ಬ್ರೇಕಿಂಗ್ ನ್ಯೂಸ್
01-06-25 08:33 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 1 : ಎಚ್ಎಂಟಿ ಅಧೀನದಲ್ಲಿದ್ದ ಅರಣ್ಯ ಭೂಮಿಯನ್ನು ಕಾನೂನಿಗೆ ವಿರುದ್ಧವಾಗಿ ವಾಣಿಜ್ಯ ಉದ್ದೇಶಕ್ಕಾಗಿ ಪರಿವರ್ತಿಸಿದ ಆರೋಪದಲ್ಲಿ ಇಬ್ಬರು ಐಎಫ್ಎಸ್ ಅಧಿಕಾರಿಗಳನ್ನು ಅಮಾನತುಗೊಳಿಸಲು ಮತ್ತು ಇಬ್ಬರು ನಿವೃತ್ತ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿಗಳಿಗೆ ಶಿಫಾರಸು ಮಾಡಿರುವುದಾಗಿ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್‌ಎಂಟಿ ವಶದಲ್ಲಿರುವ ಭೂಮಿ, ಅರಣ್ಯೇತರ ಉದ್ದೇಶಕ್ಕೆ ಪರಿವರ್ತನೆ ಆಗಿಲ್ಲ. ಹೀಗಾಗಿ ಅರಣ್ಯ ಸಂರಕ್ಷಣಾ ಕಾಯಿದೆ 1980ರ ಪ್ರಕಾರ ಇಂದಿಗೂ ಇದು ಅರಣ್ಯವೇ ಆಗಿರುತ್ತದೆ. ಈ ಭೂಮಿ ಪರಭಾರೆ ಆಗಿದ್ದು ರಿಯಲ್ ಎಸ್ಟೇಟ್ ಸಂಸ್ಥೆಗಳು ನೂರಾರು ಫ್ಲಾಟ್ ಗಳನ್ನು ಕಟ್ಟಿದ್ದಾರೆ. ವಾಣಿಜ್ಯ ಉದ್ದೇಶಕ್ಕೆ ಸದ್ರಿ ಭೂಮಿ ಬಳಕೆ ಆಗುತ್ತಿದೆ. ಇದಕ್ಕೆ ಹೇಗೆ ಅವಕಾಶ ನೀಡಲಾಗಿದೆ ಎಂಬುದೇ ಪ್ರಶ್ನಾರ್ಥಕ ಎಂದು ಹೇಳಿದರು.
ಹೆಚ್ಎಂಟಿ ವಶದಲ್ಲಿರುವ ಅರಣ್ಯ ಭೂಮಿ 7 ಕೋಟಿ ಕನ್ನಡಿಗರ ಆಸ್ತಿ. ಇದನ್ನು ಕೆಲವೇ ಕೆಲವು ಅಧಿಕಾರಿಗಳು ಅಂದಿನ ಅರಣ್ಯ ಸಚಿವರ ಗಮನಕ್ಕೂ ತಾರದೆ, ಸಚಿವ ಸಂಪುಟದ ಪೂರ್ವಾನುಮತಿ ಪಡೆಯದೆ ಡಿನೋಟಿಫಿಕೇಷನ್ಗೆ ಅರ್ಜಿ ಸಲ್ಲಿಸಿದ್ದರು. ಇಬ್ಬರು ನಿವೃತ್ತ ಮತ್ತು ಇಬ್ಬರು ಹಾಲಿ ಸೇರಿ ನಾಲ್ಕು ಅಧಿಕಾರಿಗಳಿಗೆ ನೋಟಿಸ್ ನೀಡಿದ್ದು, ಕ್ರಮ ಕೈಗೊಳ್ಳಲು ಮುಖ್ಯಮಂತ್ರಿಗಳಿಗೆ ಶಿಫಾರಸು ಮಾಡಿರುವುದಾಗಿ ತಿಳಿಸಿದರು.
ಇದೇ ವೇಳೆ, ಆರೋಪಕ್ಕೀಡಾದ ಅಪರ ಮುಖ್ಯ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಆರ್.ಗೋಕುಲ್, ಬೇಲೆಕೇರಿ ಅದಿರು ಪ್ರಕರಣದಲ್ಲಿ ಆಡಳಿತ ಪಕ್ಷದ ಶಾಸಕರಿಗೆ ಶಿಕ್ಷೆ ಆಗುವಂತೆ ಮಾಡಿದ್ದಕ್ಕಾಗಿ ತನ್ನನ್ನು ಟಾರ್ಗೆಟ್ ಮಾಡಿ, ಬಲಿ ಪಶು ಮಾಡಲಾಗುತ್ತಿದೆ ಎಂದು ಆರೋಪಿಸಿದ್ದು ರಕ್ಷಣೆ ಕೋರಿ ಸಿಬಿಐಗೆ ಪತ್ರ ಬರೆದಿದ್ದಾರೆ. ಆದರೆ ಈ ಆರೋಪವನ್ನು ಸಚಿವ ಖಂಡ್ರೆ ನಿರಾಕರಿಸಿದ್ದಾರೆ.
ಎಚ್ಎಂಟಿ ಭೂಮಿ ವಿಚಾರದಲ್ಲಿ 2024ರ ಸೆಪ್ಟೆಂಬರ್ 24ರಂದು ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಲಿಖಿತ ಟಿಪ್ಪಣಿ ಕಳಿಸಿದ್ದು, ಸಚಿವ ಸಂಪುಟದ ಪೂರ್ವಾನುಮತಿ ಇಲ್ಲದೆ ಐಎ ಕೊಟ್ಟಿರುವ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ನೀಡಿ ಕ್ರಮ ಜರುಗಿಸುವಂತೆ ಸೂಚಿಸಿದ್ದೆ. ಅದಾಗಿ, ಒಂದು ತಿಂಗಳ ನಂತರ ಅಕ್ಟೋಬರ್ 2024ರಲ್ಲಿ ಬೇಲೆಕೇರಿ ತೀರ್ಪು ಬಂದಿತ್ತು. ಅಧಿಕಾರಿ ಗೋಕುಲ್ ತನ್ನ ತಪ್ಪು ಮುಚ್ಚಿಕೊಳ್ಳಲು ಸರ್ಕಾರದ ವಿರುದ್ಧ ಸಿಬಿಐಗೆ ಸುಳ್ಳು ಆರೋಪ ಮಾಡಿದ್ದಾರೆ. ಇದು ಕೂಡ ಅಧಿಕಾರಿಯ ದುರ್ವರ್ತನೆ ಆಗುತ್ತದೆ ಎಂದು ಹೇಳಿದರು.
ಹೆಚ್‌ಎಂಟಿ ಅರಣ್ಯ ಭೂಮಿ ಪ್ರದೇಶಕ್ಕೆ ಸ್ವತಃ ತಾವೇ ಖುದ್ದು ಭೇಟಿ ನೀಡಿ, ಅಲ್ಲಿ ಇಂದಿಗೂ 280 ಎಕರೆಯಷ್ಟು ನೆಡುತೋಪು ಇದೆ. ಅದಾಗ್ಯೂ, ಸದರಿ ಭೂಮಿ ಅರಣ್ಯ ಸ್ವರೂಪ ಕಳೆದುಕೊಂಡಿದೆ ಎಂದು ಸುಪ್ರೀಂಕೋರ್ಟ್ಗೆ ಸುಳ್ಳು ಮಾಹಿತಿ ನೀಡಿ ವರದಿ ಸಲ್ಲಿಸಲಾಗಿದೆ. ತಮ್ಮ ರಕ್ಷಣೆಗೆ ಸಿಬಿಐಗೆ ಪತ್ರ ಬರೆಯುವ ಅಧಿಕಾರಿ, ಹೆಚ್‌ಎಂಟಿ ಭೂಮಿಯಲ್ಲಿ ಅರಣ್ಯವಿದೆ. ಇದು ಅರಣ್ಯ ಸ್ವರೂಪ ಕಳೆದುಕೊಂಡಿದೆ, ಐಎ ಸಲ್ಲಿಸಲು ಬರುವುದಿಲ್ಲ ಎಂದು ಸಿಎಂಗೇಕೆ ಪತ್ರ ಬರೆಯಲಿಲ್ಲ ಎಂದು ಪ್ರಶ್ನಿಸಿದರು.
ಬೆಂಗಳೂರಿನಲ್ಲಿ ಇತರ ಸಂಸ್ಥೆಗಳ ವಶದಲ್ಲಿರುವ ಅರಣ್ಯ ಭೂಮಿ ಕುರಿತಂತೆ ಚರ್ಚಿಸಿ ಸರ್ಕಾರಕ್ಕೆ ಶಿಫಾರಸು ಮಾಡಲು 2015ರಲ್ಲೇ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಲಾಗಿತ್ತು. ಆದರೆ ಸಮಿತಿ ಗಮನಕ್ಕೆ ತಾರದೆ, ಸಚಿವ ಸಂಪುಟದ ಅನುಮತಿ ಇಲ್ಲದೆ ಸುಪ್ರೀಂ ಕೋರ್ಟ್ನಲ್ಲಿ ಡಿನೋಟಿಫಿಕೇಷನ್ ಅನುಮತಿ ಕೋರಿ 2020ರ ಜೂನ್ 20ರಂದು ಅರ್ಜಿ ಸಲ್ಲಿಸಲಾಗಿದೆ.
ಕೇವಲ 25 ದಿನಗಳ ಅಂತರದಲ್ಲಿ ಅಂದರೆ 2020 ಆ.25ರಂದು ಉನ್ನತ ಮಟ್ಟದ ಸಭೆಯಲ್ಲಿ `1980ರ ಪೂರ್ವದಲ್ಲಿ ವಿವಿಧ/ಸರ್ಕಾರಿ ಸಂಸ್ಥೆಗಳಿಗೆ ಆದ ಪ್ರದೇಶಗಳ ಮಂಜೂರಾತಿಗಳ ಬಗ್ಗೆ ಅಡ್ವೊಕೇಟ್ ಜನರಲ್ ಅವರ ಅಭಿಪ್ರಾಯ ಪಡೆದು ಅಂತಹ ಅರಣ್ಯಪ್ರದೇಶಗಳ ಡಿನೋಟಿಫಿಕೇಶನ್‌ನ ಪ್ರಸ್ತಾವನೆಯನ್ನು ಕ್ಯಾಬಿನೆಟ್ ನಿರ್ಧಾರಕ್ಕಾಗಿ ಸಲ್ಲಿಸಲು ಅಪರ ಮುಖ್ಯ ಕಾರ್ಯದರ್ಶಿ, ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆರವರಿಗೆ ಸೂಚಿಸಿದೆ’ ಎಂಬ ನಿರ್ಣಯ ಮಾಡಲಾಗಿದೆ. ಈ ಬಗ್ಗೆ ಘಟನೋತ್ತರ ಅನುಮತಿ ಪಡೆದಿಲ್ಲ. ಹೀಗಾಗಿ 4 ಅಧಿಕಾರಿಗಳಿಗೆ ನೋಟಿಸ್ ನೀಡಲಾಗಿತ್ತು.
ಈಗ ಗೋಕುಲ್ ಅವರನ್ನು ಅಮಾನತು ಮಾಡಿ ವಿಚಾರಣೆ ನಡೆಸಲು, ಮತ್ತೊಬ್ಬ ಅಧಿಕಾರಿ ವಿರುದ್ಧ ಇಲಾಖಾ ವಿಚಾರಣೆ ನಡೆಸಲು ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಮತ್ತು ಐಎಫ್‌ಎಸ್ ಅಧಿಕಾರಿ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಲು ಸಿಎಂಗೆ ಕಡತ ಸಲ್ಲಿಸಲಾಗಿದೆ. ಈ ವಿಷಯ ತಮ್ಮ ಗಮನಕ್ಕೆ ಬಂದ ಕೂಡಲೇ ಐಎ ಹಿಂಪಡೆಯಲು ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಐಎ ಹಿಂಪಡೆಯಲು ಸಚಿವ ಸಂಪುಟದ ಅನುಮತಿಯನ್ನೂ ಪಡೆಯಲಾಗಿದೆ ಎಂದರು.
Forest Minister Eshwar Khandre has recommended action against two retired IAS officers and two serving IFS officers for their alleged involvement in illegally leasing forest land under HMT's control for commercial use.
07-09-25 07:43 pm
Bangalore Correspondent
Fine, Violation, Home Minister: ಮುಖ್ಯಸ್ಥರಿಗೂ...
07-09-25 10:17 am
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
07-09-25 08:33 pm
HK News Desk
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
07-09-25 11:24 pm
Mangalore Correspondent
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
Ullal, Mangalore Police: ಮೊದಲ ಪತ್ನಿಗೆ ಜೀವನಾಂಶ...
06-09-25 10:59 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm