ಬ್ರೇಕಿಂಗ್ ನ್ಯೂಸ್
24-05-25 06:04 pm HK News Desk ಕರ್ನಾಟಕ
ಕಾರವಾರ, ಮೇ 24 : ಕಳೆದ ವರ್ಷ ಜುಲೈನಲ್ಲಿ ಭೀಕರ ಗುಡ್ಡ ಕುಸಿತಕ್ಕೆ ಸಾಕ್ಷಿಯಾಗಿದ್ದ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ಈ ಬಾರಿಯೂ ಗುಡ್ಡ ಕುಸಿತದ ಆತಂಕ ಉಂಟಾಗಿದೆ. ಹೀಗಾಗಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಅವರು ಮಳೆ ಆರಂಭವಾಗುತ್ತಲೇ ಎಚ್ಚರಿಕೆ ರವಾನಿಸಿದ್ದಾರೆ. ಶಿರೂರು ಭಾಗದಲ್ಲಿ ಗುಡ್ಡ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಗ್ರಾಮದ ಜನರು ಗುಡ್ಡದ ಸಮೀಪ ನಿಲ್ಲದಂತೆ ಮತ್ತು ಪ್ರವಾಸಿಗರು ಫೋಟೊ ಶೂಟ್ ಮಾಡದಂತೆ ಸೂಚನೆ ನೀಡಿದ್ದಾರೆ.
ಇದಲ್ಲದೆ, ಶಿರೂರು ಗುಡ್ಡದ ಪಕ್ಕದಲ್ಲೇ ಹರಿಯುವ ಗಂಗಾವಳಿ ನದಿಯಲ್ಲಿ ಮೀನುಗಾರಿಕೆ ನಡೆಸದಂತೆ ಹಾಗೂ ಸಾರ್ವಜನಿಕರು ನದಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ. ಕಳೆದ ವರ್ಷ ಜುಲೈ 16ರಂದು ಶಿರೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ ಸಹಿತ ಗುಡ್ಡ ಕುಸಿತು ಬಿದ್ದು 11 ಜನ ಮೃತಪಟ್ಟಿದ್ದರು. ಘಟನೆಯಲ್ಲಿ ಇಬ್ಬರ ಶವವೂ ಪತ್ತೆಯಾಗಿರಲಿಲ್ಲ. ಗುಡ್ಡ ಕುಸಿದು ಪಕ್ಕದಲ್ಲಿ ಹರಿಯುವ ಗಂಗಾವಳಿ ನದಿಯ ಮೇಲೆ ಬಿದ್ದಿದ್ದು, ಅಲ್ಲಿ ಬಿದ್ದ ಮಣ್ಣನ್ನು ಮೇಲೆತ್ತಿಲ್ಲ. ಹೀಗಾಗಿ ನದಿಯಲ್ಲಿ ಉದ್ದಕ್ಕೂ ಹೂಳು ತುಂಬಿದ್ದು, ಮತ್ತೊಂದು ಭಾಗದಲ್ಲಿ ಗುಡ್ಡ ಕುಸಿಯುತ್ತಿರುವುದರಿಂದ ಜನರು ಆ ಕಡೆ ಹೋಗದಂತೆ ಎಚ್ಚರಿಕೆ ನೀಡಲಾಗಿದೆ.


ಸದ್ರಿ ಸ್ಥಳಕ್ಕೆ ಸ್ಥಳೀಯ ತಹಸೀಲ್ದಾರ್ ನೇತೃತ್ವದಲ್ಲಿ ಅಧಿಕಾರಿಗಳು ಭೇಟಿ ನೀಡಿದ್ದು, ಗುಡ್ಡದಲ್ಲಿ ಮಣ್ಣು ಸಡಿಲಗೊಂಡು ಕುಸಿಯುತ್ತಿರುವುದನ್ನು ಪತ್ತೆ ಮಾಡಿದ್ದಾರೆ. ಹೀಗಾಗಿ ಈ ಪ್ರದೇಶದಲ್ಲಿ ಭೂಕುಸಿತ ಸಾಧ್ಯತೆ ಇರುವುದಾಗಿ ಜಿಲ್ಲಾಡಳಿತಕ್ಕೆ ವರದಿ ನೀಡಿದ್ದಾರೆ. ಪ್ರಸ್ತುತ ಸ್ಥಳದಲ್ಲಿ ಹಲವಾರು ಟ್ರಕ್ ಗಳು ನಿಲ್ಲುತ್ತಿದ್ದು, ಸಾರ್ವಜನಿಕರು ಗುಡ್ಡದಿಂದ ನದಿಯತ್ತ ಮುಖ ಮಾಡಿ ಫೋಟೋಗಳನ್ನು ತೆಗೆಯುವುದು, ನದಿಯ ನೀರಿನಲ್ಲಿ ಸ್ನಾನ ಮಾಡುವುದು, ವಾಹನ ನಿಲ್ಲಿಸಿ ವಿಶ್ರಾಂತಿ ಪಡೆಯುವುದನ್ನು ಮಾಡುತ್ತಿದ್ದಾರೆ.
ಸದ್ಯಕ್ಕೆ ಮುಂಗಾರು ಎಂಟ್ರಿಯಾಗುತ್ತಿರುವ ಹೊತ್ತಲ್ಲಿ ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ನೀಡಲಾಗಿದ್ದು, ಶಿರೂರು ಗ್ರಾಮದ ಪ್ರದೇಶವನ್ನು ಅಪಾಯಕಾರಿ ವಲಯವೆಂದು ವಿಪತ್ತು ನಿರ್ವಹಣಾ ಕಾಯ್ದೆಯಡಿ ಘೋಷಿಸಲಾಗಿದೆ. ಹೀಗಾಗಿ ಗಂಗಾವಳಿ ನದಿಯಲ್ಲಿ ಮೀನುಗಾರಿಕೆ ನಡೆಸುವುದು, ಸಾರ್ವಜನಿಕರು ನಿಂತು ಫೋಟೋ ಶೂಟ್ ಮಾಡುವುದು, ವಾಹನಗಳನ್ನು ನಿಲ್ಲಿಸಿ ವಿಶ್ರಾಂತಿ ಪಡೆಯುವುದನ್ನು ಮಳೆಗಾಲ ಮುಗಿಯುವ ವರೆಗೂ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
Landslide Threat Returns in Shirur; Declared Danger Zone, Public Entry and Photo Shoots Banned by DC
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
26-10-25 04:42 pm
Mangalore Correspondent
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm