ಬ್ರೇಕಿಂಗ್ ನ್ಯೂಸ್
05-06-25 11:04 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 5 : ಕಾಲ್ತುಳಿತ ಪ್ರಕರಣ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಸಂಪುಟ ಸಭೆಯ ಬಳಿಕ ತುರ್ತು ಸುದ್ದಿಗೋಷ್ಠಿ ನಡೆಸಿದ್ದು ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿದ್ದಾಗಿ ತಿಳಿಸಿದ್ದಾರೆ. ಅಲ್ಲದೆ, ಬೆಂಗಳೂರು ನಗರ ಪೊಲೀಸ್ ಕಮಿಷನರ್ ದಯಾನಂದ್, ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಹೆಚ್.ಟಿ.ಶೇಖರ್ ಅವರನ್ನು ಅಮಾನತು ಮಾಡಿದ್ದಾಗಿ ಮಾಹಿತಿ ನೀಡಿದ್ದಾರೆ.
ಕಾಲ್ತುಳಿತ ಘಟನೆಯಲ್ಲಿ ಪೊಲೀಸ್ ಇಲಾಖೆ ಸೇರಿ ಮೂರು ಸಂಸ್ಥೆಗಳ ಬೇಜವಾಬ್ದಾರಿ ಕಂಡುಬಂದಿದೆ. ಎಫ್ಐಆರ್ ದಾಖಲಿಸುವಂತೆ ಸೂಚಿಸಲಾಗಿದೆ. ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್ , ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್, ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಹೆಚ್.ಟಿ.ಶೇಖರ್, ಎಸಿಪಿ ಬಾಲಕೃಷ್ಣ, ಕಬ್ಬನ್ಪಾರ್ಕ್ ಇನ್ಸ್ಪೆಕ್ಟರ್ ಗಿರೀಶ್ ಎ.ಕೆ ಅವರನ್ನು ಅಮಾನತು ಮಾಡಲಾಗಿದೆ.
ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗಿದೆ. ಪ್ರಕರಣದ ತನಿಖೆಯನ್ನ ಸಿಐಡಿಗೆ ವಹಿಸಿದ್ದೇವೆ. ಮೃತಪಟ್ಟವರ ಕುಟುಂಬಗಳ ಜೊತೆಗೆ ನಮ್ಮ ಸರ್ಕಾರ ಇರಲಿದೆ. ಎಫ್ಐಆರ್ ಆಧಾರದ ಮೇಲೆ ಸಿಐಡಿ ತನಿಖೆ ನಡೆಸಲಿದೆ. 30 ದಿನದಲ್ಲಿ ನ್ಯಾಯಾಂಗ ತನಿಖೆ ಮುಗಿಸಲು ಸೂಚಿಸಿದ್ದು ನಿವೃತ್ತ ನ್ಯಾಯಾಧೀಶ ಮೈಕೆಲ್ ಡಿಕುನ್ಹಾ ಅವರ ನೇತೃತ್ವದಲ್ಲಿ ಏಕಸದಸ್ಯ ಆಯೋಗ ರಚಿಸಲಾಗಿದೆ. ಗುಪ್ತಚರ ಸಂಸ್ಥೆಯ ವೈಫಲ್ಯವೂ ಆಗಿದೆ ಎಂದು ಒಪ್ಪಿಕೊಂಡರು.
ಪ್ರಕರಣದಲ್ಲಿ ಆರ್ ಸಿ ಬಿ ಸಂಸ್ಥೆ ಹಾಗೂ ಕಾರ್ಯಕ್ರಮ ಆಯೋಜಕರಾದ ಡಿಎನ್ ಎ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಈ ಮೂರು ಸಂಸ್ಥೆಗಳ ಪ್ರತಿನಿಧಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಂಡು, ಬಂಧಿಸಲು ಸೂಚನೆ ನೀಡಲಾಗಿದೆ. ಇವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ ಎಂದು ಹೇಳಿದ್ದಾರೆ.
In the wake of the tragic stampede incident during the Royal Challengers Bangalore (RCB) event in Bengaluru, the Karnataka government has taken swift action by suspending Bengaluru City Police Commissioner B. Dayanand. The incident, which occurred amid overwhelming crowd mismanagement, led to multiple injuries and has sparked widespread criticism over the lack of adequate security measures
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm