ಬ್ರೇಕಿಂಗ್ ನ್ಯೂಸ್
20-07-25 08:35 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ.20: ತಮಿಳುನಾಡು ಬಿಜೆಪಿ ಅಧ್ಯಕ್ಷರಾಗಿದ್ದ ಅಣ್ಣಾಮಲೈ ಅವರನ್ನು ರಾಷ್ಟ್ರೀಯ ತಂಡಕ್ಕೆ ಸೇರಿಸಿಕೊಳ್ಳುವ ಬಗ್ಗೆ ಈ ಹಿಂದೆಯೇ ಮಾತುಗಳು ಬಂದಿದ್ದವು. ಶೀಘ್ರದಲ್ಲೇ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಅಣ್ಣಾಮಲೈ ಅವರನ್ನು ನೇಮಕ ಮಾಡುವ ಸಾಧ್ಯತೆಯಿದೆ ಎನ್ನುವ ಸುದ್ದಿ ಇದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆ ಬೆನ್ನಲ್ಲೇ ಈ ಘೋಷಣೆ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ಬಿಜೆಪಿ ಜೊತೆಗೆ ಮೈತ್ರಿ ಮಾಡುವುದಾದರೆ ಅಲ್ಲಿ ಅಣ್ಣಾಮಲೈ ಇರಬಾರದು ಎಂದು ಎಐಎಡಿಎಂಕೆ ಷರತ್ತು ವಿಧಿಸಿದ ಹಿನ್ನೆಲೆಯಲ್ಲಿ ಅಮಿತ್ ಷಾ ಸೂಚನೆಯಂತೆ ಅಣ್ಣಾಮಲೈ ಕಳೆದ ಏಪ್ರಿಲ್ ತಿಂಗಳಲ್ಲಿ ತಮಿಳುನಾಡು ಅಧ್ಯಕ್ಷ ಸ್ಥಾನವನ್ನು ಬಿಟ್ಟುಕೊಟ್ಟಿದ್ದರು. ಆಗಲೇ ರಾಷ್ಟ್ರೀಯ ತಂಡದಲ್ಲಿ ಪ್ರಮುಖ ಹುದ್ದೆ ನೀಡುವ ಬಗ್ಗೆ ಭರವಸೆ ನೀಡಲಾಗಿತ್ತು. ಆನಂತರ ಶಾಸಕ ನೈನಾರ್ ನಾಗೇಂದ್ರನ್ ಅವರನ್ನು ತಮಿಳುನಾಡು ಬಿಜೆಪಿಗೆ ಅಧ್ಯಕ್ಷರನ್ನಾಗಿ ಮಾಡಲಾಗಿತ್ತು. ಐಪಿಎಸ್ ಅಧಿಕಾರಿ ಹುದ್ದೆ ತೊರೆದು ಅಣ್ಣಾಮಲೈ ತಮಿಳುನಾಡು ಬಿಜೆಪಿ ಟಾಸ್ಕ್ ಪಡೆದು ಪಕ್ಷವನ್ನು ಸಂಘಟಿಸಲು ಮುಂದಾಗಿದ್ದರು. ಆದರೆ ಅಣ್ಣಾಮಲೈ ಅವರ ಕಾರ್ಯ ಚಟುವಟಿಕೆ, ಜನರ ಗಮನಸೆಳೆಯುವ ರೀತಿಯ ಭಾಷಣಗಳಿಂದಾಗಿ ಮುಂದೆ ಎಐಎಡಿಎಂಕೆ ಪಕ್ಷದ ಮತಗಳನ್ನು ಇವರು ಬುಟ್ಟಿಗೆ ಹಾಕ್ಕೊಳ್ತಾರೆ ಎನ್ನುವ ಅಳುಕು ಆ ಪಕ್ಷದ ನಾಯಕರಿಗೆ ಬಂದಿತ್ತು.
2024ರ ಸಂಸತ್ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಬಿಜೆಪಿ ಶೂನ್ಯ ಸಾಧನೆ ಮಾಡಿದ್ದರೂ, ಎಐಎಡಿಎಂಕೆ ಜೊತೆ ಯಾವುದೇ ಮೈತ್ರಿ ಮಾಡಿಕೊಳ್ಳದೆ ಪಕ್ಷದ ಮತ ಹಂಚಿಕೆಯಲ್ಲಿ 3ರಿಂದ 11 ಶೇ.ಕ್ಕೆ ಹೆಚ್ಚಳವಾಗಿತ್ತು. ಇದಕ್ಕೆ ಅಣ್ಣಾಮಲೈ ಕಾರ್ಯ ಚಟುವಟಿಕೆಯೇ ಕಾರಣವಾಗಿತ್ತು. ಇದರಿಂದ ಮುಂದಿನ ವರ್ಷದ ಅಸೆಂಬ್ಲಿ ಚುನಾವಣೆಗೆ ಮೈತ್ರಿ ಮಾಡಿಕೊಳ್ಳಲು ಬಿಜೆಪಿ ರಾಷ್ಟ್ರೀಯ ನಾಯಕರು ಎಐಎಡಿಎಂಕೆ ಜೊತೆಗೆ ಮಾತುಕತೆಗೆ ಮುಂದಾಗುತ್ತಲೇ ಆ ಕಡೆಯಿಂದ ಅಣ್ಣಾಮಲೈ ಬದಲಿಸಲು ಪಟ್ಟು ಹಾಕಿದ್ದರು. ಇತ್ತ ರಾಜ್ಯದ ಪರಿಸ್ಥಿತಿ ಮತ್ತು ಮೈತ್ರಿ ಅನಿವಾರ್ಯ ಎಂದರಿತ ಬಿಜೆಪಿ ಹೈಕಮಾಂಡ್, ಅಣ್ಣಾಮಲೈ ಅವರ ಸ್ಥಾನವನ್ನು ತೆರವುಗೊಳಿಸಿ ರಾಷ್ಟ್ರೀಯ ತಂಡಕ್ಕೆ ಕರೆಸಿಕೊಳ್ಳುವ ವಾಗ್ದಾನ ನೀಡಿತ್ತು.
ಕೇಂದ್ರ ಸಚಿವ ಅಮಿತ್ ಶಾ ತಮಿಳುನಾಡಿಗೆ ಬಂದಾಗೆಲ್ಲ ಅಣ್ಣಾಮಲೈ ರಾಜ್ಯ ರಾಜಕೀಯದಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ, ರಾಷ್ಟ್ರೀಯ ಮಟ್ಟದಲ್ಲೂ ಪ್ರಮುಖ ಜವಾಬ್ದಾರಿ ನೀಡಲಾಗುವುದು ಎಂದಿದ್ದರು. ಅಣ್ಣಾಮಲೈ ಪಕ್ಷದ ಜವಾಬ್ದಾರಿ ಇರದಿದ್ದರೂ ಪಶ್ಚಿಮ ತಮಿಳುನಾಡಿನಲ್ಲಿ ಪಕ್ಷದ ಚಟುವಟಿಕೆಯಲ್ಲಿ ಸಕ್ರಿಯವಾಗಿದ್ದಾರೆ. ಅಲ್ಲಲ್ಲಿ ಸಭೆಗಳನ್ನು ಮಾಡುತ್ತ ತಳಮಟ್ಟದ ಸಂಘಟನೆಯಲ್ಲಿ ತೊಡಗಿದ್ದಾರೆ. ಇದನ್ನು ಪರಿಗಣಿಸಿದ ರಾಷ್ಟ್ರೀಯ ನಾಯಕರು ಶೀಘ್ರದಲ್ಲೇ ರಾಷ್ಟ್ರೀಯ ತಂಡದಲ್ಲಿ ಜವಾಬ್ದಾರಿ ನೀಡಲು ಮುಂದಾಗಿದ್ದಾರೆ. ಸಾಮಾನ್ಯವಾಗಿ ಬಿಜೆಪಿಯಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಆರೆಸ್ಸೆಸ್ ಹಿನ್ನೆಲೆಯವರನ್ನು ತರುತ್ತಾರೆ, ಸಂಘಟನೆಯಲ್ಲಿ ಚುರುಕಿದ್ದಾರೆಂಬ ಕಾರಣಕ್ಕೆ ಮತ್ತು ತಮಿಳುನಾಡು ಅಸೆಂಬ್ಲಿ ಚುನಾವಣೆ ವೇಳೆಗೆ ಪ್ರಚಾರಕ್ಕೆ ಬಳಸಿಕೊಳ್ಳುವುದಕ್ಕಾಗಿ ಅಣ್ಣಾಮಲೈ ಅವರನ್ನು ಮತ್ತೆ ಸಕ್ರಿಯ ತಂಡಕ್ಕೆ ಕರೆಸಿಕೊಳ್ಳುತ್ತಿದ್ದಾರೆ ಎನ್ನಲಾಗುತ್ತಿದೆ.
Former Tamil Nadu BJP President K. Annamalai is all set to be inducted into the party’s national team, with strong indications that he will soon be appointed as a BJP National General Secretary. Sources reveal that the announcement will likely follow the appointment of the party’s new national president.
19-09-25 10:04 pm
Bangalore Correspondent
Caste survey: ಜಾತಿ ಸಮೀಕ್ಷೆಗೆ ಸರ್ಕಾರದ ಸಚಿವರಿಂದ...
19-09-25 02:16 pm
ಮೋಸದಿಂದಲೇ ಕಣ್ರೀ ಬಿಜೆಪಿ ಚುನಾವಣೆ ಗೆದ್ದಿದೆ! ರಾಹು...
19-09-25 09:45 am
ಬೆಂಗಳೂರು ಗಬ್ಬೆದ್ದು ನಾರುತ್ತಿದೆ, ರಾಜಧಾನಿ ಈಗ ಗುಂ...
19-09-25 09:42 am
Traffic Violation, Bangalore: ರಾಜ್ಯದಲ್ಲಿ ಸಂಚಾ...
18-09-25 05:34 pm
20-09-25 11:42 am
HK News Desk
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
ಎರಡು ಬಾರಿ ಕಚ್ಚಿದ್ರೆ ಬೀದಿ ನಾಯಿಗೆ ಜೀವಾವಧಿ ಶಿಕ್ಷ...
16-09-25 10:11 pm
19-09-25 10:46 pm
Mangalore Correspondent
ಕಟೀಲು ದೇಗುಲದಲ್ಲಿ ಸೇವಾ ದರ ಏಕಾಏಕಿ ದುಪ್ಪಟ್ಟು ; ಬ...
19-09-25 10:21 pm
ಧರ್ಮಸ್ಥಳ ಕೇಸ್ ; ಅನೇಕ ಶವಗಳನ್ನು ಹೂತಿದ್ದೆವು ಎಂದಿ...
19-09-25 09:59 pm
Kadri, Mangalore, Smart City: ‘ಸ್ಮಾರ್ಟ್ ಸಿಟಿ’...
19-09-25 07:53 pm
ಇನ್ಸ್ಟಾ ಗ್ರಾಂನಲ್ಲಿ ಪ್ರಚೋದನಕಾರಿ ಪೋಸ್ಟ್ ; ಆರೋಪಿ...
19-09-25 04:58 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm