚಲವಾದಿ ನಾರಾಯಣಸ್ವಾಮಿ, ರವಿಕುಮಾರ್ ಇದ್ದರು. 

ಪ್ರಾಣ ಬೆದರಿಕೆ ಇದೆ, ನನಗೇನಾದ್ರು ಆದರೆ ಅವರೇ ಕಾರಣ..

ಇದೇ ವೇಳೆ ಮಾತನಾಡಿದ ಚಲವಾದು, ನೂರಕ್ಕೂ ಹೆಚ್ಚು ಗೂಂಡಾಗಳು ಸೇರಿ ನನಗೆ ಮಾರಣಾಂತಿಕ ಹಲ್ಲೆ ಮಾಡಲು ಮುಂದಾಗಿದ್ದರು. ನಮ್ಮ ಮಾಜಿ ಜಿಲ್ಲಾಧ್ಯಕ್ಷರ ಮೇಲೆ ಹಲ್ಲೆ ಮಾಡಿ 3 ಗಂಟೆ ವರೆಗೆ ಕೂಡಿ ಹಾಕಿದ್ದಾರೆ. ನಾನು ಅಮಿತ್ ಶಾ ಅವರಿಗೂ ಪತ್ರ ಬರೆಯುತ್ತೇನೆ. ತಕ್ಷಣ ಪ್ರಿಯಾಂಕ್ ಖರ್ಗೆಯವರನ್ನು ಸಿಎಂ ಸಂಪುಟದಿಂದ ಹೊರಗೆ ಹಾಕಬೇಕು. ನನಗೆ ಪ್ರಿಯಾಂಕ್ ಖರ್ಗೆಯಿಂದ ಪ್ರಾಣ ಬೆದರಿಕೆ ಇದೆ. ನನ್ನ ಪ್ರಾಣಕ್ಕೆ ಏನಾದರೂ ಆದ್ರೆ ಪ್ರಿಯಾಂಕ್ ಕಾರಣ. ನನ್ನನ್ನು ಮುಗಿಸುವ ಸಂಚು ಮಾಡಿದ್ದಾರೆ. ಅವರ ಸೈಟ್ ಪ್ರಕರಣ ಬಯಲಿಗೆ ತಂದ ನನ್ನ ವಿರುದ್ಧ ಪಿತೂರಿ ಮಾಡಿದ್ದಾರೆ. ಸಿದ್ದರಾಮಯ್ಯ ಕಾರಿಗೆ ಕೊಡಗಿನಲ್ಲಿ ಮೊಟ್ಟೆ ಬಿಸಾಕಿದಾಗ ಅವರು ಎಷ್ಟು ಮಾತಾಡಲಿಲ್ಲ? ಈಗ ಸಿದ್ದರಾಮಯ್ಯ ಯಾಕೆ ಸುಮ್ಮನಿದ್ದಾರೆ ಎಂದು ಪ್ರಶ್ನಿಸಿದರು.

Comparing Prime Minister Narendra Modi to an elephant and RDPR Minister Priyank Kharge to a “barking dog” put Council Opposition Leader Chalavadi Narayanaswamy in an embarrassing position in Kalaburagi on Wednesday