ಬ್ರೇಕಿಂಗ್ ನ್ಯೂಸ್
16-07-25 03:58 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 16 : ಸೈಬರ್ ವಂಚಕರು ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ಡಿಜಿಟಲ್ ಅರೆಸ್ಟ್ ಎಂದು ಹೇಳಿ ಬೆದರಿಕೆ ಹಾಕಿ ಲಕ್ಷಾಂತರ ರೂಪಾಯಿ ಹಣ ದೋಚಿದ್ದಲ್ಲದೇ, ಮತ್ತಷ್ಟು ಹಣಕ್ಕಾಗಿ ಪೀಡಿಸಿದ್ದಕ್ಕೆ ಬೆಸ್ಕಾಂ ಸಿಬ್ಬಂದಿಯೊಬ್ಬ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಕೆಲಗೆರೆ ಗ್ರಾಮದಲ್ಲಿ ನಡೆದಿದೆ.
ಸೈಬರ್ ವಂಚಕರ ಕಿರುಕುಳದ ಬಗ್ಗೆ ಡೆತ್ ನೋಟ್ ಬರೆದಿಟ್ಟು ಬೆಸ್ಕಾಂ ಸಿಬ್ಬಂದಿ ಕುಮಾರ್ (42) ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಲ್ಲದೆ, ಡೆತ್‌ನೋಟ್‌ನಲ್ಲಿ ಡಿಜಿಟಲ್ ಅರೆಸ್ಟ್ ಮತ್ತು ತನಗೆ ನೀಡಿದ್ದ ಕಿರುಕುಳದ ಬಗ್ಗೆ ತಿಳಿಸಿದ್ದಾರೆ. ಬೆಂಗಳೂರಿನ ಹೆಚ್‌ಎಸ್‌ಆರ್ ಲೇಔಟ್‌ನಲ್ಲಿ ಕುಮಾರ್ ಬೆಸ್ಕಾಂ ಹೊರಗುತ್ತಿಗೆ ನೌಕರನಾಗಿ ಕೆಲಸ ಮಾಡುತ್ತಿದ್ದರು. ವಿಕ್ರಮ್ ಗೋಸ್ವಾಮಿ ಎಂಬಾತ ವೀಡಿಯೋ ಕರೆ ಮಾಡಿ ತಾನು ಸಿಬಿಐ ಅಧಿಕಾರಿ ಎಂದು ಪರಿಚಯಿಸಿಕೊಂಡಿದ್ದ. ನೀವು ಡಿಜಿಟಲ್ ಅರೆಸ್ಟ್ ಆಗಿದ್ದೀರಿ ಎಂದು ನಂಬಿಸಿ, ಕೇಸ್‌ನಿಂದ ಕೈಬಿಡಲು ಹಣ ಹಾಕುವಂತೆ ಬೆದರಿಸಿದ್ದ. ಸುಮಾರು 11 ಲಕ್ಷ ಹಣವನ್ನ ತನ್ನ ಬೇರೆ ಬೇರೆ ಬ್ಯಾಂಕ್ ಅಕೌಂಟ್‌ಗೆ ಹಾಕಿಸಿದ್ದ. ಮತ್ತಷ್ಟು ಹಣಕ್ಕಾಗಿ ಬೆದರಿಸಿದ್ದು ಮಾನಸಿಕ ಕಿರುಕುಳಕ್ಕೆ ಬೇಸತ್ತು ಸಾವಿಗೆ ಶರಣಾಗುತ್ತಿದ್ದೇನೆ. ಜೊತೆಗೆ ತನ್ನ ಅನಾರೋಗ್ಯದ ಬಗ್ಗೆಯೂ ಉಲ್ಲೇಖಿಸಿದ್ದು ಹಣವನ್ನೆಲ್ಲ ಇವರಿಗೆ ಕೊಟ್ಟು ಕಳೆದುಕೊಂಡಿದ್ದೇನೆ ಎಂದೂ ತಿಳಿಸಿದ್ದಾರೆ.
ವಿಕ್ರಂ ಗೋಸ್ವಾಮಿ, ಸಿಬಿಐ ಅಂತ ನನಗೆ 8109931663ರ ನಂಬರ್‌ನಿಂದ ಫೋನ್ ಮಾಡಿ ನಿನ್ನ ಮೇಲೆ ಅರೆಸ್ಟ್ ವಾರೆಂಟ್ ಇದೆ ಎಂದು ಹೆದರಿಸಿದ್ದ. ಮೊದಲಿಗೆ ನನ್ನ ಅಕೌಂಟಿಗೆ 1,95,000 ರೂ. ಹಾಕು ಎಂದು ಅಕೌಂಟ್ ನಂಬರ್ ಕಳುಹಿಸಿದ್ದು, ನಾನು ಭಯಪಟ್ಟು ಹಣವನ್ನು ಹಾಕಿದ್ದೆ. ಆನಂತರವೂ ಫೋನ್ ಮಾಡಿ ಹಣ ಹಾಕಲು ಬೆದರಿಕೆ ಹಾಕಿದ್ದ. ನನ್ನಿಂದ ಬೇರೆ ಬೇರೆ ಖಾತೆಗಳಿಗೆ ಸುಮಾರು 11 ಲಕ್ಷ ಹಾಕಿಸಿಕೊಂಡಿದ್ದಾರೆ ಎಂದು ಬರೆಯಲಾಗಿದೆ.
ಘಟನೆ ಸಂಬಂಧ ಚನ್ನಪಟ್ಟಣ ತಾಲೂಕಿನ ಎಂ.ಕೆ.ದೊಡ್ಡಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದು ಪ್ರಕರಣವನ್ನು ಸೈಬರ್ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ.
In a shocking case of cybercrime-induced mental harassment, a BESCOM contract employee from Karnataka died by suicide after cyber fraudsters, posing as CBI officers, extorted over ₹11 lakh from him under the pretense of a “digital arrest.”
28-08-25 06:23 pm
HK News Desk
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 11:00 pm
Mangalore Correspondent
Mangalore Rain, School College Holiday: ಭಾರೀ...
28-08-25 10:07 pm
Soujanya Murder Case, Mother SIT: ಸೌಜನ್ಯಾ ಕೊಲ...
28-08-25 08:31 pm
Talapady Accident, Mangalore, Auto bus: ಕೇರಳ...
28-08-25 04:05 pm
Loudspeaker, Punjalkatte,Farangipete: ಪುಂಜಾಲ...
28-08-25 02:51 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm