ಬ್ರೇಕಿಂಗ್ ನ್ಯೂಸ್
23-05-25 02:35 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 23 : ರಾಜ್ಯದಲ್ಲಿ ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ಮುಂದಿನ ಅಕ್ಟೋಬರ್, ನವೆಂಬರ್ ತಿಂಗಳ ವೇಳೆಗೆ ನಡೆಯುವ ಸಾಧ್ಯತೆ ಇದೆ ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿಎಸ್ ಸಂಗ್ರೇಶಿ ತಿಳಿಸಿದ್ದಾರೆ.
ತಿಪಟೂರಿನಲ್ಲಿ ಸುದ್ದಿಗಾರರ ಪ್ರಶ್ನೆಗೆ ಮಾಹಿತಿ ನೀಡಿದ್ದು, ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳಿಗೆ ಸರಕಾರ ಮೀಸಲಾತಿ ನಿಗದಿಪಡಿಸಿ ಪಟ್ಟಿಯನ್ನು ನೀಡಬೇಕಿದೆ. ಇದೇ ಮೇ 30ರ ಒಳಗೆ ಸರಕಾರ ಮೀಸಲಾತಿ ಪಟ್ಟಿಯನ್ನು ಆಯೋಗಕ್ಕೆ ನೀಡುವುವಾಗಿ ತಿಳಿಸಿದ್ದು ಅದಕ್ಕಾಗಿ ಕಾಯುತ್ತಿದ್ದೇವೆ. ಮೀಸಲಾತಿ ಪಟ್ಟಿ ನೀಡಿದ ಕೂಡಲೇ ಸಿದ್ಧತೆ ಪ್ರಾರಂಭಿಸುತ್ತೇವೆ. ಸಿದ್ಧತೆ ಹಾಗೂ ಚುನಾವಣಾ ತಯಾರಿಗಾಗಿ 2-3 ತಿಂಗಳು ಬೇಕಾಗುತ್ತದೆ. ಅಂದಾಜು ದಸರಾ ನಂತರ ನವೆಂಬರ್‌ನಲ್ಲಿ ಜಿಪಂ, ತಾಪಂ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ಹೇಳಿದರು.
ಕೆಲವು ದಿನಗಳ ಹಿಂದೆ ಕಾಂಗ್ರೆಸ್ ಕಾರ್ಯಕರ್ತರ ಜೊತೆಗೆ ಮಾತನಾಡುತ್ತ ಡಿಸಿಎಂ ಡಿ.ಕೆ. ಶಿವಕುಮಾರ್, "ನೀವು ವಿಧಾನಸಭಾ ಚುನಾವಣೆಗೆ ದುಡಿದಿದ್ದೀರಿ, ಲೋಕಸಭಾ ಚುನಾವಣೆಗೆ ಸಹ ಶ್ರಮಿಸಿದ್ದೀರಿ. ಸ್ಥಳೀಯ ಸಂಸ್ಥೆಗಳ ಚುನಾವಣೆಯ ಇರುವುದರಿಂದ ಇನ್ನಷ್ಟು ಚುರುಕಿನಿಂದ ಕೆಲಸಕ್ಕೆ ಮುಂದಾಗಬೇಕು " ಎಂದು ಹೇಳಿದ್ದರು. ಶೀಘ್ರವೇ ಮೀಸಲಾತಿ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗುವುದು ಎಂದೂ ತಿಳಿಸಿದ್ದರು.
ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಸದಸ್ಯ ಸ್ಥಾನಗಳ ಅವಧಿ ಮುಕ್ತಾಯಗೊಂಡು ಸಾಕಷ್ಟು ಸಮಯವಾಗಿದ್ದು, ಗ್ರಾಮೀಣ ಭಾಗದಲ್ಲಿ ಜನ ಚುನಾವಣೆ ಎದುರು ನೋಡುತ್ತಿದ್ದಾರೆ. ಇದೇ ವೇಳೆ, ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್‌ನಿಂದ ಆಕಾಂಕ್ಷಿಗಳು ನೆಟ್ಟಗಾಗಿದ್ದು ಸ್ಥಳೀಯ ಮಟ್ಟದಲ್ಲಿ ವರ್ಚಸ್ಸು ಹೆಚ್ಚಿಸಿಕೊಳ್ಳಲು ತಯಾರಿ ಮಾಡುತ್ತಿದ್ದಾರೆ.
State Election Commission Commissioner GS Sangreshi said that the Taluk Panchayat and Zilla Panchayat elections in the state are likely to be held in October-November.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm