ಬ್ರೇಕಿಂಗ್ ನ್ಯೂಸ್
18-07-25 10:31 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 18 : ರಾಜ್ಯದಲ್ಲಿ ಪರಮಾಣು ವಿದ್ಯುತ್ ಸ್ಥಾವರ ಮತ್ತು ಮೂರು ಉಷ್ಣ ವಿದ್ಯುತ್ ಸ್ಥಾವರ ಸ್ಥಾಪನೆಗೆ ಸಂಭಾವ್ಯ ಸ್ಥಳಗಳನ್ನು ಗುರುತಿಸುವ ಬಗ್ಗೆ ಹಾಗೂ ಈ ಕುರಿತು ಪ್ರಾಥಮಿಕ ಅಧ್ಯಯನಗಳನ್ನು ನಡೆಸಲು ಸಂಪುಟ ಸಭೆಯಲ್ಲಿ ಅನುಮತಿ ನೀಡಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ ಪಾಟೀಲ್ ತಿಳಿಸಿದ್ದಾರೆ.
NTPC ಅಧ್ಯಯನ ಮಾಡಲು ಮೂರು ಸ್ಥಳಗಳನ್ನು ಗುರುತಿಸಿದ್ದು ಚರ್ಚೆ ನಡೆಸಲಾಗಿದೆ. ಆದರೆ ಇದನ್ನು ಸಚಿವ ಸಂಪುಟ ಸಭೆ ಒಪ್ಪಲಿಲ್ಲ. ಸಂಭಾವ್ಯ ಕಾರ್ಯ ಸಾಧ್ಯ ಪರ್ಯಾಯಗಳಿಗಾಗಿ ಇಡೀ ರಾಜ್ಯದಲ್ಲಿ ಅಧ್ಯಯನ ಮಾಡುವಂತೆ ಸೂಚಿಸಲು ನಿರ್ಧರಿಸಿದ್ದೇವೆ. ನಂತರ ರಾಜ್ಯ ಸರ್ಕಾರವು ಪರಿಣತರ ಅಭಿಪ್ರಾಯ ತೆಗೆದುಕೊಳ್ಳುತ್ತದೆ ಎಂದು ಎಚ್.ಕೆ ಪಾಟೀಲ್ ಹೇಳಿದರು.
ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪರಮಾಣು ಯೋಜನೆ ಹೊಂದುವ ಅಗತ್ಯವಿದೆ ಎಂಬುದಕ್ಕೆ ಒಪ್ಪಿದ್ದೇವೆ. ಆದರೆ ಸ್ಥಳದ ವಿಷಯದಲ್ಲಿ ಗೊಂದಲ ಇದೆ. ಎಲ್ಲಾ ಸಂಭಾವ್ಯ ಪರ್ಯಾಯಗಳನ್ನು ಅಧ್ಯಯನ ಮಾಡಿ ವರದಿ ಸಲ್ಲಿಸಲು ಸೂಚಿಸಲಾಗಿದೆ. ಪ್ರಸ್ತುತ NTPC ಗುರುತಿಸಿರುವ ಮೂರು ಸ್ಥಳಗಳು ವಿಜಯಪುರ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಯಲ್ಲಿವೆ. ಚರ್ಚೆಯ ನಂತರ ವಿವಿಧ ಕಾರಣಗಳಿಗಾಗಿ ಅವುಗಳನ್ನು ಪರಿಗಣಿಸಲಾಗಿಲ್ಲ ಎಂದು ಎಚ್ ಕೆ ಪಾಟೀಲ್ ಹೇಳಿದರು.
ರಾಜ್ಯದಲ್ಲಿ ಪ್ರವಾಸೋದ್ಯಮ ಉತ್ತೇಜಿಸಲು ಹಂಪಿ- ಬಾದಾಮಿ- ಐಹೊಳೆ- ಪಟ್ಟದಕಲ್ಲು- ವಿಜಯಪುರ ಸೇರಿದಂತೆ ಉತ್ತರ ಕರ್ನಾಟಕ ಪ್ರವಾಸಿ ಸರ್ಕ್ಯೂಟ್ ಅನ್ನು ಕರ್ನಾಟಕ ಪ್ರವಾಸೋದ್ಯಮ ಮೂಲಸೌಕರ್ಯ ಲಿಮಿಟೆಡ್ ಮೂಲಕ ಅಂದಾಜು 2,166.22 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ ಎಂದು ಪಾಟೀಲ್ ಹೇಳಿದರು.
ಕೋಲಾರ ಜಿಲ್ಲೆ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನಲ್ಲಿರುವ 126 ಕೆರೆಗಳನ್ನು ಬೆಂಗಳೂರು ನಗರದ ಸಂಸ್ಕರಿಸಿದ ತ್ಯಾಜ್ಯ ನೀರಿನಿಂದ ತುಂಬಿಸುವ ನೀರಾವರಿ ಯೋಜನೆಯ 5 ವರ್ಷಗಳ ಕಾರ್ಯಾಚರಣೆ ಮತ್ತು ನಿರ್ವಹಣೆ ಕೆಲಸವನ್ನು 128 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಕೈಗೊಳ್ಳಲು ಸಂಪುಟವು ಆಡಳಿತಾತ್ಮಕ ಅನುಮೋದನೆ ನೀಡಿದೆ.
The Karnataka Cabinet has given in-principle approval to identify potential locations for establishing a nuclear power plant and three additional thermal power plants in the state, Law and Parliamentary Affairs Minister H.K. Patil announced on Thursday.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm