ಬ್ರೇಕಿಂಗ್ ನ್ಯೂಸ್
04-07-25 10:44 pm HK News Desk ಕರ್ನಾಟಕ
ಬೆಳಗಾವಿ, ಜು 04 : ಆಸ್ಪತ್ರೆ ತುಂಬಾ ಗಬ್ಬುನಾಥ, ಶೌಚಾಲಯದ ವಾಸನೆಗೆ ನಿಲ್ಲಂಗಿಲ್ಲ, ಚಿಕ್ಕೋಡಿ ಸರ್ಕಾರಿ ಆಸ್ಪತ್ರೆಯ ಸಾಮಾನ್ಯ ಜನರು ಚಿಕಿತ್ಸೆ ಪಡೆಯುವಂಥ ಸ್ಥಿತಿಯಲ್ಲಿಲ್ಲ. ಹೌದು ಜಿಲ್ಲೆಗೆ ಭೇಟಿ ಕೊಟ್ಟ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಆಸ್ಪತ್ರೆ ಅವ್ಯವಸ್ಥೆ ಕಂಡು ಬೆಚ್ಚಿ ಬಿದ್ದಿದ್ದಾರೆ. ನಾನು ಜಿಲ್ಲೆಗಳ ಹಲವಾರು ಆಸ್ಪತ್ರೆಗಳನ್ನು ನೋಡಿದ್ದೇನೆ. ಆದರೆ ಇಂಥ ಅವ್ಯವಸ್ಥೆಯನ್ನು ಎಲ್ಲೂ ಕಂಡಿಲ್ಲ. ಇಲ್ಲಿ ಸ್ವಚ್ಛತೆ ಎಂಬುದೇ ಮರೆಯಾಗಿದೆ ಎಂದು ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡರು.
ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿರುವ ಸರ್ಕಾರಿ ಆಸ್ಪತ್ರೆಯನ್ನು ಪರಿಶೀಲನೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರ ಬಡಜನರ ಹಿತದೃಷ್ಟಿಯಿಂದ ಹಲವು ಯೋಜನೆಗಳನ್ನು ರೂಪಿಸಿದೆ. ಅದರಲ್ಲೂ ವಿಶೇಷವಾಗಿ ಸರ್ಕಾರಿ ಆಸ್ಪತ್ರೆಗಳಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಆದರೆ, ಇಲ್ಲಿನ ಕೆಲವು ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯದಿಂದ ಚಿಕ್ಕೋಡಿ ಸರ್ಕಾರಿ ಆಸ್ಪತ್ರೆ ನಿರ್ಲಕ್ಷಕ್ಕೊಳಗಾಗಿ ಅವ್ಯವಸ್ಥೆ ತಾಂಡವವಾಡುತ್ತಿದೆ ಎಂದರು.
ಈ ಕುರಿತು ನಾನು ಸರ್ಕಾರಕ್ಕೆ ಪತ್ರ ಬರೆಯುತ್ತೇನೆ. ಈ ಆಸ್ಪತ್ರೆಗೆ ಭೇಟಿ ನೀಡುತ್ತೇನೆಂದು ಹಲವು ಬದಲಾವಣೆಗಳನ್ನು ಮಾಡಿದ್ದರೂ ಕೂಡ ಇಲ್ಲಿ ಸಾಮಾನ್ಯ ಜನರು ಮಲಗುವ ಸ್ಥಿತಿಯಲ್ಲಿಲ್ಲ. ವಿಧಿ ಇಲ್ಲದೆ ಬಡವರು ಚಿಕಿತ್ಸೆ ಪಡೆಯಬೇಕಾಗಿದೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಗ್ರೂಪ್ ಡಿ ನೌಕರರಿಗೆ ಇಲ್ಲಿ ಕಡಿಮೆ ಸಂಬಳ ನೀಡುತ್ತಿದ್ದಾರೆ. ಸರ್ಕಾರದಿಂದ ನಿಗದಿಪಡಿಸಿರುವ ಸಂಬಳ ನೀಡಬೇಕೆಂದು ಸ್ಥಳದಲ್ಲಿದ್ದ ಚಿಕ್ಕೋಡಿ ಉಪವಿಭಾಗಾಧಿಕಾರಿ ಸಂತೋಷ ಸಂಪಗಾಂವಿ ಅವರಿಗೆ ಸೂಚನೆ ನೀಡಿದರು.
ಸರ್ಕಾರ ಒಂದು ಆಸ್ಪತ್ರೆಗೆ ಕೋಟ್ಯಂತರ ರೂಪಾಯಿ ಅನುದಾನ ಬಿಡುಗಡೆ ಮಾಡುತ್ತದೆ. ಆದರೆ ಈ ತಾಲೂಕು ಆಸ್ಪತ್ರೆಯಲ್ಲಿ ಕೇವಲ 20 ಜನ ಒಳರೋಗಿಗಳಿದ್ದಾರೆ. ಇದರಿಂದಲೇ ಇಲ್ಲಿನ ವ್ಯವಸ್ಥೆ ಗೊತ್ತಾಗುತ್ತದೆ ಎಂದು ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಆರೋಗ್ಯ ಸಿಬ್ಬಂದಿಯ ಕಣ್ಣೀರು:
ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ರೋಗಿಗಳು ಹಾಗೂ ಆರೋಗ್ಯ ಸಿಬ್ಬಂದಿಯ ಕುಂದುಕೊರತೆಗಳನ್ನು ಆಲಿಸಿದರು. ಆಸ್ಪತ್ರೆಯಲ್ಲಿನ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ ನೋಡಿ ಥೂ.. ಏನ್ರೀ ಇದು ವಾಸನೆ, ಎಂದು ಅಲ್ಲಿಂದ ಓಡಿ ಹೋದ್ರು. ಒಳ ರೋಗಿಗಳ ಕೋಣೆ ಕಂಡು ಬೆಳಗಾವಿ ಜಿಲ್ಲಾಡಳಿತದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಶುಚಿತ್ವ ಕಾಪಾಡದ ಹಿನ್ನೆಲೆಯಲ್ಲಿ ಮುಖ್ಯ ವೈದ್ಯಾಧಿಕಾರಿಗಳಾದ ಡಾ.ಮಹೇಶ್ ನಾಗರಬೆಟ್ಟ ಅವರನ್ನು ತರಾಟೆಗೆ ತೆಗೆದುಕೊಂಡರು. ಸಿಬ್ಬಂದಿಗೆ ಸರಿಯಾಗಿ ವೇತನ ನೀಡದ ಗುತ್ತಿಗೆದಾರನ ವಿರುದ್ದ ಕ್ರಮ ಕೈಗೊಳ್ಳುವಂತೆ ಚಿಕ್ಕೋಡಿ ಉಪವಿಭಾಗಾಧಿಕಾರಿ ಸಂತೋಷ ಸಂಪಗಾಂವಿ ಅವರಿಗೆ ಸೂಚನೆ ನೀಡಿದರು.
ಆಸ್ಪತ್ರೆಯಲ್ಲಿನ ಕೆಲವು ಅಧಿಕಾರಿಗಳು ಇಲ್ಲಿನ ಆರೋಗ್ಯ ಸಿಬ್ಬಂದಿಯ ಸಂಬಳದಲ್ಲಿ ಹಣ ವಸೂಲಿ ಮಾಡುತ್ತಿದ್ದಾರೆಂದು ಆರೋಪಿಸಿ ಮಹಿಳಾ ಅಧ್ಯಕ್ಷರಿಗೆ ದೂರು ನೀಡಿ ಮಹಿಳಾ ಸಿಬ್ಬಂದಿ ಕಣ್ಣೀರು ಹಾಕಿದರು.
Karnataka State Women's Commission Chairperson Nagalakshmi was left visibly disturbed during her surprise visit to the Chikkodi Government Hospital in Belagavi district, describing the hospital as unfit for public treatment and highlighting severe administrative neglect and unhygienic conditions.
28-08-25 06:23 pm
HK News Desk
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
29-08-25 01:47 pm
HK News Desk
ಮೋದಿ 75 ವರ್ಷಕ್ಕೆ ನಿವೃತ್ತರಾಗಬೇಕು ಎಂದು ಹೇಳಿಲ್ಲ...
29-08-25 12:50 pm
ಪ್ರತಿ ಭಾರತೀಯ ಕುಟುಂಬಗಳು ಮೂರಕ್ಕಿಂತ ಹೆಚ್ಚು ಮಕ್ಕಳ...
29-08-25 10:56 am
Kanhangad Suicide: ಕಾಞಂಗಾಡ್ ; ಬೆಳೆದು ನಿಂತ ಇಬ್...
28-08-25 12:19 pm
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
28-08-25 11:00 pm
Mangalore Correspondent
Mangalore Rain, School College Holiday: ಭಾರೀ...
28-08-25 10:07 pm
Soujanya Murder Case, Mother SIT: ಸೌಜನ್ಯಾ ಕೊಲ...
28-08-25 08:31 pm
Talapady Accident, Mangalore, Auto bus: ಕೇರಳ...
28-08-25 04:05 pm
Loudspeaker, Punjalkatte,Farangipete: ಪುಂಜಾಲ...
28-08-25 02:51 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm