Shiradi Ghat Accident, Car: ಶಿರಾಡಿ ಘಾಟ್ ; ರಸ್ತೆ ಬದಿ ಜಲಪಾತ ನೋಡಲು ಹೋಗಿ ಪ್ರಪಾತಕ್ಕಿಳಿದ ಕಾರು, ತಪ್ಪಿದ ಅನಾಹುತ 

14-07-25 01:43 pm       HK News Desk   ಕರ್ನಾಟಕ

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಜಲಪಾತಕ್ಕೆ ಬಿದ್ದಿದ್ದು ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಶಿರಾಡಿಘಾಟ್ ರಸ್ತೆಯಲ್ಲಿ ನಡೆದಿದೆ. 

ಹಾಸನ, ಜುಲೈ 14 : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಜಲಪಾತಕ್ಕೆ ಬಿದ್ದಿದ್ದು ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಶಿರಾಡಿಘಾಟ್ ರಸ್ತೆಯಲ್ಲಿ ನಡೆದಿದೆ. 

ಬೆಂಗಳೂರು ಮೂಲದ ಪ್ರವಾಸಿಗರು ಪ್ರಯಾಣಿಸುತ್ತಿದ್ದ ವೇಳೆ ಜಲಪಾತ ವೀಕ್ಷಣೆಗೆ ಕಾರು ನಿಲ್ಲಿಸುವಾಗ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ ಪಕ್ಕದ ಫಾಲ್ಸ್‌ಗೆ ಕಾರು ಉರುಳಿ ಬಿದ್ದಿದ್ದು, ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮಲೆನಾಡು ಭಾಗದಲ್ಲಿ ಭಾರೀ ಮಳೆಯಿಂದ ಕಿರು ಜಲಪಾತಗಳು ತುಂಬಿ ಹರಿಯುತ್ತಿದ್ದು, ಅದನ್ಹು ನೋಡಲು ಹೋಗಿ ಕಾರು ಅಪಾಯಕ್ಕೀಡಾಗಿದ. 

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

A major mishap was narrowly avoided at Shiradi Ghat in Sakleshpur taluk when a car carrying tourists from Bengaluru veered off the road and plunged near a waterfall due to the driver losing control.