ಬ್ರೇಕಿಂಗ್ ನ್ಯೂಸ್
22-07-25 10:30 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 22 : ರಾಜ್ಯದಲ್ಲಿ ಸಣ್ಣಪುಟ್ಟ ವ್ಯಾಪಾರಿಗಳಿಗೆ ತೆರಿಗೆ ಬಾಕಿ ನೋಟಿಸ್ ನೀಡುತ್ತಿರುವುದು ರಾಜ್ಯ ಸರ್ಕಾರವೇ ಹೊರತು ಕೇಂದ್ರ ಸರ್ಕಾರವಲ್ಲ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಸ್ಪಷ್ಟನೆ ನೀಡಿದ್ದಾರೆ. ತೆರಿಗೆ ನೋಟಿಸ್ ನೀಡುವಲ್ಲಿ ರಾಜ್ಯ ಸಾರ್ಕಾರದ ಪಾತ್ರವಿಲ್ಲ ಎಂದಿರುವ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಚಿವ ಜೋಶಿ, ರಾಜ್ಯ ಸರ್ಕಾರ ಮಾಡುವುದೆಲ್ಲ ಮಾಡಿ ಈಗ ತನಗೆ ಸಂಬಂಧವಿಲ್ಲ ಎನ್ನುತ್ತಿರುವುದು ಹಾಸ್ಯಾಸ್ಪದ ಎಂದು ಹೇಳಿದ್ದಾರೆ.
ಕರ್ನಾಟಕದಲ್ಲಿ ಸಣ್ಣ ಪುಟ್ಟ ವ್ಯಾಪಾರಿಗಳಿಗೆ ತೆರಿಗೆ ಬಾಕಿ ನೋಟಿಸ್ ಕೊಟ್ಟಿರುವುದು ರಾಜ್ಯದ ತೆರಿಗೆ ಇಲಾಖೆ ಅಧಿಕಾರಿಗಳು. ಹಾಗಿದ್ದರೂ ರಾಜ್ಯ ಸರ್ಕಾರಕ್ಕೂ, ಜಿಎಸ್ಟಿ ನೋಟಿಸ್ಗೂ ಸಂಬಂಧವಿಲ್ಲ ಎನ್ನುತ್ತ ಜನರ ಕಣ್ಣಿಗೆ ಮಣ್ಣೆರೆಚುವ ಕೆಲಸ ಮಾಡುತ್ತಿದ್ದಾರೆ ಎಂದು ಜೋಶಿ ಟೀಕಿಸಿದ್ದಾರೆ.
ಬೇರೆಲ್ಲೂ ಇಲ್ಲದ ನೋಟಿಸ್ ಇಲ್ಲೇಕೆ? ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದ್ದರೆ ಬಹುತೇಕ ಎಲ್ಲ ರಾಜ್ಯಗಳಿಗೂ ಅನ್ವಯಿಸುತ್ತಿತ್ತು. ಆದರೆ, ಬೇರೆ ಯಾವುದೇ ರಾಜ್ಯಗಳಲ್ಲೂ ತೆರಿಗೆ ಇಲಾಖೆ ಅಧಿಕಾರಿಗಳಿಂದ ಸಣ್ಣಪುಟ್ಟ ವ್ಯಾಪಾರಾಸ್ಥರಿಗೆ ಜಿಎಸ್ಟಿ ನೋಟಿಸ್ ನೀಡಲಾಗಿಲ್ಲ. ಕರ್ನಾಟಕದಲ್ಲಿ ಮಾತ್ರ ಇದಾಗಿದೆ ಎಂದಿದ್ದಾರೆ. GSTಯಲ್ಲಿ ಕೇಂದ್ರ ಸರ್ಕಾರದ ಅಡಿಯಲ್ಲಿ ʼCGSTʼ ಮತ್ತು ರಾಜ್ಯ ಸರ್ಕಾರಗಳ ಅಡಿಯಲ್ಲಿ ʼSGSTʼ ಎಂದು ಎರಡು ವಿಭಾಗವಿದೆ. ಆದರಂತೆ ಕರ್ನಾಟಕದಲ್ಲಿ ಸಣ್ಣಪುಟ್ಟ ವ್ಯಾಪಾರಿಗಳಿಗೆ ನೋಟಿಸ್ ನೀಡಿರುವುದು ರಾಜ್ಯ ಸರ್ಕಾರದ ವಾಣಿಜ್ಯ ತೆರಿಗೆ ಇಲಾಖೆ. ಇದರಲ್ಲಿ ಕೇಂದ್ರ ಸರ್ಕಾರದ ಯಾವುದೇ ಪಾತ್ರವಿಲ್ಲ ಎಂದು ಪ್ರಲ್ಹಾದ ಜೋಶಿ ಸ್ಪಷ್ಟಪಡಿಸಿದ್ದಾರೆ.
ಜಿಎಸ್ಟಿ ಕೌನ್ಸಿಲ್ನಲ್ಲಿ ಯಾವುದೇ ತೀರ್ಮಾನ ತೆಗೆದುಕೊಳ್ಳಲು ಮಹತ್ವದ ಪಾತ್ರ ವಹಿಸಿರುವುದು ರಾಜ್ಯ ಸರ್ಕಾರಗಳು. ಕೇಂದ್ರ ಸರ್ಕಾರಕ್ಕೆ ಕೇವಲ 3ನೇ ಒಂದು ಭಾಗ ಮಾತ್ರ ಅಧಿಕಾರವಿದೆ. ಉಳಿದ ಅಧಿಕಾರ ರಾಜ್ಯ ಸರ್ಕಾರದ ಕೈಯಲ್ಲಿದೆ. 3ನೇ ಎರಡು ಭಾಗದಷ್ಟು ಅಧಿಕಾರ ಹೊಂದಿರುವ ರಾಜ್ಯ ಸರ್ಕಾರಗಳ ನಿರ್ಣಯವೇ ಇದರಲ್ಲಿ ಅಂತಿಮವಾಗಿರಲಿದೆ ಎಂದೂ ಹೇಳಿದ್ದಾರೆ.
Union Minister for Consumer Affairs, Pralhad Joshi, has clarified that the notices issued to small traders regarding pending taxes in Karnataka are the responsibility of the state government and not the central government. His remarks come in response to Deputy Chief Minister D.K. Shivakumar's earlier statement claiming the state had no role in issuing such notices.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 04:34 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 03:48 pm
HK News Staffer
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm