ಬ್ರೇಕಿಂಗ್ ನ್ಯೂಸ್
04-07-25 05:29 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 4 : ಹಣಕ್ಕಾಗಿ ಸರ್ಕಾರಿ ನೌಕರರನ್ನು ಪೀಡಿಸುತ್ತಿದ್ದ ಪ್ರಕರಣದಲ್ಲಿ ಲೋಕಾಯುಕ್ತ ಅಧಿಕಾರಿಯ ಭ್ರಷ್ಟಾಚಾರ ಪ್ರಕರಣ ಸಾಬೀತಾಗಿದ್ದು, ಐಪಿಎಸ್ ಅಧಿಕಾರಿ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಿರುವುದಾಗಿ ರಾಜ್ಯದ ಲೋಕಾಯುಕ್ತ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದೆ.
ಲೋಕಾಯುಕ್ತ ಬೆಂಗಳೂರು ನಗರ ಎಸ್ಪಿಯಾಗಿದ್ದ ಐಪಿಎಸ್ ಅಧಿಕಾರಿ ಶ್ರೀನಾಥ್ ಜೋಷಿ ಹಾಗೂ ಕಾನ್ಸ್ಟೇಬಲ್ ನಿಂಗಪ್ಪ ಲಂಚದ ಹಣಕ್ಕಾಗಿ ಭಾರೀ ಅಕ್ರಮ ಎಸಗಿರುವುದು ತನಿಖೆಯಲ್ಲಿ ಪತ್ತೆಯಾಗಿದೆ. ಇವರಿಬ್ಬರೂ ಕರ್ತವ್ಯ ಸಮಯದಲ್ಲಿ ಅಬಕಾರಿ, ಬಿಬಿಎಂಪಿ ಅಧಿಕಾರಿಗಳಿಂದ ಹಣ ವಸೂಲಿ ಮಾಡಿದ್ದು ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿಗೆ ಲೋಕಾಯುಕ್ತ ಪತ್ರ ಬರೆದಿದೆ.
ಶ್ರೀನಾಥ್ ಜೋಷಿ ಹಾಗೂ ನಿಂಗಪ್ಪ ಎಂಬವರು ಲೋಕಾಯುಕ್ತ ದಾಳಿ ಮಾಡಿಸುತ್ತೇವೆ ಎಂದು ಸರ್ಕಾರಿ ಅಧಿಕಾರಿಗಳನ್ನು ಬೆದರಿಸುತ್ತಿದ್ದರು. ‘‘ಕೆಜಿ’’ ಎಂಬ ಕೋಡ್ ವರ್ಡ್ ಬಳಸಿಕೊಂಡು ಹಣ ವಸೂಲಿ ಮಾಡುತ್ತಿದ್ದುದು ತನಿಖೆಯಿಂದ ದೃಢಪಟ್ಟಿದೆ. ಅಕ್ರಮವಾಗಿ ಹಣ ವಸೂಲಿ ಮಾಡಿರುವುದು ಮೇಲ್ನೋಟಕ್ಕೆ ಕಂಡುಬಂದಿದ್ದು, ನಿಂಗಪ್ಪ ಕ್ರಿಪ್ಟೋ ಕರೆನ್ಸಿಯಲ್ಲಿ 4.92 ಕೋಟಿ ರೂ. ಹೂಡಿಕೆ ಮಾಡಿದ್ದರು ಎಂಬುದನ್ನೂ ಲೋಕಾಯುಕ್ತ ತಿಳಿಸಿದೆ.
ಸರ್ಕಾರಿ ಅಧಿಕಾರಿಗಳನ್ನು ಬ್ಲ್ಯಾಕ್ಮೇಲ್ ಮಾಡಿ ಹಣ ವಸೂಲಿ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ನಿಂಗಪ್ಪ ಅವರನ್ನು ಬಂಧಿಸಲಾಗಿತ್ತು. ವಿಚಾರಣೆ ವೇಳೆ, ಲೋಕಾಯುಕ್ತ ಎಸ್ಪಿಯಾಗಿದ್ದ ಶ್ರೀನಾಥ್ ಜೋಷಿ ಜತೆ ನಿರಂತರ ಸಂಪರ್ಕದಲ್ಲಿ ಇದ್ದ ವಿಚಾರ ತಿಳಿದುಬಂದಿತ್ತು. ಶ್ರೀನಾಥ್ ಜೋಷಿ ಜತೆ ಸಂಪರ್ಕದಲ್ಲಿದ್ದುಕೊಂಡೇ ನಿಂಗಪ್ಪ ಸರ್ಕಾರಿ ಅಧಿಕಾರಿಗಳನ್ನು ಹೆದರಿಸಿ ಅವರಿಂದ ಹಣ ಪಡೆದಿದ್ದರು.
ಶ್ರೀನಾಥ್ ಜೋಷಿ ಹಾಗೂ ನಿಂಗಪ್ಪ ವಾಟ್ಸ್ಆ್ಯಪ್ ಮೂಲಕ ಕರೆ ಮಾಡುತ್ತಿದ್ದು, ಸಂದೇಶಗಳನ್ನು ವಿನಿಮಯ ಮಾಡಿಕೊಳ್ಳುತ್ತಿದ್ದರು. ಆ ಕುರಿತ ಸಾಕ್ಷ್ಯಗಳನ್ನೂ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಕಳುಹಿಸಿಕೊಡಲಾಗಿದೆ ಎಂದು ಲೋಕಾಯುಕ್ತ ಹೇಳಿಕೆಯಲ್ಲಿ ತಿಳಿಸಿದೆ.
In a shocking development, the Karnataka Lokayukta has confirmed serious corruption charges against IPS officer Srinath Joshi, who previously served as the Lokayukta SP for Bengaluru Urban. The official statement released today recommends disciplinary action against Joshi for abusing his position to extort money from government employees.
10-07-25 09:53 pm
Bangalore Correspondent
ED Raid Congress MLA Subba Reddy: ಮಲೇಶ್ಯಾ, ಬ್...
10-07-25 12:45 pm
ಹರಿಪ್ರಸಾದ್ ಹೇಳಿಕೆಗೆ ಬಿಜೆಪಿ ಕೆಂಡಾಮಂಡಲ ; ಅರ್ಧ ನ...
09-07-25 10:45 pm
Chamarajanagar Heart Attack, Student; 'ಹೃದಯ"ಕ...
09-07-25 04:12 pm
ಬೆಂಗಳೂರಿನಲ್ಲಿ ಐದು ಕಡೆ ಎನ್ಐಎ ದಾಳಿ ; ಭಯೋತ್ಪಾದಕ...
09-07-25 01:53 pm
11-07-25 12:08 pm
HK News Desk
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
Bangle Seller, Changur Baba Arrest, Uttar Pra...
10-07-25 03:24 pm
Amit Shah; ರಾಜಕೀಯ ನಿವೃತ್ತಿ ಬಳಿಕ ವೇದ, ಉಪನಿಷತ್...
10-07-25 01:00 pm
ಗೋಮಾಂಸ ತಿನ್ನಿಸಿ ಮತಾಂತರಕ್ಕೆ ಯತ್ನ ; ಫೇಸ್ಬುಕ್ಕಲ್...
07-07-25 08:45 pm
10-07-25 07:23 pm
Mangalore Correspondent
Mangalore, Traffic Constable, Lokayukta, Tasl...
10-07-25 04:01 pm
ಮಂಗಳೂರಿನ ಟೈಲರಿಂಗ್ ಶಾಪಲ್ಲೇ ಕುಸಿದು ಬಿದ್ದಿದ್ದ ನವ...
09-07-25 10:25 pm
Mangalore Home Minister Parameshwara, Peace M...
09-07-25 10:17 pm
Peace Meeting, Mangalore, Brijesh Chowta, Ash...
09-07-25 09:01 pm
10-07-25 08:09 pm
HK News Desk
Kerala Couple, Chit Fund Scam; ಚಿಟ್ ಫಂಡ್ ಹೆಸರ...
10-07-25 01:05 pm
Double Murder Hassan, crime: ಆಸ್ತಿ ವಿಚಾರಕ್ಕೆ...
10-07-25 12:04 pm
Drugs News, Mangalore: ಮಂಗಳೂರಿಗೆ ಡ್ರಗ್ಸ್ ಪೂರೈ...
09-07-25 10:56 pm
Kerala Chit Fund, Fraud, Mangalore: 20 ವರ್ಷಗಳ...
08-07-25 10:01 pm