ಬ್ರೇಕಿಂಗ್ ನ್ಯೂಸ್
03-07-25 10:52 am HK News Desk ಕರ್ನಾಟಕ
ತುಮಕೂರು, ಜು 03 : ದೇಶದ ಕಾನೂನಿನ ಪ್ರಕಾರ ಅಪ್ರಾಪ್ತ ಮಕ್ಕಳಿಗೆ ವಾಹನ ಚಾಲನಾ ಪರವಾನಗಿ ನೀಡುವಂತಿಲ್ಲ. ಅಂದರೆ, ಅವರು ಪ್ರಾಪ್ತರಾಗುವವರೆಗೆ ವಾಹನ ಚಾಲನೆ ಮಾಡುವಂತಿಲ್ಲ ಎಂದರ್ಥ. ಈ ಬಗ್ಗೆ ಪೊಲೀಸರು, ಕಾನೂನು ಅನುಷ್ಠಾನ ಅಧಕಾರಿಗಳು ಜಾಗೃತಿ ಮೂಡಿಸುತ್ತಲೇ ಇರುತ್ತಾರೆ. ಆದಾಗ್ಯೂ ಕೆಲವರು 'ಅತಿ ಬುದ್ಧಿವಂತಿಕೆ' ತೋರಿ ಪೇಚಿಗೆ ಸಿಕ್ಕಿಕೊಳ್ಳುತ್ತಾರೆ.
ಇಂಥದ್ದೇ ಒಂದು ಪ್ರಕರಣದಲ್ಲಿ ಮಗ ಮಾಡಿದ ತಪ್ಪಿಗೆ ತಂದೆಯೊಬ್ಬ ಜೈಲು ಶಿಕ್ಷೆ ಅನುಭವಿಸುಂತಾಗಿದೆ. ಜೊತೆಗೆ ದಂಡವನ್ನೂ ತೆತ್ತಿದ್ದಾನೆ. ಅಂದಹಾಗೆ, ಈ ಪ್ರಕರಣ ಬೆಳಕಿಗೆ ಬಂದಿದ್ದು ತುಮಕೂರಿನ ಗುಬ್ಬಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ.
ಗುಬ್ಬಿ ಪಟ್ಟಣದ ವ್ಯಕ್ತಿಯೊಬ್ಬ ತನ್ನ ಅಪ್ರಾಪ್ತ ಪುತ್ರನಿಗೆ ಓಡಿಸಲು ಬೈಕ್ ನೀಡಿದ್ದ. ಚಲಾಯಿಸುವ ಆತ ಗುಬ್ಬಿಯಿಂದ ಅರಸೀಕೆರೆಗೆ ತೆರಳುವ ರಸ್ತೆ ಮಾರ್ಗದಲ್ಲಿ ಹೋಗುತ್ತಿದ್ದ ವೇಳೆ ಆಯತಪ್ಪಿ ರಸ್ತೆ ಪಕ್ಕದ ಮಣ್ಣಿನ ಗುಡ್ಡೆಗೆ ಡಿಕ್ಕಿ ಹೊಡೆದಿದ್ದ.
ಪ್ರತ್ಯಕ್ಷದರ್ಶಿಯೊಬ್ಬರು ಈ ಬಗ್ಗೆ ಗುಬ್ಬಿ ಪೊಲೀಸ್ ಠಾಣೆಯಲ್ಲಿ 2024ರ ಅಕ್ಟೋಬರ್ 31 ರಂದು ದೂರು ನೀಡಿದ್ದರು. ಅಪ್ರಾಪ್ತನಿಗೆ ಬೈಕ್ ಚಾಲನೆ ಮಾಡಲು ನೀಡಲಾಗಿದೆ. ಬಾಲಕ ಲೈಸೆನ್ಸ್ ಹೊಂದಿಲ್ಲ. ಇದರಿಂದ ರಸ್ತೆ ಸಂಚಾರ ನಿಯಮಗಳ ಉಲ್ಲಂಘನೆಯಾಗಿದೆ ಎಂದು ಅದರಲ್ಲಿ ದೂರಲಾಗಿತ್ತು.
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ಬಾಲಕನ ತಂದೆಯ ವಿರುದ್ಧ ಎಫ್ಐಆರ್ ದಾಖಲಿಸಿದ್ದರು. ಈ ಕುರಿತು 6 ತಿಂಗಳ ಕಾಲ ನಡೆದ ವಿಚಾರಣೆಯಲ್ಲಿ ತನಿಖಾಧಿಕಾರಿಗಳು ಬೈಕ್ ಮಾಲೀಕರ ವಿರುದ್ಧ ಕೋರ್ಟ್ಗೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.
ಈ ಸಂಬಂಧ ವಿಚಾರಣೆ ನಡೆಸಿದ್ದ ಗುಬ್ಬಿ ಪ್ರಧಾನ ಸಿವಿಲ್ ನ್ಯಾಯಾಲಯವು ಅಪ್ರಾಪ್ತ ಪುತ್ರನಿಗೆ ಬೈಕ್ ನೀಡಿ ಸಂಚಾರ ನಿಯಮ ಉಲ್ಲಂಘಿಸಿದ ಆರೋಪ ಸಾಬೀತಾದ ಹಿನ್ನೆಲೆ ನ್ಯಾಯಾಧೀಶರು ಬೈಕ್ ಮಾಲೀಕನಿಗೆ 1 ದಿನದ ಮಟ್ಟಿಗೆ ಜೈಲು ಶಿಕ್ಷೆ, 30 ಸಾವಿರ ರೂಪಾಯಿ ದಂಡ ವಿಧಿಸಿ ಆದೇಶಿಸಿದ್ದಾರೆ.
ಕೋರ್ಟ್ ಆದೇಶದ ಬಳಿಕ ಪೊಲೀಸರು ಬೈಕ್ ಮಾಲೀಕನನ್ನು ಒಂದು ದಿನದ ಮಟ್ಟಿಗೆ ಜೈಲಿಗೆ ಹಾಕಿದ್ದರು. ಬಳಿಕ ಬಿಡುಗಡೆ ಮಾಡಿದ್ದರು. ಅಪ್ರಾಪ್ತ ಪುತ್ರನ ಎಡವಟ್ಟಿಗೆ ತಂದೆ ಜೈಲುಪಾಲಾಗಿದ್ದಾರೆ. ಈ ಘಟನೆಯು ತಮ್ಮ ಅಪ್ರಾಪ್ತ ಮಕ್ಕಳಿಗೆ ವಾಹನ ಚಲಾಯಿಸಲು ಕೊಡುವ ಪೋಷಕರಿಗೆ ಎಚ್ಚರಿಕೆ ಗಂಟೆಯಾಗಿದೆ.
In a recent incident under the jurisdiction of the Gubbi Police Station in Tumakuru district, a father had to serve a jail term and pay a hefty fine due to his underage son’s traffic violation.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm