ಬ್ರೇಕಿಂಗ್ ನ್ಯೂಸ್
25-05-25 08:48 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 25 : ಬಿಜೆಪಿಯ 18 ಶಾಸಕರ ಅಮಾನತು ಆದೇಶವನ್ನು ಹಿಂಪಡೆಯಲು ನಿರ್ಧರಿಸಲಾಗಿದೆ ಎಂದು ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ತಿಳಿಸಿದ್ದಾರೆ. ಈ ಬಗ್ಗೆ ಸ್ಪೀಕರ್ ಮತ್ತು ಸಿಎಂ ನೇತೃತ್ವದಲ್ಲಿ ನಡೆದ ಸಂಧಾನ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
ವಿಧಾನಸಭೆಯಲ್ಲಿ ಸ್ಪೀಕರ್ ಕುರ್ಚಿಗೆ ಅಗೌರವ ತೋರಿಸಿದ ಮತ್ತು ಮಸೂದೆಯ ಪ್ರತಿಗಳನ್ನು ಹರಿದು ಅವರ ಮೇಲೆ ಎಸೆದ ಆರೋಪದಲ್ಲಿ 18 ಬಿಜೆಪಿ ಶಾಸಕರನ್ನು ವಿಧಾನಸಭೆಯಿಂದ ಆರು ತಿಂಗಳ ಕಾಲ ಅಮಾನತು ಮಾಡಲಾಗಿತ್ತು. ಈ ಬಗ್ಗೆ ಬಿಜೆಪಿ ಶಾಸಕರು ಮತ್ತು ಇತರ ಹಿರಿಯ ನಾಯಕರು ತೀವ್ರ ಅಸಮಾಧಾನ ಹೊರಹಾಕಿದ್ದರು.
ಇಂದು ಸಭೆಯ ಬಳಿಕ ಮಾಧ್ಯಮಕ್ಕೆ ಮಾಹಿತಿ ನೀಡಿದ ಅವರು, ಘಟನೆ ಬಗ್ಗೆ ಎಲ್ಲ ಶಾಸಕರು ವಿಷಾದ ವ್ಯಕ್ತಪಡಿಸಿದ್ದಾರೆ. ವಿಪಕ್ಷ ನಾಯಕರು ಕೂಡ ನನಗೆ ಮನವಿ ಸಲ್ಲಿಸಿದ್ದರು. ಇನ್ಮುಂದೆ ಹೀಗಾಗದಂತೆ ನೋಡಿಕೊಳ್ಳುವುದಾಗಿ ಭರವಸೆ ನೀಡಿದ್ದಾರೆ. 18 ಶಾಸಕರನ್ನು ಅಮಾನತು ಮಾಡಿ ಎರಡು ತಿಂಗಳಾಗಿದೆ. ಈಗ ಅಮಾನತು ಆದೇಶ ಹಿಂಪಡೆದಿದ್ದೇನೆ. ಯಾವುದೇ ಷರತ್ತು ಇಲ್ಲ, ಎಲ್ಲರೂ ನಮ್ಮ ಮಿತ್ರರು. ಆ ಸಮಯದಲ್ಲಿ ದುರ್ನಡತೆ ತೋರಿದ್ದಕ್ಕೆ ಕ್ರಮ ಕೈಗೊಂಡಿದ್ದೆವು ಎಂದು ಸ್ಪೀಕರ್ ಯು.ಟಿ.ಖಾದರ್ ಹೇಳಿದ್ದಾರೆ.
ಸಂಧಾನ ಸಭೆ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಆರ್. ಅಶೋಕ್, ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ, ಕಾನೂನು ಸಚಿವ ಎಚ್.ಕೆ.ಪಾಟೀಲ್ ಭಾಗಿಯಾಗಿದ್ದರು. ಸ್ಪೀಕರ್ ಖಾದರ್ ಇಂದು ರಾತ್ರಿಯೇ ಹಜ್ ಯಾತ್ರೆ ಕೈಗೊಳ್ಳಲಿದ್ದು ಅದಕ್ಕೂ ಮೊದಲೇ ಬಿಜೆಪಿಗೆ ಸಿಹಿಸುದ್ದಿ ನೀಡಿದಂತಾಗಿದೆ.
The state government has withdrawn suspension orders of 18 BJP MLAs on Sunday, May 25. This decision was taken in a mediation meeting held under the chairmanship of Assembly Speaker U.T. Khader.
07-09-25 10:17 am
Bangalore Correspondent
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
Sonia Gandhi, Dharmasthala: Who Killed the Wo...
05-09-25 11:15 pm
06-09-25 10:34 am
HK News Desk
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
07-09-25 02:25 pm
Mangalore Correspondent
Ullal, Mangalore Police: ಮೊದಲ ಪತ್ನಿಗೆ ಜೀವನಾಂಶ...
06-09-25 10:59 pm
Mangalore, Dharmasthala, Vittal Gowda, Skull:...
06-09-25 10:15 pm
ಗೋಮಾಂಸ ಭಕ್ಷಕರಿಗೆ ರಾಜ್ಯ ಸರ್ಕಾರ ಶಾದಿ ಭಾಗ್ಯ ರೀತಿ...
06-09-25 05:56 pm
Mla Vedavyas Kamath, Mangalore: ಮಳೆಗೆ ಹದಗೆಟ್ಟ...
06-09-25 04:46 pm
06-09-25 08:32 pm
Bangalore Correspondent
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm
ಮುಂಬೈಗೆ 14 ಲಷ್ಕರ್ ಉಗ್ರರ ಎಂಟ್ರಿ ಬೆದರಿಕೆ ! 400...
06-09-25 10:37 am