ಬ್ರೇಕಿಂಗ್ ನ್ಯೂಸ್
23-12-20 05:48 pm Headline Karnataka News Network ಕರ್ನಾಟಕ
ಬೆಂಗಳೂರು, ಡಿ.23: ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಮತ್ತೊಬ್ಬ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ನಡುವೆ ಮಾತಿನ ಸಮರ ಏರ್ಪಟ್ಟಿರುವಾಗಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಎಚ್ಡಿಕೆ ಜೊತೆಗಿನ ಸಂಬಂಧಕ್ಕೆ ದೋಸ್ತಿಯ ಬಣ್ಣ ಹಚ್ಚಲು ಮುಂದಾಗಿದ್ದಾರೆ.
ಕುಮಾರಸ್ವಾಮಿ ಜೊತೆಗಿನ ಸಂಬಂಧದ ಬಗ್ಗೆ ಕೇಳಿದ ಪ್ರಶ್ನೆಗೆ, ಹೀ ಈಸ್ ಮೈ ಗುಡ್ ಫ್ರೆಂಡ್. ಟುಡೇ ಆಲ್ಸೋ ಅಂಡ್ ಟುಮಾರೋ.. ಎಂದು ಚುಟುಕಾಗಿ ಉತ್ತರಿಸಿದ ಡಿಕೆಶಿ, ಅವರನ್ನೇಕೆ ನೀವು ಹಳೇ ದೋಸ್ತಿ ಎನ್ನುತ್ತೀರಿ. ನಾನು ಯಾರ ಜೊತೆಗೂ ದ್ವೇಷ ಇಟ್ಟುಕೊಂಡಿಲ್ಲ. ಎಲ್ಲವನ್ನೂ ಬಿಟ್ಟಿದ್ದೀನಿ. ಕುಮಾರಸ್ವಾಮಿ ಈಗಲೂ ಸ್ನೇಹಿತರು, ಮುಂದೆಯೂ ಸ್ನೇಹಿತರು ಎಂದು ಹೇಳಿದ್ದಾರೆ.
ನಾನು ಬಂಡೆಯೂ ಅಲ್ಲ. ಜಲ್ಲಿಯೂ ಅಲ್ಲ. ಆದರೂ ನಮ್ಮನ್ನು ಅವರು ಬಳಸಿಕೊಂಡಿದ್ದಾರೆ ಎಂದು ಕುಟುಕಿದ ಡಿಕೆಶಿ, ಜೆಡಿಎಸ್ ನಾಯಕರ ಹೇಳಿಕೆ ಬಗ್ಗೆ ನನಗ್ಯಾಕೆ ನೋವು ಆಗಬೇಕು. ಅವರದ್ದು ಬೇರೆಯದ್ದೇ ಪಕ್ಷ. ಅವರನ್ನು ಯಾಕೆ ಡಿ ಗ್ರೇಡ್ ಮಾಡಬೇಕು. ಸಿಎಂ ಮತ್ತು ಅವರ ನಡುವಿನ ಎಡ್ಜಸ್ಟ್ ಮೆಂಟ್ ಏನಿದೆಯೋ ಗೊತ್ತಿಲ್ಲ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ಪ್ರತಿ ಬಾರಿಯೂ ಟೀಕಿಸುತ್ತಿರುವ ಹಿನ್ನೆಲೆಯಲ್ಲಿ ವ್ಯಗ್ರರಾಗಿರುವ ಕುಮಾರಸ್ವಾಮಿ, ಕಾಂಗ್ರೆಸ್ ಜೊತೆಗೆ ದೋಸ್ತಿ ಮಾಡಿಕೊಂಡು ಕೆಟ್ಟೆ ಎನ್ನುತ್ತಿದ್ದಾರೆ. ತನ್ನ ಸರಕಾರ ಪತನವಾಗಲು ಸಿದ್ದರಾಮಯ್ಯ ಕಾರಣ ಎನ್ನುತ್ತಾ ಮಾತಿಗೆ ಮಾತು ಬೆಳೆದಿದ್ದು, ಕಾಂಗ್ರೆಸ್- ಜೆಡಿಎಸ್ ಮೈತ್ರಿ ಕಷ್ಟ ಎನ್ನುವ ಸ್ಥಿತಿ ಉಂಟಾಗಿದೆ. ಇದೇ ವೇಳೆ, ಕುಮಾರಸ್ವಾಮಿ ಬಹಿರಂಗವಾಗೇ ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ.
ಇಂಥ ಸಂದರ್ಭಲ್ಲಿಯೇ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಕುಮಾರಸ್ವಾಮಿಯ ಸಿಟ್ಟು ಶಮನಗೊಳಿಸುವ ಯತ್ನ ಮಾಡಿದ್ದಾರೆ. ಅಲ್ಲದೆ, ಸಿದ್ದರಾಮಯ್ಯಗೆ ತನ್ನ ಮಾತಿನ ಮೂಲಕವೇ ತಿವಿಯುವ ಕೆಲಸ ಮಾಡಿದ್ದಾರೆ.
I have no enmity towards anyone. H D Kumaraswamy will always be my fried today and tomorrow said Kpcc president D K Shivakumar the the media persons in Bengaluru.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm