ಬ್ರೇಕಿಂಗ್ ನ್ಯೂಸ್
31-05-25 09:41 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.31: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಬೆನ್ನಲ್ಲೇ ರಹೀಂ ಎಂಬಾತನ ಕೊಲೆ ನಡೆದಿದೆ. ಕೆಲವೇ ತಿಂಗಳ ಅಂತರದಲ್ಲಿ ಹಲವು ಕೊಲೆಗಳು ನಡೆದಿವೆ. ಹೀಗಿರುವಾಗ ಸರ್ಕಾರ ಇದನ್ನು ತಡೆಯುತ್ತಿಲ್ಲ ಯಾಕೆ, ಇದನ್ನೂ ರಾಜಕೀಯಕ್ಕೆ ಕೂಳು ಬೇಯಿಸಿಕೊಳ್ಳುತ್ತಿದೆಯಾ ಎಂದು ಗಂಭೀರ ಆರೋಪವನ್ನು ಕೇಂದ್ರ ಸಚಿವ , ಜೆಡಿಎಸ್ ಮುಖಂಡ ಎಚ್ ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಒಂದೆಡೆ ನಿರಂತರ ಮಳೆ ಅವಾಂತರ, ಇನ್ನೊಂದೆಡೆ ಕೊಲೆಗಳು, ಇದ್ಯಾವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸುತ್ತಿಲ್ಲ, ಜನರ ಕಣ್ಣಲ್ಲಿ ರಕ್ತಕಣ್ಣೀರು ನೋಡಲು ಸರ್ಕಾರ ಹಪಹಪಿಸುತ್ತಿದೆ ಎಂದು ಕಿಡಿಕಾರಿದ್ದಾರೆ.
ಕರಾವಳಿ ಭಾಗ ಸೇರಿ ರಾಜ್ಯದ ಉದ್ದಗಲಕ್ಕೂ ನಿರಂತರ ಧಾರಾಕಾರ ಮಳೆ ಜನಜೀವನವನ್ನು ಛಿದ್ರಗೊಳಿಸಿದೆ. ಜನ ಕಣ್ಣೀರಿನಲ್ಲಿ ಕೈ ತೊಳೆಯುತ್ತಿದ್ದಾರೆ. ಜವಾಬ್ದಾರಿಯುತವಾಗಿ ವರ್ತಿಸಬೇಕಿದ್ದ ರಾಜ್ಯ ಕಾಂಗ್ರೆಸ್ ಸರಕಾರ, ಕರಾವಳಿಗರ ಕಣ್ಣೀರು ಒರೆಸುವ ಬದಲು ಅವರ ಕಣ್ಣಲ್ಲಿ 'ರಕ್ತಕಣ್ಣೀರು' ಸುರಿಯಲಿ ಎಂದು ಹಪಾಹಪಿಸುತ್ತಿದೆ!
ಮನೆ, ರಸ್ತೆ, ಸೇತುವೆಗಳು ಕುಸಿದಿವೆ. ನಗರ, ಪಟ್ಟಣ, ಹಳ್ಳಿಗಳು ಜಲದಿಗ್ಬಂಧನಕ್ಕೆ ಸಿಲುಕಿ ಜನ ವಿಲವಿಲವೆನ್ನುತ್ತಿದ್ದಾರೆ. ಮೂರಾಬಟ್ಟೆಯಾಗಿರುವ ಅವರ ಬದುಕಿನ ರಕ್ಷಣೆಗೆ ಸರಕಾರದ ಕ್ರಮವೇನು?
'ಕೋಟೆ ಕೊಳ್ಳೆ ಹೋದ ಮೇಲೆ ದಿಡ್ಡಿ ಬಾಗಿಲು ಬಡಿದುಕೊಂಡರು' ಎನ್ನುವಂತೆ ಮಳೆಯಲ್ಲಿ ಬದುಕು ಕೊಚ್ಚಿಹೋದ ಮೇಲೆ ಸಚಿವರಿಗೆ ಹೋಗಿ ಎಂದು ಮುಖ್ಯಮಂತ್ರಿ ಅಪ್ಪಣೆ ಕೊಟ್ಟರೆ ಫಲವೇನು? ಮಳೆ ಬರುವ ಮೊದಲು ಏನು ಮಾಡಿದ್ದೀರಿ? ಇದೇನಾ ಜನಪರ ಆಡಳಿತ? ನುಡಿದಂತೆ ನಡೆಯುವುದು ಎಂದರೆ ಹೀಗೆನಾ?
ಕಾಂಗ್ರೆಸ್ ಸರಕಾರಕ್ಕೆ ಕರಾವಳಿ ಮಳೆ ಬಗ್ಗೆ ಚಿಂತೆ ಇಲ್ಲ. ಆದರೆ, ಕರಾವಳಿ ಕೊಲೆಗಳ ಬಗ್ಗೆ ಎಲ್ಲಿಲ್ಲದ ಕಾಳಜಿ. ಆ ಕಾಳಜಿ ಕೊಲೆಗಳನ್ನು ಹತ್ತಿಕ್ಕಲಿಕ್ಕಲ್ಲ, ಕೊಲೆಗಳಲ್ಲೂ 'ರಾಜಕೀಯ ಕೂಳು' ಬೇಯಿಸಿಕೊಳ್ಳಲು!
ಸಿದ್ದರಾಮಯ್ಯನವರೇ, ಎರಡು ವರ್ಷದಿಂದ ಅಧಿಕಾರದಲ್ಲಿದ್ದೀರಿ. ಅನ್ಯಪಕ್ಷಗಳನ್ನು ದೂರುತ್ತಾ ಕಾಲಹರಣ ಮಾಡುತ್ತಿದ್ದೀರಿ. ನೀವು ಅಧಿಕಾರಕ್ಕೆ ಬಂದ ಮೇಲೆ ಕರಾವಳಿ ಭಾಗದಲ್ಲಿ ಎಷ್ಟು ಹತ್ಯೆಗಳಾದವು? ಅವನ್ನು ಹತ್ತಿಕ್ಕಲಿಲ್ಲ ಯಾಕೆ? ಒಂದು ಸಮುದಾಯ ನಿಮ್ಮ ಪಕ್ಷಕ್ಕೆ ನೂರಕ್ಕೆ ನೂರರಷ್ಟು ವೋಟು ಕೊಟ್ಟಿದೆಯಲ್ಲವೇ? ಅವರನ್ನು ರಕ್ಷಿಸಲು ವಿಫಲರಾಗಿರುವ ನೀವು, ಇತರೆ ಕೋಮುಗಳ ಮೇಲೆ ವಿಷ ಕಕ್ಕುತ್ತಿದ್ದೀರಿ!!
ಸರ್ವ ಜನಾಂಗದ ಶಾಂತಿಯ ತೋಟವನ್ನು ವಿಷ ಸರ್ಪಗಳ ತೋಟವನ್ನಾಗಿ ಪರಿವರ್ತಿಸಿದ್ದೀರಿ. ಸಿದ್ದರಾಮಯ್ಯನವರೇ, ನೀವೂ ಮತ್ತು ನಿಮ್ಮ ಸಂಗಡಿಗರ ಸದಾರಮೆ ಸಾಕು. ಕೂಡಲೇ ಕರಾವಳಿಗೆ ಭೇಟಿ ನೀಡಿ. ಮಳೆ, ಕೊಲೆಗಳಿಂದ ತತ್ತರಿಸಿರುವ ಅಲ್ಲಿನ ಜನತೆಗೆ ಧೈರ್ಯ ತುಂಬಿ. ಪ್ರಕೃತಿ ಪ್ರೇರಿತ ಮಳೆ ವಿಕೋಪ, ನಿಮ್ಮ ಪಕ್ಷ ಪ್ರೇಷಿತ 'ಕೊಲೆ ವಿಕೋಪ'ಕ್ಕೆ ಪರಿಹಾರ ಕಂಡುಕೊಳ್ಳಿ. ಮುಖ್ಯಮಂತ್ರಿಯಾಗಿ ಇದು ನಿಮ್ಮ ತಕ್ಷಣದ ಕರ್ತವ್ಯ. ಎಂದು ಕಿಡಿಕಾರಿದ್ದಾರೆ.
Siddaramaiah, Stand with Mangalore People Amid Rains, Killings, Kumaraswamy Slams Govt.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
26-10-25 04:42 pm
Mangalore Correspondent
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm