ಬ್ರೇಕಿಂಗ್ ನ್ಯೂಸ್
08-07-25 08:35 pm Bangalore Correspondent ಕರ್ನಾಟಕ
ಬೆಂಗಳೂರು, ಜೂ 08 : ಪ್ರತಿಪಕ್ಷದ ನಾಯಕ ಆರ್. ಅಶೋಕ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮೊದಲು ಅವರ ಕುರ್ಚಿ ಉಳಿಸಿಕೊಳ್ಳಲಿ ಎಂದು ವಿಧಾನ ಪರಿಷತ್ ಸದಸ್ಯ ಬಿ. ಕೆ. ಹರಿಪ್ರಸಾದ್ ಅಶೋಕ್ ಅವರ ಸೆಪ್ಟೆಂಬರ್ ಕ್ರಾಂತಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
ವಿಧಾನಸೌಧದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಎರಡು ವರ್ಷವಾದರೂ ಕೇಂದ್ರದಲ್ಲಿ ಅಧ್ಯಕ್ಷರನ್ನು ನೇಮಕ ಮಾಡಿಲ್ಲ. ಮಹಿಳೆಯರನ್ನು ಹುಡುಕುತ್ತಿದ್ದಾರೆ. ಅರ್ಧನಾರೇಶ್ವರರನ್ನು ಹುಡುಕಿದರೂ ಬಹಳ ಸಂತೋಷ ಎಂದು ಲೇವಡಿ ಮಾಡಿದರು.
ಸಿಎಂ ಸಿದ್ದರಾಮಯ್ಯ, ಡಿ. ಕೆ. ಶಿವಕುಮಾರ್ ದೆಹಲಿ ಪ್ರವಾಸ ವಿಚಾರದ ಕುರಿತು ಮಾತನಾಡಿದ ಅವರು, ಸಿಎಂ ಸ್ಥಾನದ ಬಗ್ಗೆ ಯಾವುದೇ ಗೊಂದಲಗಳು ಇಲ್ಲ. ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳ ನಡುವೆ ಯಾವುದೇ ಗೊಂದಲಗಳು ಇಲ್ಲ. ಸಿಎಂ ಸೀಟು ಗೊಂದಲ ಕೇವಲ ಮಾಧ್ಯಮಗಳ ಸೃಷ್ಟಿ ಎಂದರು.
ಜುಲೈ 15 ರಂದು ಒಬಿಸಿ ಸಭೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ದೇಶದ ಹಿಂದುಳಿದ ಸಮುದಾಯದ ನಾಯಕರು ಒಂದೇ ವೇದಿಕೆಯಲ್ಲಿ ಸೇರುತ್ತಿದ್ದಾರೆ. ಕರ್ನಾಟಕದಲ್ಲಿ ಹಿಂದುಳಿದ ಸಮುದಾಯದ ಮುಖ್ಯಮಂತ್ರಿ ಇರುವುದರಿಂದ ಆಲ್ ಇಂಡಿಯಾ ಕಾಂಗ್ರೆಸ್ನ ಹಿಂದುಳಿದ ಕಮಿಟಿ ಅಧ್ಯಕ್ಷ ಅನಿಲ್ ಜೈಹಿಂದ್ ಇಲ್ಲೇ ಸಭೆ ಮಾಡಲು ತೀರ್ಮಾನ ಮಾಡಿದ್ದಾರೆ. ಅನಿಲ್ ಜೈ ಹಿಂದ್ ನೇತೃತ್ವದಲ್ಲಿ ಭಾರತ್ ಜೋಡೋ ಭವನದಲ್ಲಿ 15ರಂದು ಸಭೆ ನಡೆಯಲಿದೆ. ಇದೇ ಸಭೆಯಲ್ಲಿ ಬಹಳಷ್ಟು ನಿರ್ಣಯ ತೆಗೆದುಕೊಳ್ಳಲಾಗುತ್ತದೆ. ಹಿಂದುಳಿದ ವರ್ಗ ಹಾಗೂ ಜಾತಿ ಜನಗಣತಿ ಬಗ್ಗೆ ಬಹಳಷ್ಟು ನಿರ್ಣಯ ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು.
ಬಿಜೆಪಿಯಿಂದ ಎಂಎಲ್ಸಿ ರವಿಕುಮಾರ್ ಸಮರ್ಥನೆ ವಿಚಾರಕ್ಕೆ ಮಾತನಾಡಿದ ಅವರು, ಸಮರ್ಥನೆ ಮಾಡಿಕೊಳ್ಳುವುದರಲ್ಲಿ ಬಿಜೆಪಿಯವರು ನಿಸ್ಸೀಮರು. ಮೋದಿ ಅವರು ಸೋನಿಯಾ ಗಾಂಧಿ ಅವರಿಗೆ ಜಸ್ಸಿಕೌ ಅಂತ ಹೇಳಿದ್ರು. ಶಶಿ ತರೂರು ಪತ್ನಿಗೆ 50 ಗರ್ಲ್ ಫ್ರೆಂಡ್ ಅಂತ ಹೇಳಿದ್ರು. ಇವೆಲ್ಲ ಕೀಳು ಮಟ್ಟದ ಭಾಷೆಗಳು. ಇಂತಹ ಕೀಳು ಭಾಷೆ ಬಳಸುವುದರಲ್ಲಿ ಈ ನಾಗಪುರದ ಗೋಬರ್ ಯುನಿವರ್ಸಿಟಿಗಳು ಡಾಕ್ಟರೇಟ್ ತೆಗೆದುಕೊಂಡಿದ್ದಾರೆ. ಎಲ್ಲಿವರೆಗೂ ಗೋಬರ್ ಯುನಿವರ್ಸಿಟಿ, ಎಲ್ಲಿಯವರೆಗೆ ನಾಗಪುರ ಯುನಿವರ್ಸಿಟಿಯನ್ನು ನಾವು ರದ್ದು ಮಾಡುವುದಿಲ್ಲವೋ, ಅಲ್ಲಿವರೆಗೂ ಇದು ಹೀಗೆಯೇ ಇರುತ್ತದೆ ಎಂದು ವಾಗ್ದಾಳಿ ನಡೆಸಿದರು.
ರವಿಕುಮಾರ್ ಹೀಗೆ ಮಾತಾಡಿರೋದು ಹೊಸದೇನು ಅಲ್ಲ. ಬಿಜೆಪಿ ಸಂಸ್ಕೃತಿಯೇ ಹೆಣ್ಣುಮಕ್ಕಳಿಗೆ ಅವಹೇಳನಕಾರಿಯಾಗಿ ಮಾತನಾಡುವುದು. ಬಿಜೆಪಿ ಅವರಿಂದ ಇದನ್ನು ಬಿಟ್ಟು ಬೇರೆ ಏನೂ ನಿರೀಕ್ಷೆ ಮಾಡಲು ಆಗುವುದಿಲ್ಲ. ರವಿಕುಮಾರ್ ಕೇಸ್ ನಲ್ಲಿ ಕೋರ್ಟ್ ಎಫ್ಐಆರ್ ರದ್ದು ಮಾಡಿಲ್ಲ. ಅದೇ ಸಂತೋಷದ ಸುದ್ದಿ. ನ್ಯಾಯಾಲಯಗಳು ಕಠಿಣ ಕ್ರಮ ತೆಗೆದುಕೊಂಡಾಗ ಇಂತಹ ಮಾತುಗಳಿಗೆ ಕಡಿವಾಣ ಬೀಳುತ್ತವೆ ಎಂದು ಅಭಿಪ್ರಾಯಪಟ್ಟರು.
ರವಿಕುಮಾರ್ ಈಗ ಜಾಮೀನು ಪಡೆದು ಹೊರಗೆ ಇದ್ದಾರೆ. ಈಗ ಅವರ ನಾಲಿಗೆಗೆ ಕಡಿವಾಣ ಬೀಳುತ್ತದೆ ಎಂದು ಅನ್ನಿಸುತ್ತದೆ. ಸಭಾಪತಿಗಳಿಗೆ ನಾವು ದೂರು ಕೊಟ್ಟಿದ್ದೇವೆ. ಸದನಕ್ಕೆ ಅಗೌರವ ತಂದಿದ್ದಾರೆ, ಅವರನ್ನು ವಜಾ ಮಾಡಿ, ಇಂತಹ ಭಾಷೆ ಪ್ರಯೋಗ ಸರಿಯಲ್ಲ ಎಂದು ಹೇಳಿದ್ದೇವೆ. ಸಭಾಪತಿಗಳು ಏನು ಕ್ರಮ ತೆಗೆದುಕೊಳ್ಳುತ್ತಾರೆ ಎಂಬುದನ್ನು ನೋಡೊಣ. ಸದನ ಪ್ರಾರಂಭವಾದಾಗ ಈ ವಿಷಯ ಪ್ರಸ್ತಾಪ ಮಾಡುತ್ತೇವೆ ಎಂದು ಹರಿಪ್ರಸಾದ್ ಹೇಳಿದರು.
Senior Congress leader and MLC B.K. Hariprasad has strongly responded to BJP leader and Leader of the Opposition R. Ashoka’s “September Kranti” statement, advising the BJP to first secure their own positions before questioning others.
29-08-25 05:59 pm
HK News Desk
Chikkamagaluru, Police, Fine: ಸಾರ್ವಜನಿಕರಿಗೆ ಮ...
28-08-25 06:23 pm
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
29-08-25 05:20 pm
HK News Desk
PM Modi Japan: ಪ್ರಧಾನಿ ಮೋದಿಗೆ ಜಪಾನ್ನಲ್ಲಿ ಗಾಯ...
29-08-25 01:47 pm
ಮೋದಿ 75 ವರ್ಷಕ್ಕೆ ನಿವೃತ್ತರಾಗಬೇಕು ಎಂದು ಹೇಳಿಲ್ಲ...
29-08-25 12:50 pm
ಪ್ರತಿ ಭಾರತೀಯ ಕುಟುಂಬಗಳು ಮೂರಕ್ಕಿಂತ ಹೆಚ್ಚು ಮಕ್ಕಳ...
29-08-25 10:56 am
Kanhangad Suicide: ಕಾಞಂಗಾಡ್ ; ಬೆಳೆದು ನಿಂತ ಇಬ್...
28-08-25 12:19 pm
29-08-25 03:48 pm
Mangalore Correspondent
Puttur Tahsildar, Lokayukta Raid: ಜಮೀನು ಪರಭಾರ...
28-08-25 11:00 pm
Mangalore Rain, School College Holiday: ಭಾರೀ...
28-08-25 10:07 pm
Soujanya Murder Case, Mother SIT: ಸೌಜನ್ಯಾ ಕೊಲ...
28-08-25 08:31 pm
Talapady Accident, Mangalore, Auto bus: ಕೇರಳ...
28-08-25 04:05 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm