ಬ್ರೇಕಿಂಗ್ ನ್ಯೂಸ್
15-07-25 01:32 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 15 : ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಿದ್ದು, 35 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿ ಪಾಲನೆಯಾಗುತ್ತಿಲ್ಲ ಎಂಬ ವಿಪಕ್ಷಗಳ ಆರೋಪದ ಬೆನ್ನಲ್ಲೇ ಮಹತ್ವದ ವರ್ಗಾವರ್ಗಿ ನಡೆಸಿದೆ. ಕಾರವಾರದಲ್ಲಿ ದಕ್ಷ ಎಸ್ಪಿಯಾಗಿ ಗಮನ ಸೆಳೆದಿದ್ದ ನಾರಾಯಣ ಅವರನ್ನು ಬೆಂಗಳೂರು ಡಿಸಿಪಿ ಮಾಡಲಾಗಿದೆ. ಮಂಗಳೂರು ಕಾನೂನು ಸುವ್ಯವಸ್ಥೆ ವಿಭಾಗದಲ್ಲಿ ಎರಡು ವರ್ಷಗಳಿಂದ ಡಿಸಿಪಿಯಾಗಿದ್ದ ಸಿದ್ದಾರ್ಥ ಗೋಯಲ್ ಅವರಿಗೆ ಭಡ್ತಿ ಸಿಕ್ಕಿದ್ದು ಬಾಗಲಕೋಟೆ ಎಸ್ಪಿ ಮಾಡಲಾಗಿದೆ.
ಕೆಎಸ್ ಆರ್ ಪಿಯಲ್ಲಿದ್ದ 2019ನೇ ಬ್ಯಾಚ್ ಐಪಿಎಸ್ ಅಧಿಕಾರಿ ದೀಪನ್ ಎಂ.ಎನ್ ಅವರನ್ನು ಕಾರವಾರ ಎಸ್ಪಿ ಮಾಡಲಾಗಿದೆ. ಉಡುಪಿ ಎಎನ್ಎಫ್ ನಲ್ಲಿದ್ದ ಜಿತೇಂದ್ರ ಕುಮಾರ್ ದಯಾಮ ಅವರನ್ನು ಮಂಗಳೂರು ಡಿಸಿಪಿ ಆಗಿ ನೇಮಕ ಮಾಡಲಾಗಿದೆ. ಕೋಮು ಹಿಂಸೆ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸ್ ಕಮಿಷನರ್ ಮತ್ತು ಎಸ್ಪಿ ಹುದ್ದೆಗೆ ತಿಂಗಳ ಹಿಂದಷ್ಟೇ ಹಿಂದೆ ಇದ್ದವರನ್ನು ಬದಲಿಸಿ ಹೊಸಬರನ್ನು ನೇಮಿಸಲಾಗಿತ್ತು.
ಐಪಿಎಸ್ ಅಧಿಕಾರಿಗಳ ವರ್ಗಾವಣೆ ವಿವರ;
ಅಕ್ಷಯ್ ಮಚೀಂದ್ರ( ಡಿಸಿಪಿ, ಬೆಂಗಳೂರು ಕೇಂದ್ರ ವಿಭಾಗ), ಅಜಯ್ ಹಿಲೋರಿ (ಜಂಟಿ ಪೊಲೀಸ್ ಆಯುಕ್ತ, ಅಪರಾಧ ವಿಭಾಗ) ಪರಶುರಾಮ್ (ಡಿಸಿಪಿ, ವೈಟ್ ಫೀಲ್ಡ್ ವಿಭಾಗ), ಕಾರ್ತಿಕ್ ರೆಡ್ಡಿ (ಜಂಟಿ ಪೊಲೀಸ್ ಆಯುಕ್ತ, ಸಂಚಾರ ವಿಭಾಗ), ಅನೂಪ್ ಶೆಟ್ಟಿ (ಬೆಂಗಳೂರು ಪಶ್ಚಿಮ ವಿಭಾಗ ಡಿಸಿಪಿ, ಸಂಚಾರ), ಶಿವಪ್ರಕಾಶ್ ದೇವರಾಜು (ಲೋಕಾಯುಕ್ತ ಎಸ್ಪಿ, ಬೆಂಗಳೂರು)
ಜಯಪ್ರಕಾಶ್ (ಬೆಂಗಳೂರು ಉತ್ತರ ಸಂಚಾರ ವಿಭಾಗ)
ಎಂ.ನಾರಾಯಣ್ (ಎಲೆಕ್ಟ್ರಾನಿಕ್ ಸಿಟಿ ವಿಭಾಗ, ಡಿಸಿಪಿ), ಅನಿತಾ ಬಿ ಹದ್ದಣ್ಣನವರ್ ( ಬೆಂಗಳೂರು ಆಗ್ನೇಯ ವಿಭಾಗ ಡಿಸಿಪಿ), ಸೈದಲು ಅಡಾವತ್ (ಸಿಐಡಿ, ಎಸ್ಪಿ) ಬಾಬಾ ಸಾಬ್ ನ್ಯಾಮಗೌಡ ( ಬೆಂಗಳೂರು ಉತ್ತರ ವಿಭಾಗ, ಡಿಸಿಪಿ) ನಾಗೇಶ್ (ಬೆಂಗಳೂರು ವಾಯುವ್ಯ ವಿಭಾಗ, ಡಿಸಿಪಿ) ಶ್ರೀಹರಿ ಬಾಬು (ಬೆಂಗಳೂರು ಸಿಸಿಬಿ ಡಿಸಿಪಿ), ಸೌಮ್ಯಲತಾ (ಸಿಎಆರ್ ಹೆಡ್ ಕ್ವಾರ್ಟರ್ಸ್, ಡಿಸಿಪಿ) ಎಂ.ಎನ್.ಅನುಚೇತ್ (ಡಿಐಜಿ ನೇಮಕಾತಿ ವಿಭಾಗ), ವರ್ತಿಕಾ ಕಟೀಯಾರ್ ( ಬಳ್ಳಾರಿ ವಲಯ, ಡಿಐಜಿ)
ಶಾಂತರಾಜು – ಎಸ್ಪಿ, ಗುಪ್ತಚರ ಇಲಾಖೆ, ಸಿರಿಗೌರಿ – ಎಸ್ಪಿ, ರಾಜ್ಯ ಅಪರಾಧ ದಾಖಲೆ ವಿಭಾಗ, ಸುಮನ್.ಡಿ ಪೆನ್ನೆಕರ್ – ಡಿಸಿಪಿ, ಇಂಟಲಿಜೆನ್ಸ್ , ಸಿಮಿ ಮರೀಯ ಜಾರ್ಜ್ – ಡಿಸಿಪಿ, ದಕ್ಷಿಣ ವಿಭಾಗ ಸಂಚಾರ, ವೈ.ಅಮರನಾಥ್ ರೆಡ್ಡಿ– ಕಮಾಂಡೆಂಟ್ ಫಸ್ಟ್ ಬೆಟಾಲಿಯನ್ KSRP, ಯಶೋಧ ವಟ್ಟಗೋಡಿ – ಎಸ್ಪಿ, ಹಾವೇರಿ, ಗುಂಜನ್ ಅರ್ಯಾ – ಎಸ್ಪಿ, ಧಾರವಾಡ, ಎಂ.ಗೋಪಾಲ್ – ಜಂಟಿ ನಿರ್ದೇಶಕ, ಎಫ್ಎಸ್ಎಲ್ ಬೆಂಗಳೂರು, ಸಿದ್ಧಾರ್ಥ ಗೋಯಲ್ – ಎಸ್ಪಿ, ಬಾಗಲಕೋಟೆ, ರೋಹನ್ ಜಗದೀಶ್ – ಎಸ್ಪಿ, ಗದಗ, ಶಿವಾಂಶು ರಜಪೂತ – ಎಸ್ಪಿ, ಕೆಜಿಎಫ್, ಜಿತೇಂದ್ರ ಕುಮಾರ್ – ಡಿಸಿಪಿ ಕಾನೂನು ಸುವ್ಯವಸ್ಥೆ, ಮಂಗಳೂರು ನಗರ, ಎಂ.ಎನ್.ದೀಪನ್ – ಎಸ್ಪಿ, ಉತ್ತರ ಕನ್ನಡ, ಎಸ್.ಜಾನವಿ – ಎಸ್ಪಿ, ವಿಜಯನಗರ, ಚಂದ್ರಗುಪ್ತ – ಐಜಿಪಿ, ಈಶಾನ್ಯ ಕಲಬುರಗಿ, ಇಡಾ ಮಾರ್ಟಿನ್ ಮಾರ್ಬಾನಿಯಾಂಗ್ – ಡಿಐಜಿ, ಬೆಂಗಳೂರು ಪೊಲೀಸ್ ಹೆಡ್ಕ್ವಾರ್ಟರ್ಸ್, ಕಾರ್ತಿಕ್ ರೆಡ್ಡಿ – ಡಿಐಜಿ, ಜಂಟಿ ಆಯುಕ್ತರು, ಬೆಂಗಳೂರು ಸಂಚಾರ ಪೊಲೀಸ್
In a significant administrative overhaul, the Karnataka government has transferred 35 IPS officers, issuing new postings and promotions across various departments. The reshuffle comes in the backdrop of mounting criticism from the opposition over the deteriorating law and order situation in the state.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 07:19 pm
Mangalore Correspondent
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
15-07-25 06:52 pm
Bangalore Correspondent
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm
Mangalore Police, Arrest, NITTE College Stude...
15-07-25 01:13 pm
Mangalore Crime, Police: ದುಬೈನಲ್ಲಿ ವಹಿವಾಟು ;...
15-07-25 11:38 am