ಬ್ರೇಕಿಂಗ್ ನ್ಯೂಸ್
23-07-25 08:03 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 23 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪುಕಲ್ಲು ಗಣಿಗಾರಿಕೆಗೆ ಕಾನೂನಿನ ಅನ್ವಯ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಬೆಂಗಳೂರಿನ ವಿಧಾನ ಸೌಧದಲ್ಲಿ ಇಂದು ಸ್ಪೀಕರ್ ಯು.ಟಿ ಖಾದರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಗಣಿ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಯಿತು. ಜಿಲ್ಲೆಯಲ್ಲಿ ಕೆಂಪುಕಲ್ಲು ಗಣಿಗಾರಿಕೆಗೆ ಇರುವ ಅಡೆತಡೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ನಿಯಮಗಳಲ್ಲಿ ಬದಲಾವಣೆಗಳನ್ನು ತರುವ ಕುರಿತಂತೆ ಗಣಿ ಇಲಾಖೆ ಅಧಿಕಾರಿಗಳೊಂದಿಗೆ ಸಚಿವ ದಿನೇಶ್ ಗುಂಡೂರಾವ್ ಚರ್ಚೆ ನಡೆಸಿದರು.
ವಾಣಿಜ್ಯ ಉದ್ದೇಶವಲ್ಲದ ಕೆಂಪುಕಲ್ಲು ಕ್ವಾರಿಗಳಿಗೆ ಅಧಿಕೃತವಾಗಿ ಪರವಾನಿಗೆ ಕೊಡುವ ವ್ಯವಸ್ಥೆ ಜಾರಿಯಾಗಬೇಕು. ಪರವಾನಿಗೆ ಪಡೆಯಲು ಏಕಗವಾಕ್ಷಿ ಯೋಜನೆ ರೀತಿಯಲ್ಲಿ ವ್ಯವಸ್ಥೆ ಕಲ್ಪಿಸಬೇಕು. ಸಮಯ ಮಿತಿಯಲ್ಲಿ ಪರವಾನಿಗೆಗಳನ್ನು ಕೊಡುವ ಕಾರ್ಯಗತಿ ಜಾರಿಗೆ ತರುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಗಣಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಕೆಂಪುಕಲ್ಲು ಉತ್ಪಾದಕರೊಂದಿಗೆ ಚರ್ಚೆ ನಡೆಸಿ ವಾರದೊಳಗೆ ಹೊಸ ನೀತಿ ಜಾರಿಗೊಳಿಸುವತ್ತ SOP ಸಿದ್ಧಪಡಿಸುವಂತೆ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ವಿಧಾನ ಸಭಾಧ್ಯಕ್ಷರಾದ ಯು.ಟಿ ಖಾದರ್ ಅವರು, ಮಣ್ಣು ಸಮತಟ್ಟು ಸೇರಿದಂತೆ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ 3 ಮೀಟರ್ ಮಾತ್ರ ಆಳಕ್ಕೆ ಡ್ರಿಲ್ ಮಾಡಲು ಅವಕಾಶವಿದ್ದು, ಇದನ್ನ 6 ಮೀಟರ್ ಗೆ ಹೆಚ್ಚಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈಗಾಗಲೇ ಕೆಲವು ಚಟುವಟಿಕೆಗಳಿಗೆ ಯಾವುದೇ ನಿರ್ಬಂಧವಿಲ್ಲ. ಆದರೆ ಕೆಂಪುಕಲ್ಲು ಗಣಿಗಾರಿಕೆಗೆ ಕೆಲವು ನಿರ್ಬಂಧಗಳಿವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಲಭ ರೀತಿಯಲ್ಲಿ ಕೆಂಪುಕಲ್ಲು ಗ್ರಾಹಕರಿಗೆ ದೊರೆಯುವಂತಾಗಬೇಕು. ರಾಯಲ್ಟಿಯನ್ನ ಕಡಿಮೆಗೊಳಿಸಿ ನಿಯಮ ಬದ್ಧವಾಗಿ ಕಲ್ಲು ಗಣಿಗಾರಿಕೆಗೆ ಅವಕಾಶ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
In a significant move to streamline red stone quarrying operations in Dakshina Kannada district, a key meeting was held at Vidhana Soudha today under the leadership of District In-charge Minister Dinesh Gundu Rao and Speaker U.T. Khader with senior officials of the Department of Mines and Geology.
19-09-25 10:04 pm
Bangalore Correspondent
Caste survey: ಜಾತಿ ಸಮೀಕ್ಷೆಗೆ ಸರ್ಕಾರದ ಸಚಿವರಿಂದ...
19-09-25 02:16 pm
ಮೋಸದಿಂದಲೇ ಕಣ್ರೀ ಬಿಜೆಪಿ ಚುನಾವಣೆ ಗೆದ್ದಿದೆ! ರಾಹು...
19-09-25 09:45 am
ಬೆಂಗಳೂರು ಗಬ್ಬೆದ್ದು ನಾರುತ್ತಿದೆ, ರಾಜಧಾನಿ ಈಗ ಗುಂ...
19-09-25 09:42 am
Traffic Violation, Bangalore: ರಾಜ್ಯದಲ್ಲಿ ಸಂಚಾ...
18-09-25 05:34 pm
20-09-25 11:42 am
HK News Desk
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
ಎರಡು ಬಾರಿ ಕಚ್ಚಿದ್ರೆ ಬೀದಿ ನಾಯಿಗೆ ಜೀವಾವಧಿ ಶಿಕ್ಷ...
16-09-25 10:11 pm
19-09-25 10:46 pm
Mangalore Correspondent
ಕಟೀಲು ದೇಗುಲದಲ್ಲಿ ಸೇವಾ ದರ ಏಕಾಏಕಿ ದುಪ್ಪಟ್ಟು ; ಬ...
19-09-25 10:21 pm
ಧರ್ಮಸ್ಥಳ ಕೇಸ್ ; ಅನೇಕ ಶವಗಳನ್ನು ಹೂತಿದ್ದೆವು ಎಂದಿ...
19-09-25 09:59 pm
Kadri, Mangalore, Smart City: ‘ಸ್ಮಾರ್ಟ್ ಸಿಟಿ’...
19-09-25 07:53 pm
ಇನ್ಸ್ಟಾ ಗ್ರಾಂನಲ್ಲಿ ಪ್ರಚೋದನಕಾರಿ ಪೋಸ್ಟ್ ; ಆರೋಪಿ...
19-09-25 04:58 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm