ಬ್ರೇಕಿಂಗ್ ನ್ಯೂಸ್
19-07-25 03:05 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 19 : ಪೊಲೀಸರು 'ಆರ್‌ಸಿಬಿ ಸೇವಕರು' ಎಂಬಂತೆ ವರ್ತಿಸಿದ್ದರಿಂದ ಕಾಲ್ತುಳಿತ ಪ್ರಕರಣ ಸಂಭವಿಸಿತು ಎಂಬ ಸರ್ಕಾರದ ನಿಲುವಿಗೆ ಅಮಾನತುಗೊಂಡ ಐಪಿಎಸ್ ಅಧಿಕಾರಿ ವಿಕಾಶ್ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಪೊಲೀಸ್ ಅಧಿಕಾರಿಗಳನ್ನು ಅಮಾನತು ಪಡಿಸಿದ್ದ ಕ್ರಮವನ್ನು ರದ್ದುಪಡಿಸಿದ್ದ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ (ಸಿಎಟಿ) ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿ ಹಾಗೂ ಸಿಎಟಿ ಆದೇಶದಲ್ಲಿ ದುರ್ಘಟನೆಗೆ ತಾನೇ ಕಾರಣ ಎಂದಿರುವ ಅಂಶಗಳನ್ನು ತೆಗೆಯುವಂತೆ ಕೋರಿ ಆರ್‌ಸಿಬಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಜಿ.ಪಂಡಿತ್ ಮತ್ತು ಟಿ.ಎಂ.ನದಾಫ್ ಅವರಿದ್ದ ವಿಭಾಗೀಯ ಪೀಠ ಮುಂದೆ ವಿಕಾಶ್ ಕುಮಾರ್ ಪರ ವಕೀಲರು ವಾದ ಮಂಡಿಸಿದರು.
ಈ ಪ್ರಕರಣದಲ್ಲಿ ಸರ್ಕಾರ ಯಾವುದೇ ದಾಖಲೆಗಳಿಲ್ಲದೇ ಪೊಲೀಸರನ್ನು ಅಮಾನತುಪಡಿಸಿದೆ. ತನಿಖಾ ವರದಿ ಬರುವ ಮುನ್ನವೇ ತನಗೆ ಮುಜುಗರವಾಗಿದೆ ಎಂದು ಯಾರನ್ನೋ ಅಮಾನತು ಮಾಡುವುದನ್ನು ಒಪ್ಪಲು ಸಾಧ್ಯವಿಲ್ಲ. ಅಷ್ಟಕ್ಕೂ, ಆರ್‌ಸಿಬಿ ತಂಡವನ್ನು ಸ್ವಾಗತಿಸಲು ಯಾರು ವಿಮಾನ ನಿಲ್ದಾಣಕ್ಕೆ ಹೋಗಿದ್ದರು ಎಂಬ ಸಂಗತಿ ಎಲ್ಲರಿಗೂ ತಿಳಿದಿದೆ ಎಂದು ಕುಟುಕಿದರು.
‘ಪೊಲೀಸರು ತಮ್ಮ ಕರ್ತವ್ಯವನ್ನು ಕಟ್ಟುನಿಟ್ಟಾಗಿ ನಿರ್ವಹಿಸಿದರೂ ತಪ್ಪು. ನಿರ್ವಹಿಸದೇ ಇದ್ದರೂ ತಪ್ಪು ಎಂಬುದಕ್ಕೆ ಈ ಪ್ರಕರಣ ಸ್ಪಷ್ಟ ನಿದರ್ಶನವಾಗಿದೆ. ನ್ಯಾಯಾಲಯದ ಮುಂದೆ ಎಲ್ಲವೂ ಸರಿಯಾಗಿದೆ ಎಂಬುದನ್ನು ತೋರಿಸಲು ದಾಖಲೆಗಳ ಅನುಪಸ್ಥಿತಿಯಲ್ಲಿಯೂ ವಿಕಾಸ್ ಕುಮಾರ್ ಅವರನ್ನು ಸರ್ಕಾರ ನಿಂದಿಸುತ್ತಿದೆ ಎಂದು ಆಕ್ಷೇಪಿಸಿದರು. ಕೆಲ ಕಾಲ ವಾದ ಆಲಿಸಿದ ನ್ಯಾಯಾಲಯವು ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿತು.
Suspended IPS officer Vikas Kumar has raised strong objections to the Karnataka government's claim that a stampede incident occurred because the police behaved like "RCB fans" instead of maintaining law and order.
25-10-25 09:33 pm
Bangalore Correspondent
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
25-10-25 09:36 pm
HK News Desk
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
25-10-25 08:08 pm
Mangalore Correspondent
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
Mangalore Land Fraud, Lawyer, Mohiuddin Bava:...
24-10-25 07:57 pm
Police Commissioner Sudheer Reddy, Mangalore:...
24-10-25 11:57 am
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm