ಬ್ರೇಕಿಂಗ್ ನ್ಯೂಸ್
03-07-25 10:54 am HK News Desk ಕರ್ನಾಟಕ
ಸುಬ್ರಹ್ಮಣ್ಯ, ಜು 03 : ಕಡಬ, ಸುಳ್ಯ ತಾಲೂಕು ಹಾಗೂ ಕುಕ್ಕೆಸುಬ್ರಹ್ಮಣ್ಯ ಪರಿಸರದಲ್ಲಿ ಧಾರಾಕಾರವಾಗಿ ಮಳೆ ಮುಂದುವರಿದಿದ್ದು, ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಡೆಯಾಗಿದೆ.
ಮಳೆ ಹಿನ್ನೆಲೆಯಲ್ಲಿ ಕಡಬ ಮತ್ತು ಸುಳ್ಯ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢಶಾಲೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ನೀಡಿ ತಹಶೀಲ್ದಾರರು ಆದೇಶ ಹೊರಡಿಸಿದ್ದಾರೆ.
ಶಿರಾಡಿ ಘಟ್ಟ ಪ್ರದೇಶ ಹಾಗೂ ಕುಕ್ಕೆ ಸುಬ್ರಹ್ಮಣ್ಯ ಪರಿಸದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಲ್ಲಿನ ಕುಮಾರಧಾರ ನದಿ ತುಂಬಿ ಹರಿಯುತ್ತಿದೆ. ರಾತ್ರಿ ವೇಳೆ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳಗೊಂಡಿದ್ದು, ಸ್ನಾನ ಘಟ್ಟ ಸಂಪೂರ್ಣವಾಗಿ ಮುಳುಗಡೆಯಾಗಿ, ಲಗೇಜ್ ಕೊಠಡಿ ಬಳಿವರೆಗೂ ನದಿ ನೀರು ಆವರಿಸಿದೆ.
ನದಿ ನೀರಿನ ಬಳಿಗೆ ಭಕ್ತರು ತೆರಳದಂತೆ ಸೂಚಿಸಲಾಗಿದ್ದು, ನದಿ ದಡದಲ್ಲಿ ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ನದಿ ನೀರಿಗೆ ಇಳಿದು ತೀರ್ಥ ಸ್ನಾನ ನೆರವೇರಿಸುವುದಕ್ಕೂ ನಿರ್ಬಂಧಿಸಲಾಗಿದೆ. ಕುಕ್ಕೆ ಸುಬ್ರಹ್ಮಣ್ಯ, ಬಿಳಿನೆಲೆ, ಬಳ್ಪ, ಐನೆಕಿದು, ಪಂಜ, ಕಡಬ, ಕೋಡಿಂಬಾಳ, ಕೊಲ್ಲಮೊಗ್ರ, ಗುತ್ತಿಗಾರು, ಅರಂತೋಡು, ಸುಳ್ಯ ಪ್ರದೇಶದಲ್ಲೂ ಬುಧವಾರ ರಾತ್ರಿಯಿಂದ ಆರಂಭವಾದ ಧಾರಾಕಾರ ಮಳೆ ಆದೇ ತರಹ ನಿರಂತರವಾಗಿ ಸುರಿಯುತ್ತಲೇ ಇದೆ. ಸುಳ್ಯ ಮತ್ತು ಕಡಬ ತಾಲೂಕು ಕೇಂದ್ರಗಳಲ್ಲಿ ಕಂಟ್ರೋಲ್ ರೂಂ ಸೇವೆಗಳನ್ನು ಆರಂಭಿಸಲಾಗಿದೆ.
ಮತ್ತೊಂದು ಕಡೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ, ಹೊಸನಗರ ಹಾಗೂ ಸಾಗರ ತಾಲೂಕಿನಾದ್ಯಾಂತ ಭಾರಿ ಮಳೆಯಾಗುತ್ತಿರುವುದರಿಂದ ಮೂರು ತಾಲೂಕು ಆಡಳಿತಗಳು ಅಂಗನವಾಡಿ ಸೇರಿದಂತೆ ಶಾಲಾ - ಕಾಲೇಜುಗಳಿಗೆ ರಜೆ ಘೋಷಣೆ ಮಾಡಿವೆ. ಈ ಕುರಿತು ಮೂರು ತಾಲೂಕಿನ ತಹಶೀಲ್ದಾರ್ಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Incessant heavy rainfall continues to lash Kadaba and Sullia taluks, as well as the surrounding areas of Kukke Subrahmanya. As a result, the Kumaradhara river has overflowed, submerging the sacred bathing ghat near the famous temple.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 05:38 pm
HK News Desk
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
26-10-25 04:42 pm
Mangalore Correspondent
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm