ಬ್ರೇಕಿಂಗ್ ನ್ಯೂಸ್
22-05-25 09:07 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.22: ರಾಮನಗರ ಜಿಲ್ಲೆಯನ್ನು ‘ಬೆಂಗಳೂರು ದಕ್ಷಿಣ ಜಿಲ್ಲೆ’ ಎಂದು ಮರು ನಾಮಕರಣ ಮಾಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಆಮೂಲಕ ಕೇಂದ್ರ ಸಚಿವ ಕುಮಾರಸ್ವಾಮಿ ವಿರೋಧಿಸಿದರೂ ಡಿಕೆ ಶಿವಕುಮಾರ್ ಹಠ ಹಿಡಿದು ಗುರಿ ಸಾಧನೆ ಮಾಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಸುದ್ದಿ ಮಾಧ್ಯಮಕ್ಕೆ ಮಾತನಾಡಿದ ಡಿಸಿಎಂ, ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರು ನಾಮಕರಣ ಮಾಡುವ ಬಗ್ಗೆ ತೀರ್ಮಾನವಾಗಿದೆ. ರಾಮನಗರವೇ ಜಿಲ್ಲಾ ಕೇಂದ್ರ ಸ್ಥಾನ ಆಗಿರಲಿದೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ. ಜಿಲ್ಲೆಯ ಹೆಸರನ್ನು ಮಾತ್ರ ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲಾಗುವುದು ಎಂದು ಹೇಳಿದರು.

2025ನೇ ಸಾಲಿನ ಪ್ರತಿಷ್ಠಿತ ಬೂಕರ್ ಪ್ರಶಸ್ತಿ ಪಡೆದ ಕನ್ನಡದ ಖ್ಯಾತ ಲೇಖಕಿ ಬಾನು ಮುಷ್ತಾಕ್ ಅವರಿಗೆ ಬಿಡಿಎನಲ್ಲಿ ಜಿ ಕೆಟಗರಿ ನಿವೇಶನ ನೀಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಇದೇ ವೇಳೆ ಅವರು ತಿಳಿಸಿದರು. ಅಲ್ಲದೆ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ನಾಗರಿಕ ಸೌಲಭ್ಯ ನಿವೇಶನ ಹಂಚಿಕೆ) ನಿಯಮಗಳು, 1989 ಅನ್ನು ಸಡಿಲಿಕೆ ಮಾಡಲಾಗಿದೆ. ಅದರ ಪ್ರಕಾರ, ಒಂದು ಬಾರಿಯ ಕ್ರಮವಾಗಿ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ನಾಗರಿಕ ಸೌಲಭ್ಯ ನಿವೇಶನ ಹಂಚಿಕೆ ಪಡೆದಿರುವ ವಿವಿಧ ಸಂಘ/ಸಂಸ್ಥೆಗಳು ಬಾಕಿ ಉಳಿಸಿರುವ ಸಂಪೂರ್ಣ ಗುತ್ತಿಗೆ ಮೌಲ್ಯವನ್ನು ಪ್ರಾಧಿಕಾರವು ಪ್ರಕಟಣೆ ನೀಡಿದ 120 ದಿನಗಳೊಳಗೆ ಪಾವತಿಸಿದರೆ, ನಿಯಮಾನುಸಾರ ವಿಧಿಸಲಾಗುವ ಬಡ್ಡಿಯ ಮೊತ್ತವನ್ನು ಸಂಪೂರ್ಣ ಮನ್ನಾ ಮಾಡಲು ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ಡಿಸಿಎಂ ತಿಳಿಸಿದರು.
ಬೆಂಗಳೂರು ಮೆಟ್ರೋ ರೈಲು ಹಂತ-3 ಯೋಜನೆಯ 40,425.02 ಕೋಟಿ ರೂ.ಗಳ ಪರಿಷ್ಕೃತ ಅಂದಾಜಿಗೆ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಡಿ.ಕೆ.ಶಿವಕುಮಾರ್ ವಿವರ ನೀಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ಉತ್ಪತಿಯಾಗುವ ಹಸಿ ತ್ಯಾಜ್ಯ, ಒಣ ತ್ಯಾಜ್ಯ, ನೈರ್ಮಲ್ಯ ತ್ಯಾಜ್ಯ ಮತ್ತು ರಸ್ತೆ ತ್ಯಾಜ್ಯದ ಸಂಗ್ರಹಣೆ ಹಾಗೂ ಸಾಗಾಣಿಕೆ ಸೇವೆಗಾಗಿ 7 ವರ್ಷಗಳ ಅವಧಿಗೆ 4,791.95 ಕೋಟಿ ರೂ. ಅಂದಾಜು ಮೊತ್ತದಲ್ಲಿ 33 ಪ್ಯಾಕೇಜ್ ಗಳಾಗಿ ವಿಂಗಡಿಸಿ, ಟೆಂಡರ್ ಮೂಲಕ ಗುತ್ತಿಗೆ ನೀಡಲು ಆಡಳಿತಾತ್ಮಕ ಅನುಮೋದನೆ ಸಿಕ್ಕಿದೆ ಎಂದು ಡಿಸಿಎಂ ತಿಳಿಸಿದರು.
The state cabinet has decided that the Ramanagara district will be renamed as Bengaluru South from Thursday.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm