ಬ್ರೇಕಿಂಗ್ ನ್ಯೂಸ್
27-06-25 09:56 pm Bangalore Correspondent ಕರ್ನಾಟಕ
ಬೆಂಗಳೂರು, ಜೂ 28 : ರಾಜ್ಯದಲ್ಲಿ ಅಪರಾಧಗಳ ಪ್ರಮಾಣ ಕಡಿಮೆ ಆಗಿರುವುದು ಸಮಾಧಾನದ ಸಂಗತಿಯಾದರೂ ಪೊಲೀಸರ ತನಿಖೆಯ ಗುಣಮಟ್ಟ ಕಡಿಮೆಯಾಗಿದ್ದು ಇದನ್ನು ಹೆಚ್ಚಿಸಬೇಕಿದೆ ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದರು.
ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ಮತ್ತು ಪೊಲೀಸ್ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ಈ ಸೂಚನೆಗಳನ್ನು ಸಿಎಂ ನೀಡಿದರು. ದ್ವೇಷ ಭಾಷಣ ಮಾಡುವವರ ವಿರುದ್ಧ, ಜನರ-ರಾಜ್ಯದ ನೆಮ್ಮದಿ ಕೆಡಿಸುವವರ ವಿರುದ್ಧ ಸ್ವಯಂಪ್ರೇರಿತ ಕ್ರಮ ಏಕೆ ತೆಗೆದುಕೊಳ್ಳುತ್ತಿಲ್ಲ? ಅಧಿಕಾರಿಗಳಿಗೆ ಖಾರವಾಗಿ ಮುಖ್ಯಮಂತ್ರಿಗಳು ಪ್ರಶ್ನಿಸಿದರು.



ಬೀದರ್ ನಲ್ಲಿ ನಡೆದ ದರೋಡೆ ಪ್ರಕರಣದ ಆರೋಪಿ ಯಾರು ಎಂದು ಗೊತ್ತಾಗಿದ್ದರೂ 5 ತಿಂಗಳುಗಳಿಂದ ಆತನನ್ನು ಬಂಧಿಸದೇ ಇರುವುದನ್ನು ಸಭೆಯಲ್ಲಿ ಸಿಎಂ ಉಲ್ಲೇಖಿಸಿ ಹೇಳಿದರು. ಪ್ರಕರಣಗಳಲ್ಲಿ ತನಿಖೆಯ ಗುಣಮಟ್ಟ ಹೆಚ್ಚಿದ್ದರೂ ಒಟ್ಟಾರೆಯಾಗಿ ಗಮನಿಸಿದಾಗ ತನಿಖೆಯ ಗುಣಮಟ್ಟ ಕುಸಿದಿರುವುದು ಸ್ಪಷ್ಟವಾಗುತ್ತಿದೆ ಎಂದು ಸಿಎಂ ಅಭಿಪ್ರಾಯ ಪಟ್ಟರು.
ಮಂಗಳೂರು ಮಾತ್ರ ಹದಗೆಟ್ಟಿದ್ದೇಕೆ?
ದ್ವೇಷ ಭಾಷಣ ಮಾಡುವವರ ವಿರುದ್ಧ, ಜನರ-ರಾಜ್ಯದ ನೆಮ್ಮದಿ ಕೆಡಿಸುವವರ ವಿರುದ್ಧ ಸ್ವಯಂಪ್ರೇರಿತ ಕ್ರಮ ಏಕೆ ತೆಗೆದುಕೊಳ್ಳುತ್ತಿಲ್ಲ, ನೀವು ಕ್ರಮ ತೆಗೆದುಕೊಳ್ಳದಿದ್ದರೆ ನಾವು ನಿಮ್ಮ ವಿರುದ್ಧ ಕ್ರಮ ಕೈಗೊಳ್ಳಬೇಕಾಗುತ್ಯದೆ ಎಂದು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಖಾರವಾಗಿ ಪ್ರಶ್ನಿಸಿದರು.
ಕೋಮು ಘರ್ಷಣೆ ಮತ್ತು ಕೊಲೆಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಹೆಚ್ಚಾಗಿ ಆಗುತ್ತಿದೆ. ಇತರೆ ಜಿಲ್ಲೆಗಳಲ್ಲಿ ಯಾಕೆ ಆಗುತ್ತಿಲ್ಲ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು ದಕ್ಷಿಣ ಕನ್ನಡ ಜಿಲ್ಲೆಯ ನೆಮ್ಮದಿ ಕೆಡಿಸುವವರನ್ನು ಮೂಲದಿಂದಲೇ ಪತ್ತೆ ಹಚ್ಚಿ ಅವನು ಯಾರೇ ಇದ್ದರೂ ಕಠಿಣ ಕಾನೂನು ಕ್ರಮ ಕೈಗೊಳ್ಳಿ ಎಂದು ಸಿಎಂ ಸ್ಪಷ್ಟ ಸೂಚನೆ ನೀಡಿದರು.
ನಾವು ವ್ಯವಸ್ಥೆಯನ್ನು ದೂಷಿಸಿಕೊಂಡು ಕೈ ಕಟ್ಟಿಕೊಂಡು ಕೂರೋದಲ್ಲ. ಪೊಲೀಸ್ ಠಾಣೆಗಳು ಜನಸ್ನೇಹಿ ಆಗುವ ಜೊತೆಗೆ ಅಪರಾಧ ಮನಸ್ಥಿತಿಯವರಿಗೆ ಕಾನೂನಿನ ಬಗ್ಗೆ ಭಯ ಇರುವ ವಾತಾವರಣ ಸೃಷ್ಟಿಸಬೇಕು ಎಂದು ಕರೆ ನೀಡಿದರು.
ನಾನು 1983 ರಿಂದ ಶಾಸಕನಾಗಿ ಸಿಎಂ ಆಗಿದ್ದೀನಿ. ಬೆಂಗಳೂರಿನಲ್ಲಿ ನಡೆದ ಇಂಥಾ ಕಾಲ್ತುಳಿತ ಪ್ರಕರಣವನ್ನು ಹಿಂದೆಂದೂ ನಾನು ನೋಡಿರಲಿಲ್ಲ. ಗುಪ್ತಚರ ಇಲಾಖೆ ಇರುವುದು ಏಕೆ ? ಸರಿಯಾದ ಸಮಗ್ರ ಮಾಹಿತಿ ನೀಡಲಿಲ್ಲ. ಪರಿಣಾಮ 11 ಮಂದಿ ಮೃತಪಟ್ಟರು ಎಂದು ಸಿಎಂ ವಿಷಾದ ವ್ಯಕ್ತ ಪಡಿಸಿದರು.
ಕಾಲ್ತುಳಿತ ಘಟನೆ ನಡೆದ ದಿನ ಮಧ್ಯಾಹ್ನ 3:50 ಕ್ಕೇ ಸಾವುಗಳು ಸಂಭವಿಸಿದ್ದವು. ಆದರೂ ಸರಿಯಾದ ಮಾಹಿತಿ ಕೊಟ್ಟಿರಲಿಲ್ಲ. ಇದು ತಪ್ಪಲ್ಲವಾ ? 5:45 ಕ್ಕೆ ನಾನಾಗೇ ಕೇಳಿದಾಗಲೂ ಒಂದೇ ಸಾವು ಆಗಿದೆ ಎನ್ನುವ ಮಾಹಿತಿ ನೀಡಿದರು. ಅಷ್ಟೊತ್ತಿಗಾಗಲೇ 11 ಸಾವು ಆಗಿಬಿಟ್ಟಿತ್ತು. ಹಿರಿಯ ಅಧಿಕಾರಿ ಸರಿಯಾದ ಮಾಹಿತಿಯನ್ನು ತಕ್ಷಣ ನಮಗೆ ನೀಡಿದ್ದರೆ ಸ್ಟೇಡಿಯಂ ಕಾರ್ಯಕ್ರಮ ರದ್ದುಗೊಳಿಸಲು ಸೂಚನೆ ನೀಡಬಹುದಿತ್ತು ಎಂದು ಸಿದ್ದರಾಮಯ್ಯ ಬೇಸರ ವ್ಯಕ್ತ ಪಡಿಸಿದರು.
While the overall crime rate in the state may be declining, Chief Minister Siddaramaiah expressed concern over the deteriorating quality of police investigations. Addressing a high-level meeting of senior police officers at the State Director General of Police’s office, the CM issued stern directions to improve investigative standards and take proactive action against those spreading hate speech and disturbing public harmony.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
26-10-25 04:42 pm
Mangalore Correspondent
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm