ಬ್ರೇಕಿಂಗ್ ನ್ಯೂಸ್
04-06-25 10:48 pm Bangalore Correspondent ಕರ್ನಾಟಕ
ಬೆಂಗಳೂರು, ಜೂ 04 : 18 ವರ್ಷಗಳ ನಂತರ ಚೊಚ್ಚಲ IPL ಟ್ರೋಫಿ ಮುಡಿಗೇರಿಸಿಕೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ(RCB)ದ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.
ಕಾಲ್ತುಳಿತ ದುರಂತದ ನಂತರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ , ವಿಧಾನಸೌಧದ ಬಳಿ ಯಾವುದೇ ದುರಂತ ಸಂಭವಿಸಿಲ್ಲ. ಆದರೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ದುರಂತ ಸಂಭವಿಸಿದೆ. ಇಂತಹ ದೊಡ್ಡ ದುರಂತ ಸಂಭವಿಸಬಾರದಿತ್ತು. ಇದರಿಂದ ತುಂಬ ದುಃಖವಾಗುತ್ತಿದೆ ಎಂದರು.
ಭಾರಿ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ ಹಿನ್ನೆಲೆಯಲ್ಲಿ ನೂಕುನುಗ್ಗಲು ಹಾಗೂ ಕಾಲ್ತುಳಿತ ಸಂಭವಿಸಿ 11 ಜನ ಸಾವನ್ನಪ್ಪಿದ್ದಾರೆ ಮತ್ತು 33 ಮಂದಿ ಗಾಯಗೊಂಡಿದ್ದಾರೆ ಎಂದರು.
ಈ ಹಿಂದೆ ಕೂಡ ಅನೇಕ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿದೆ. ಆದರೆ ಅದನ್ನು ನಾನು ಉಲ್ಲೇಖಿಸಿ ಇದನ್ನು ಡಿಪೆಂಡ್ ಮಾಡ್ತಿಲ್ಲ. ಕುಂಬಮೇಳದಲ್ಲಿ ಕಾಲ್ತುಳಿತದಿಂದ ಸಾವಾಗಿರಲಿಲ್ವಾ ಹಾಗಾಂತ ನಾನು ಈ ಘಟನೆಯನ್ನು ಡಿಫೆಂಡ್ ಮಾಡ್ತಾ ಇಲ್ಲ ಎಂದು ಕುಂಬಮೇಳದ ಸಂದರ್ಭದಲ್ಲಿ ನಡೆದ ಘಟನೆಯನ್ನು ನೆನಪಿಸಿದರು
ಮುಂದುವರೆದು ಮಾತನಾಡಿದ ಅವರು, ನಾವು ಕಾರ್ಯಕ್ರಮ ಆಯೋಜಿಸಿದ್ದಲ್ಲ, ಕ್ರಿಕೆಟ್ ಅಸೋಸಿಯೇಷನ್ ಅವರು ಮಾಡಿರೋದು. ನಾವು ಕಾರ್ಯಕ್ರಮ ಮಾಡದಿದ್ರು ಬರೆಯುತ್ತಿದ್ರಲ್ಲ ನೀವು. ಈ ಘಟನೆ ಆಗಬಾರದಿತ್ತು, ಆಗಿದೆ. ಈ ಘಟನೆಯನ್ನು ವಿಶಾದಿಸುತ್ತೇನೆ. ನಾವು ಸ್ಟೇಡಿಯಂನಲ್ಲಿ ಕಾರ್ಯಕ್ರಮ ಮಾಡಿರಲಿಲ್ಲ. ಅಲ್ಲಿ ನಾವು ಪೊಲೀಸ್ ಸೆಕ್ಯೂರಿಟಿ ವ್ಯವಸ್ಥೆ ಮಾಡೋದಷ್ಟೇ . ಸರ್ಕಾರದ ಕೆಲಸ ಭದ್ರತೆ ಒದಗಿಸೋದು ಅಷ್ಟೇ ಎಂದರು.
ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ ಸಂಪೂರ್ಣ ಉಚಿತ ಚಿಕಿತ್ಸೆ ನೀಡಲಾಗುವುದು. ಇದು ಸರ್ಕಾರದ ಕಾರ್ಯಕ್ರಮ ಅಲ್ಲ. ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸಿಎಂ ತಿಳಿಸಿದರು.
ನ್ಯಾಯಾಂಗ ತನಿಖೆಗೆ ಆದೇಶ;
"ಈ ಘಟನೆಯನ್ನು ನಾನು ಸಮರ್ಥಿಸಿಕೊಳ್ಳಲು ಬಯಸುವುದಿಲ್ಲ. ನಮ್ಮ ಸರ್ಕಾರ ಇದರಲ್ಲಿ ರಾಜಕೀಯ ಮಾಡುವುದಿಲ್ಲ. ನಾನು ನ್ಯಾಯಾಂಗ ತನಿಖೆಗೆ ಆದೇಶಿಸಿದ್ದೇನೆ ಮತ್ತು 15 ದಿನಗಳ ಕಾಲಾವಕಾಶ ನೀಡಿದ್ದೇನೆ. ಜನರು ಕ್ರೀಡಾಂಗಣದ ಗೇಟ್‌ಗಳನ್ನು ಸಹ ಮುರಿದರು. ಹೀಗಾಗಿ ಕಾಲ್ತುಳಿತ ಸಂಭವಿಸಿದೆ. ಇಷ್ಟೊಂದು ದೊಡ್ಡ ಜನಸಂದಣಿಯನ್ನು ಯಾರೂ ನಿರೀಕ್ಷಿಸಿರಲಿಲ್ಲ. ಕ್ರೀಡಾಂಗಣವು ಕೇವಲ 35,000 ಜನರ ಸಾಮರ್ಥ್ಯವನ್ನು ಹೊಂದಿದೆ, ಆದರೆ 2-3 ಲಕ್ಷ ಜನರು ಬಂದಿದ್ದರು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಬೌರಿಂಗ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ 19 ಗಾಯಾಳುಗಳ ಪೈಕಿ 7 ಜನ ಮೃತಪಟ್ಟರೆ, ವೈದೇಹಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ 8 ಜನ ಗಾಯಾಳುಗಳ ಪೈಕಿ ನಾಲ್ವರು ಮೃತಪಟ್ಟಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆ ಬೌರಿಂಗ್ ಹಾಗೂ ವೈದೇಹಿ ಆಸ್ಪತ್ರೆಗೆ ಭೇಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಜಿ.ಪರಮೇಶ್ವರ್ ಅವರು ಗಾಯಾಳುಗಳ ಆರೋಗ್ಯ ವಿಚಾರಿಸಿದರು.
ಸೂಕ್ತ ಭದ್ರತೆ ಒದಗಿಸಲು ಆಡಳಿತಕ್ಕೆ ಸಿಎಂ ಸೂಚನೆ ;
ಬಳಿಕ ಕಾವೇರಿ ನಿವಾಸದಲ್ಲಿ ಮುಖ್ಯ ಕಾರ್ಯದರ್ಶಿ, ಪೊಲೀಸ್ ಮಹಾನಿರ್ದೇಶಕರು ಹಾಗೂ ನಗರ ಪೊಲೀಸ್ ಆಯುಕ್ತರ ಜೊತೆ ಸಭೆ ನಡೆಸಿ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದ ಸಿಎಂ, ವಿದ್ಯಾರ್ಥಿಗಳು, ಯುವಕರು, ಯುವತಿಯರು ಮನೆಗೆ ಸೇಫಾಗಿ ತೆರಳಲು ವ್ಯವಸ್ಥೆ ಮಾಡಲು ಸೂಚಿಸಿದರು. ವಿಧಾನಸೌಧ, ಸ್ಟೇಡಿಯಂನ ಸುತ್ತ ಸಂಚಾರ ತೆರವುಗೊಳಿಸಿ ಅಸ್ವಸ್ಥರಿಗೆ ಸೂಕ್ತ ಚಿಕಿತ್ಸೆ ಕೊಡಿಸುವಂತೆ ಹಾಗೂ ಅಗತ್ಯ ಭದ್ರತೆ ಕಲ್ಪಿಸಲು ಸೂಚಿಸಿದರು.
A stampede during RCB’s IPL victory celebration near Chinnaswamy Stadium has claimed 11 lives and left 33 injured. Karnataka Chief Minister Siddaramaiah expressed deep sorrow and announced ₹10 lakh compensation for each victim’s family and free treatment for the injured.
07-09-25 10:17 am
Bangalore Correspondent
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
Sonia Gandhi, Dharmasthala: Who Killed the Wo...
05-09-25 11:15 pm
06-09-25 10:34 am
HK News Desk
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
06-09-25 10:59 pm
Mangalore Correspondent
Mangalore, Dharmasthala, Vittal Gowda, Skull:...
06-09-25 10:15 pm
ಗೋಮಾಂಸ ಭಕ್ಷಕರಿಗೆ ರಾಜ್ಯ ಸರ್ಕಾರ ಶಾದಿ ಭಾಗ್ಯ ರೀತಿ...
06-09-25 05:56 pm
Mla Vedavyas Kamath, Mangalore: ಮಳೆಗೆ ಹದಗೆಟ್ಟ...
06-09-25 04:46 pm
Ullal News, Warrant, Video, Mangalore: ಮೊದಲ ಪ...
05-09-25 08:12 pm
06-09-25 08:32 pm
Bangalore Correspondent
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm
ಮುಂಬೈಗೆ 14 ಲಷ್ಕರ್ ಉಗ್ರರ ಎಂಟ್ರಿ ಬೆದರಿಕೆ ! 400...
06-09-25 10:37 am