ಬ್ರೇಕಿಂಗ್ ನ್ಯೂಸ್
12-06-25 11:07 pm HK News Desk ಕರ್ನಾಟಕ
ಕಾರವಾರ, ಜೂ 12 : ಬುಧವಾರ ರಾತ್ರಿಯಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಕಾರವಾರ ನಗರದಲ್ಲಿ ವ್ಯಾಪಕ ಹಾನಿಯಾಗಿದ್ದು, ಜಿಲ್ಲಾಸ್ಪತ್ರೆಗೆ ನೀರು ನುಗ್ಗಿದ್ದಲ್ಲದೆ ಹಲವು ಅಪಾರ್ಟ್ಮೆಂಟ್ಗಳಲ್ಲಿನ 20ಕ್ಕೂ ಹೆಚ್ಚು ಕಾರುಗಳು ಮುಳುಗಡೆಯಾಗಿವೆ. ಮಳೆಯ ಅಬ್ಬರಕ್ಕೆ ನಗರದ ಜನಜೀವನ ಅಸ್ತವ್ಯಸ್ತವಾಗಿದೆ.
ಜಿಲ್ಲಾಸ್ಪತ್ರೆಗೆ ನುಗ್ಗಿದ ನೀರು;
ಎಡಬಿಡದೆ ಸುರಿಯುತ್ತಿರುವ ಮಳೆಗೆ ನಗರದ ಜಿಲ್ಲಾ ಆಸ್ಪತ್ರೆಗೆ ಚರಂಡಿ ನೀರು ನುಗ್ಗಿದ್ದು, ರೋಗಿಗಳು ರಾತ್ರಿಯಿಡೀ ನೀರಿನಲ್ಲೇ ಕಾಲ ಕಳೆಯುವಂತಾಯಿತು. ಮಳೆಯಿಂದಾಗಿ ಆಸ್ಪತ್ರೆಯ ಕೆಳ ಮಹಡಿಯಲ್ಲಿ ನೀರು ತುಂಬಿಕೊಂಡ ಪರಿಣಾಮ ರೋಗಿಗಳು ಹಾಗೂ ಬಾಣಂತಿಯರು ತೀವ್ರ ಸಂಕಷ್ಟಕ್ಕೆ ಸಿಲುಕಿದರು. ಬೆಳಿಗ್ಗೆ ಆಗುತ್ತಿದ್ದಂತೆ ಆಸ್ಪತ್ರೆ ಸಿಬ್ಬಂದಿ ನೀರು ಹೊರಹಾಕಲು ವ್ಯವಸ್ಥೆ ಮಾಡಿದರು. ಸದ್ಯ ಆಸ್ಪತ್ರೆಯಲ್ಲಿ ನೀರಿನ ಮಟ್ಟ ಕಡಿಮೆಯಾಗಿದ್ದು, ಕೆಳ ಮಹಡಿಯಲ್ಲಿದ್ದ ರೋಗಿಗಳನ್ನು ಮೇಲಿನ ಮಹಡಿಗೆ ಸ್ಥಳಾಂತರಿಸಲಾಗಿದೆ.
ರಾತ್ರಿಯಿಡೀ ಸುರಿದ ಮಳೆಯು ರೋಗಿಗಳಿಗೆ ಭಾರಿ ತೊಂದರೆ ಉಂಟುಮಾಡಿದ್ದು, ಆಸ್ಪತ್ರೆಯ ಒಳಗೆ ನೀರು ನುಗ್ಗಿದ್ದರಿಂದ ಚಿಕಿತ್ಸೆಯಲ್ಲೂ ವ್ಯತ್ಯಯ ಉಂಟಾಯಿತು. ಮಳೆಗಾಲ ಆರಂಭವಾದರೂ ನಗರದ ಒಳಚರಂಡಿ ವ್ಯವಸ್ಥೆ ಸರಿಪಡಿಸದ ಕಾರಣ ಇಂತಹ ಅನಾಹುತಗಳಿಗೆ ಕಾರಣವಾಗುತ್ತಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.
ನಗರದ ಹಲವೆಡೆ ಅಪಾರ್ಟ್ಮೆಂಟ್ಗಳ ಪಾರ್ಕಿಂಗ್ ಪ್ರದೇಶಗಳು ಸಂಪೂರ್ಣವಾಗಿ ಜಲಾವೃತಗೊಂಡು, ನಿಲ್ಲಿಸಿದ್ದ ಕಾರುಗಳು ನೀರಿನಲ್ಲಿ ಮುಳುಗಿವೆ. ಕೆಇಬಿ ರಸ್ತೆಯಲ್ಲಿರುವ ಅಪಾರ್ಟ್ಮೆಂಟ್ಗಳಿಗೆ ಹೆಚ್ಚಿನ ಹಾನಿಯಾಗಿದೆ. ಜೊತೆಗೆ, ರಸ್ತೆ ಬದಿಯ ಹಲವಾರು ಅಂಗಡಿಗಳಿಗೂ ನೀರು ನುಗ್ಗಿದ್ದು, ಸಾಮಗ್ರಿಗಳು ಹಾನಿಗೊಳಗಾಗಿವೆ. ಕೋಳಿ ಅಂಗಡಿಯೊಂದಕ್ಕೆ ನೀರು ಆವರಿಸಿದ ಪರಿಣಾಮ ನೂರಕ್ಕೂ ಅಧಿಕ ಕೋಳಿಗಳು ಮೃತಪಟ್ಟಿವೆ. ಇದರಿಂದ ವ್ಯಾಪಾರಸ್ಥರಿಗೆ ಭಾರಿ ನಷ್ಟ ಉಂಟಾಗಿದೆ.
ಮನೆ ಕುಸಿತ, ಸಾಂಪ್ರದಾಯಿಕ ದೋಣಿಗಳು ಜಲಾವೃತ: ಕಾರವಾರದ ಬೈತಖೋಲ್ ಭಾಗದಲ್ಲಿ ಗುಡ್ಡದ ಮೇಲ್ಬಾಗದಿಂದ ಹರಿದುಬಂದ ಮಳೆ ನೀರಿನಿಂದಾಗಿ ಮನೆಯೊಂದರ ಗೋಡೆಗಳು ಕುಸಿದು ಕೊಚ್ಚಿಕೊಂಡು ಹೋಗಿದೆ. ರಾತ್ರಿ ವೇಳೆ ಸಂಭವಿಸಿದ ಘಟನೆಯಲ್ಲಿ ಅದೃಷ್ಟವಶಾತ್ ಕುಟುಂಬಸ್ಥರು ಅಪಾಯದಿಂದ ಪಾರಾಗಿದ್ದಾರೆ.
ಬೈತಖೋಲದ ಮಾಲಿನಿ ಫೆಡ್ನೇಕರ್ ಎಂಬವರ ಮನೆ ಕುಸಿದು ಹಾನಿಯಾಗಿದೆ. ಕುಟುಂಬದವರು ರಾತ್ರಿ ಮಲಗಿದ್ದಾಗಲೇ ಏಕಾಏಕಿ ಮಳೆ ನೀರು ಹರಿದುಬಂದಿದ್ದು ಅಪಾರ ಪ್ರಮಾಣದ ನೀರು ಮನೆಯ ಗೋಡೆಯನ್ನು ಕುಸಿಯುವಂತೆ ಮಾಡಿದೆ. ತಕ್ಷಣ ಮನೆಯಲ್ಲಿದ್ದವರು ಪಕ್ಕದ ಮನೆಗೆ ಓಡಿಹೋಗಿ ಅಪಾಯದಿಂದ ಪಾರಾಗಿದ್ದಾರೆ. ಮಳೆ ನೀರಿನಿಂದ ಮಣ್ಣು ಮತ್ತು ಕಲ್ಲುಗಳ ರಾಶಿ ಮನೆಯೊಳಗೆ ನುಗ್ಗಿ ಹಾನಿಯಾಗಿದೆ. ಸದ್ಯ ಪಕ್ಕದ ಮನೆಯಲ್ಲಿ ಆಶ್ರಯ ಪಡೆದಿದ್ದಾರೆ.
ನಗರದ ಅಲಿಗದ್ದಾ ಕಡಲತೀರದಲ್ಲಿ ನಿಲ್ಲಿಸಿದ್ದ ಸಾಂಪ್ರದಾಯಿಕ ಮೀನುಗಾರಿಕಾ ದೋಣಿಗಳು ಭಾರೀ ಮಳೆಗೆ ಮಣ್ಣಿನಲ್ಲಿ ಹುದುಗಿದ್ದ, ಹಲವು ಮೀನುಗಾರಿಕಾ ಬಲೆಗಳಿಗೂ ಹಾನಿಯಾಗಿದೆ. ಮೀನುಗಾರರು ತಮ್ಮ ದೋಣಿಗಳನ್ನು ರಕ್ಷಿಸಿಕೊಳ್ಳಲು ಹರಸಾಹಸಪಡುತ್ತಿದ್ದಾರೆ.
ಪ್ರವಾಹ ಪರಿಸ್ಥಿತಿ ನಿಭಾಯಿಸಲು ನಗರಸಭೆ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಅಪಾರ್ಟ್ಮೆಂಟ್ಗಳಲ್ಲಿನ ನೀರನ್ನು ಹೊರಹಾಕುವ ಕಾರ್ಯ ನಡೆಯುತ್ತಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿಯೂ ರಕ್ಷಣಾ ಕಾರ್ಯಗಳಲ್ಲಿ ನೆರವಾಗುತ್ತಿದ್ದಾರೆ.
Sewage Water Floods Karwar District Hospital, Torrential Rains Cause Widespread Damage, House Collapses, Boats Submerged.
10-07-25 09:53 pm
Bangalore Correspondent
ED Raid Congress MLA Subba Reddy: ಮಲೇಶ್ಯಾ, ಬ್...
10-07-25 12:45 pm
ಹರಿಪ್ರಸಾದ್ ಹೇಳಿಕೆಗೆ ಬಿಜೆಪಿ ಕೆಂಡಾಮಂಡಲ ; ಅರ್ಧ ನ...
09-07-25 10:45 pm
Chamarajanagar Heart Attack, Student; 'ಹೃದಯ"ಕ...
09-07-25 04:12 pm
ಬೆಂಗಳೂರಿನಲ್ಲಿ ಐದು ಕಡೆ ಎನ್ಐಎ ದಾಳಿ ; ಭಯೋತ್ಪಾದಕ...
09-07-25 01:53 pm
11-07-25 12:08 pm
HK News Desk
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
Bangle Seller, Changur Baba Arrest, Uttar Pra...
10-07-25 03:24 pm
Amit Shah; ರಾಜಕೀಯ ನಿವೃತ್ತಿ ಬಳಿಕ ವೇದ, ಉಪನಿಷತ್...
10-07-25 01:00 pm
ಗೋಮಾಂಸ ತಿನ್ನಿಸಿ ಮತಾಂತರಕ್ಕೆ ಯತ್ನ ; ಫೇಸ್ಬುಕ್ಕಲ್...
07-07-25 08:45 pm
10-07-25 07:23 pm
Mangalore Correspondent
Mangalore, Traffic Constable, Lokayukta, Tasl...
10-07-25 04:01 pm
ಮಂಗಳೂರಿನ ಟೈಲರಿಂಗ್ ಶಾಪಲ್ಲೇ ಕುಸಿದು ಬಿದ್ದಿದ್ದ ನವ...
09-07-25 10:25 pm
Mangalore Home Minister Parameshwara, Peace M...
09-07-25 10:17 pm
Peace Meeting, Mangalore, Brijesh Chowta, Ash...
09-07-25 09:01 pm
10-07-25 08:09 pm
HK News Desk
Kerala Couple, Chit Fund Scam; ಚಿಟ್ ಫಂಡ್ ಹೆಸರ...
10-07-25 01:05 pm
Double Murder Hassan, crime: ಆಸ್ತಿ ವಿಚಾರಕ್ಕೆ...
10-07-25 12:04 pm
Drugs News, Mangalore: ಮಂಗಳೂರಿಗೆ ಡ್ರಗ್ಸ್ ಪೂರೈ...
09-07-25 10:56 pm
Kerala Chit Fund, Fraud, Mangalore: 20 ವರ್ಷಗಳ...
08-07-25 10:01 pm