ಬ್ರೇಕಿಂಗ್ ನ್ಯೂಸ್
06-06-25 12:58 am Bengaluru Staff ಕರ್ನಾಟಕ
ಬೆಂಗಳೂರು, ಜೂ 06: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತವಾಗಿ 11 ಜನ ಮೃತಪಟ್ಟ ಕೇಸನ್ನು ನ್ಯಾಯಾಂಗ ತನಿಖೆಗೆ ವಹಿಸಿ, ಸಿಎಂ ಸಿದ್ದರಾಮಯ್ಯ ಆದೇಶ ನೀಡಿದ್ದಾರೆ. ಇಂದು ಸಚಿವ ಸಂಪುಟ ಸಭೆ ನಡೆಸಿ, ಬಳಿಕ ಸುದ್ದಿಗೋಷ್ಠಿ ನಡೆಸಿದ ಸಿದ್ದರಾಮಯ್ಯ, ಹಲವು ಆದೇಶಗಳನ್ನು ಹೊರಡಿಸಿದ್ದಾರೆ. ಈ ಮಧ್ಯೆ ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಿರೋದಾಗಿ ಘೋಷಿಸಿದ್ದಾರೆ.
ಬೆಂಗಳೂರು ಪೊಲೀಸ್ ಕಮಿಷನರ್ ಬಿ ದಯಾನಂದ್ ಅಮಾನತ್ತು ಆದೇಶದ ಬೆನ್ನಲ್ಲೇ ರಾಜ್ಯ ಸರ್ಕಾರ ನೂತನ ಕಮೀಷನರ್ ಅನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.
ಬೆಂಗಳೂರು ಪೊಲೀಸ್ ಕಮಿಷನರ್ ಸೇರಿ 5 ಅಧಿಕಾರಿಗಳ ಅಮಾನತ್ತು ಬೆನ್ನಲ್ಲೇ ನೂತನ ಪೊಲೀಸ್ ಕಮಿಷನರ್ ಆಯ್ಯೆ ಬಗ್ಗೆ ಭಾರೀ ಚರ್ಚೆ ನಡೆಯುತ್ತಿತ್ತು. ಈ ಬಗ್ಗೆ ಸಿಎಂ ಮನೆಯಲ್ಲಿ ಮಹತ್ವದ ಚರ್ಚೆ ಕೂಡಾ ನಡೆದಿತ್ತು. ಇದೀಗ ಬೆಂಗಳೂರು ನೂತನ ಕಮಿಷನರ್ ಆಗಿ ಸೀಮಂತ್ ಕುಮಾರ್ ಸಿಂಗ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.
1996 ಬ್ಯಾಚ್ ಐಪಿಎಸ್ ಅಧಿಕಾರಿಯಾಗಿದ್ದ ಸೀಮಂತ್ ಕುಮಾರ್, ಈ ಹಿಂದೆ ಬೆಂಗಳೂರು ಪೂರ್ವ ವಲಯ ಹೆಚ್ಚುವರಿ ಆಯುಕ್ತರಾಗಿ, ಎಸಿಬಿಯಲ್ಲಿ ಎಡಿಜಿಪಿಯಾಗಿ, ಕೆಎಸ್ಆರ್ ಪಿ ಎಡಿಜಿಪಿಯಾಗಿದ್ದ ಸೀಮಂತ್ ಕುಮಾರ್ ಕಾರ್ಯ ನಿರ್ವಹಿಸಿದ್ದರು. ಸದ್ಯ ಬಿಎಂಟಿಎಫ್ (ಬೆಂಗಳೂರು ಮಹಾನಗರ ಕಾರ್ಯಪಡೆ) ಎಡಿಜಿಪಿಯಾಗಿರುವ ಸೀಮಂತ್ ಕುಮಾರ್ ಸಿಂಗ್ ಇದೀಗ ಬೆಂಗಳೂರಿಗೆ ನೂತನ ಕಮಿಷನರ್ ಆಗಿ ಆಯ್ಕೆಯಾಗಿದ್ದಾರೆ.
ರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಆಡಳಿತ ವೈಫಲ್ಯದ ಕಳಂಕಕ್ಕೆ ಕಾರಣವಾಗಿರುವ ಆರ್‌ಸಿಬಿ ವಿಜಯೋತ್ಸವ ಸಂದರ್ಭದ ಕಾಲ್ತುಳಿತದ ದುರ್ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಸರಕಾರ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೇರಿ ಹಿರಿಯ ಪೊಲೀಸ್ ಅಧಿಕಾರಿಗಳ ತಲೆದಂಡಕ್ಕೆ ಆದೇಶ ಹೊರಡಿಸಿತ್ತು.
ಸರ್ಕಾರದಿಂದ ಹಲವರ ತಲೆದಂಡ;
ಮುಖ್ಯವಾಗಿ ದುರಂತಕ್ಕೆ ಆರ್‌ಸಿಬಿ ತಂಡ, ಇವೆಂಟ್ ಮ್ಯಾನೇಜರ್ ಡಿಎನ್‌ಎ ಹಾಗೂ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (ಕೆಎಸ್‌ಸಿಎ) ಬೇಜವಾಬ್ದಾರಿತನ ಕಾರಣ ಎಂದು ಸರಕಾರ ತೀರ್ಮಾನಿಸಿದ್ದು, ಈ ಮೂರು ಸಂಸ್ಥೆಗಳನ್ನು ಪ್ರತಿನಿಧಿಸುವವರನ್ನು ಕೂಡಲೇ ಬಂಧಿಸಲು ಆದೇಶಿಸಿದೆ. ಜತೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್‌ಪಾರ್ಕ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ಆಧರಿಸಿ ತನಿಖೆಯನ್ನು ಸಿಐಡಿಗೆ ಒಪ್ಪಿಸಲಾಗಿದೆ.
ಸುದೀರ್ಘ ಸಮಾಲೋಚನೆ ನಡೆಸಿದ ಸಿಎಂ ಸಿದ್ದರಾಮಯ್ಯ;
ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ದುರಂತದ ಬಗ್ಗೆ ತೀವ್ರ ನೋವು ಹಾಗೂ ಕಳವಳ ವ್ಯಕ್ತವಾಯಿತು. ಸಂಪುಟ ಸಭೆ ಬಳಿಕ ಹಿರಿಯ ಸಚಿವರು ಹಾಗೂ ಅಧಿಕಾರಿಗಳನ್ನು ಕರೆಸಿಕೊಂಡು ವಿಧಾನಸೌಧದ ತಮ್ಮ ಕೊಠಡಿಯಲ್ಲಿ ಸುದೀರ್ಘ ಸಮಾಲೋಚನೆ ನಡೆಸಿದ ಸಿಎಂ ಸಿದ್ದರಾಮಯ್ಯ ಅವರು, ಬಳಿಕ ಸುದ್ದಿಗೋಷ್ಠಿಯಲ್ಲಿಈ ತೀರ್ಮಾನಗಳನ್ನು ಪ್ರಕಟಿಸಿದರು.
''ಅಗತ್ಯ ಭದ್ರತೆ ಹಾಗೂ ಮುನ್ನೆಚ್ಚರಿಕೆ ಕ್ರಮಗಳ ವೈಫಲ್ಯಕ್ಕಾಗಿ ನಗರ ಪೊಲೀಸ್ ಆಯುಕ್ತ, ಕೆಎಸ್‌ಸಿಎ ಉಸ್ತುವಾರಿ ನೋಡಿಕೊಳ್ಳುವ ಹೆಚ್ಚುವರಿ ಪೊಲೀಸ್ ಆಯುಕ್ತ, ನಗರ ಕೇಂದ್ರ ವಿಭಾಗದ ಉಪ ಪೊಲೀಸ್ ಆಯುಕ್ತ (ಡಿಸಿಪಿ), ಈ ಭಾಗದ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ಹಾಗೂ ಕಬ್ಬನ್‌ಪಾರ್ಕ್ ಪೊಲೀಸ್ ಇನ್ಸ್‌ಪೆಕ್ಟರ್ ಅನ್ನು ತಕ್ಷಣ ಸೇವೆಯಿಂದ ಅಮಾನತು ಮಾಡಲು ಆದೇಶಿಸಲಾಗಿದೆ,'' ಎಂದು ಹೇಳಿದರು.
ಗೃಹ ಸಚಿವರ ಅಸಹಾಯಕತೆ;
ಸಚಿವ ಸಂಪುಟದಲ್ಲಿದುರಂತದ ಬಗ್ಗೆ ಸುದೀರ್ಘ, ಗಂಭೀರ ಚರ್ಚೆ ಕಾಲಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. ವಿಜಯೋತ್ಸವ ಆಯೋಜನೆ ಬಗ್ಗೆ ತಮಗೆ ಪೂರ್ಣ ಮಾಹಿತಿ ಇರಲಿಲ್ಲ. ಬೆಳಗ್ಗೆ 10ರವರೆಗೂ ಈ ಬಗ್ಗೆ ಮಾಹಿತಿ ಇರಲಿಲ್ಲ. ದುರಂತದ ಬಗ್ಗೆಯೂ ಪೊಲೀಸ್ ಅಧಿಕಾರಿಗಳು ತಕ್ಷಣಕ್ಕೆ ಮಾಹಿತಿಯನ್ನೂ ಕೊಡಲಿಲ್ಲ. ವಿಶೇಷವಾಗಿ ಕೆಎಸ್‌ಸಿಎ ನಡೆಗೆ ಪರಮೇಶ್ವರ್ ಕ್ಯಾಬಿನೆಟ್‌ನಲ್ಲಿತೀವ್ರ ಆಕ್ರೋಶ ಹೊರಹಾಕಿದರು.
Seemanth Kumar Singh Appointed New Bengaluru Police Commissioner Following Fatal RCB Parade Stampede
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm