ಬ್ರೇಕಿಂಗ್ ನ್ಯೂಸ್
14-06-25 11:05 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 14 : ಸರ್ಕಾರಿ ಅಧಿಕಾರಿಗಳಿಗೆ ಬೆದರಿಕೆ ಹಾಕಿ ಲೋಕಾಯುಕ್ತ ಪೊಲೀಸರ ಹೆಸರಲ್ಲಿ ಸಂಗ್ರಹಿಸಿದ ಕೋಟ್ಯಂತರ ರೂ.ಗಳನ್ನು ಕ್ರಿಪ್ಟೋಕರೆನ್ಸಿಯಾಗಿ ಪರಿವರ್ತಿಸಿದ ಬಗ್ಗೆ ಮಾಹಿತಿ ಲಭಿಸಿದ್ದು ಲೋಕಾಯುಕ್ತ ಅಧಿಕಾರಿಗಳು ಕ್ರಿಪ್ಟೋ ಕರೆನ್ಸಿಯ 25ಕ್ಕೂ ಹೆಚ್ಚು ಕಂಪನಿಗಳಿಗೆ ಪತ್ರ ಬರೆದು ಮಾಹಿತಿ ಕೇಳಿದ್ದಾರೆ.
ಜೂನ್ 2 ರಂದು ಲೋಕಾಯುಕ್ತ ಪೊಲೀಸರು ಬಂಧಿಸಿದ ಚಿತ್ರದುರ್ಗದ ನಿಂಗಪ್ಪ ಸಾವಂತ್ (46ವ) ಅಲಿಯಾಸ್ ಜಿ. ನಿಂಗಪ್ಪ ಅವರ ವಿಚಾರಣೆ ವೇಳೆ, ಸರ್ಕಾರಿ ಅಧಿಕಾರಿಗಳಿಂದ ಸುಲಿಗೆ ಮಾಡಿದ್ದ ಹಣವನ್ನು ಲೋಕಾಯುಕ್ತದಲ್ಲಿ ಸೇವೆ ಸಲ್ಲಿಸುತ್ತಿರುವ ಕೆಲವು ಐಪಿಎಸ್ ಅಧಿಕಾರಿಗಳು ಸೇರಿದಂತೆ ಹಲವಾರು ಹೆಸರುಗಳಲ್ಲಿ ನೋಂದಾಯಿಸಲಾದ ಕ್ರಿಪ್ಟೋಕರೆನ್ಸಿ ವ್ಯಾಲೆಟ್‌ಗಳಲ್ಲಿ ಹೂಡಿಕೆ ಮಾಡಿದ್ದೇನೆ ಎಂದು ತಿಳಿಸಿದ್ದಾನೆ.
ಕೇಂದ್ರೀಕೃತ ಮತ್ತು ವಿಕೇಂದ್ರೀಕೃತ ಕ್ರಿಪ್ಟೋಕರೆನ್ಸಿ ವಹಿವಾಟಿನ ಮೂಲಕ ನಿಂಗಪ್ಪ ಹೂಡಿಕೆ ಮಾಡಿದ ಒಟ್ಟು ಮೊತ್ತ ಎಷ್ಟೆಂದು ಖಚಿತಪಡಿಸಲು ಲೋಕಾಯುಕ್ತ ಪೊಲೀಸರು ಸುಮಾರು 25 ಕಂಪನಿಗಳಿಗೆ ಪತ್ರ ಬರೆದಿದ್ದಾರೆ. ಚಿತ್ರದುರ್ಗದಲ್ಲಿ ನಿಯೋಜನೆಗೊಂಡಿದ್ದ ನಿಂಗಪ್ಪನನ್ನು ಕೆಲವು ವರ್ಷಗಳ ಹಿಂದೆಯೇ ಕೆಎಸ್ಸಾರ್ಪಿ ಸೇವೆಯಿಂದ ವಜಾಗೊಳಿಸಲಾಗಿತ್ತು.
ನಿಂಗಪ್ಪನ ಮೊಬೈಲ್ ಫೋನ್ ನ್ನು ಸಿಐಡಿ ಸೈಬರ್ ವಿಭಾಗಕ್ಕೆ ಕ್ರಿಪ್ಟೋಕರೆನ್ಸಿ ವಹಿವಾಟುಗಳ ಪರಿಶೀಲನೆಗಾಗಿ ಕಳುಹಿಸಲಾಗಿದೆ. ಆರಂಭಿಕ ತನಿಖೆಯಲ್ಲಿ ಅವರು ಬೈನಾನ್ಸ್ ಮತ್ತು ಬಿಟ್ ಗೇಟ್ ಸೇರಿದಂತೆ ಎಂಟು ಕ್ರಿಪ್ಟೋಕರೆನ್ಸಿ ವಿನಿಮಯ ವೇದಿಕೆಗಳಲ್ಲಿ 4.19 ಕೋಟಿ ರೂಪಾಯಿಗಳನ್ನು ಹೂಡಿಕೆ ಮಾಡಿರುವುದು ತಿಳಿದುಬಂದಿದೆ. ನಿಂಗಪ್ಪ ಹೆಸರಿನಲ್ಲಿ, ಆತನ ಪತ್ನಿ ಚಂದ್ರಕಲಾ ಹೆಸರಿನಲ್ಲಿ ಮತ್ತು ಕೆಲವು ಅಧಿಕಾರಿಗಳ ಹೆಸರಿನಲ್ಲಿ ಹೂಡಿಕೆ ಮಾಡಲಾಗಿದೆ. ಲೋಕಾಯುಕ್ತ ಪೊಲೀಸರು ಚಿತ್ರದುರ್ಗದಲ್ಲಿರುವ ಅವರ ನಿವಾಸದಿಂದ ಸುಮಾರು 90 ಗ್ರಾಂ ಚಿನ್ನದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.
ವ್ಯವಹಾರ ಹೇಗೆ ಮಾಡುತ್ತಿದ್ದ ?
ನಿಂಗಪ್ಪನ ಕಾರ್ಯ ವಿಧಾನವೆಂದರೆ ಐಪಿಎಸ್ ಅಧಿಕಾರಿಗಳ ಹೆಸರಿನಲ್ಲಿ ಮತ್ತು ಲೋಕಾಯುಕ್ತ ಅಧಿಕಾರಿಗಳ ಹೆಸರಿನಲ್ಲಿ ಫೋನ್ ಸಂಖ್ಯೆಯನ್ನು ತೋರಿಸುವುದು, ಲೋಕಾಯುಕ್ತದ ತನ್ನ 'ಮೂಲಗಳಿಂದ' ತನಗೆ ಹೆಸರುಗಳು ಸೋರಿಕೆಯಾದ ಅಧಿಕಾರಿಗಳಿಗೆ ಸ್ಕ್ರೀನ್ ಶಾಟ್‌ಗಳನ್ನು ಕಳುಹಿಸುತ್ತಿದ್ದನು. ಉನ್ನತ ಅಧಿಕಾರಿಗಳೊಂದಿಗೆ ನಿಕಟ ಸಂಬಂಧ ಹೊಂದಿದ್ದೇನೆ ಎಂಬ ಭಾವನೆ ಮೂಡಿಸುತ್ತಿದ್ದನು. "ಇಂದು ಬೆಳಗ್ಗೆ 7 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ. ಜಾಗರೂಕರಾಗಿರಿ" ಎಂಬಂತಹ ಎಚ್ಚರಿಕೆ ಸಂದೇಶಗಳನ್ನು ಕಳುಹಿಸುತ್ತಿದ್ದನು.
In a major revelation, Lokayukta officials have uncovered a massive extortion racket where crores of rupees were allegedly collected by impersonating Lokayukta police officials and later invested in cryptocurrencies. The investigation has prompted authorities to send formal requests to more than 25 cryptocurrency companies seeking transaction details.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm