ಎಸ್ಸೆಸ್ಸೆಲ್ಸಿ 2020 - ಚಿಕ್ಕಬಳ್ಳಾಪುರ ರಾಜ್ಯಕ್ಕೆ ಪ್ರಥಮ

10-08-20 12:41 pm       Headline Karnataka News Network   ಕರ್ನಾಟಕ

ಈ ಬಾರಿಯ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಜಿಲ್ಲೆಯು ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆಯುವ ಮೂಲಕ ಮತ್ತೊಂದು‌ ಮೈಲಿಗಲ್ಲಿಗೆ ಹೆಸರಾಗಿದೆ. ಜಿಲ್ಲೆಯಲ್ಲಿ‌ ಈ ಬಾರಿ 285 ಪ್ರೌಢಶಾಲೆಗಳ 17303 ವಿದ್ಯಾರ್ಥಿಗಳು 64 ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆದಿದ್ದರು.

ಚಿಕ್ಕಬಳ್ಳಾಪುರ: ಈ ಬಾರಿಯ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಜಿಲ್ಲೆಯು ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆಯುವ ಮೂಲಕ ಮತ್ತೊಂದು‌ ಮೈಲಿಗಲ್ಲಿಗೆ ಹೆಸರಾಗಿದೆ.

ಕಳೆದ ವರ್ಷ ಜಿಲ್ಲೆಯು ಶೇ 79.69 ರಷ್ಟು ಫಲಿತಾಂಶ ಪಡೆದು 20 ನೇ ಸ್ಥಾನದಲ್ಲಿತ್ತು. ಆದರೆ ಈ ಬಾರಿ ಎಲ್ಲ ಜಿಲ್ಲೆಗಳನ್ನು ಹಿಂದಿಕ್ಕಿ ಮೊದಲ ಸ್ಥಾನ ಪಡೆದಿದೆ.

ಜಿಲ್ಲೆಯಲ್ಲಿ‌ ಈ ಬಾರಿ 285 ಪ್ರೌಢಶಾಲೆಗಳ 17303 ವಿದ್ಯಾರ್ಥಿಗಳು 64 ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆದಿದ್ದರು.

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಇಡೀ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿರಿವುದು ಹೆಮ್ಮೆಯ ಸಂಗತಿ. ಚಿಕ್ಕಬಳ್ಳಾಪುರದ ಶಾಸಕನಾಗಿ, ಜಿಲ್ಲಾ ಉಸ್ತುವಾರಿ ಸಚಿವನಾಗಿ ಇದು ಅತೀವ ಸಂತಸ ತಂದಿದೆ. ಜಿಲ್ಲೆಯ ಎಲ್ಲಾ ವಿದ್ಯಾರ್ಥಿಗಳಿಗೆ, ಪೋಷಕರಿಗೆ ಮತ್ತು ಶಿಕ್ಷಕರಿಗೆ ನನ್ನ ವಿಶೇಷ ಅಭಿನಂದನೆಗಳು’ ಎಂದು ಸಚಿವ ಡಾ.ಕೆ. ಸುಧಾಕರ್‌ ಟ್ವೀಟ್‌ ಮಾಡಿದ್ದಾರೆ.