ಬ್ರೇಕಿಂಗ್ ನ್ಯೂಸ್
24-07-25 10:52 pm HK News Desk ಕರ್ನಾಟಕ
ಬೆಂಗಳೂರು, ಜುಲೈ 24 : ಕೆಂಪೇಗೌಡ ಏರ್‌ಪೋರ್ಟ್ ಬಳಿಯ ರಾಮೇಶ್ವರಂ ಕೆಫೆಟೇರಿಯಾದ ವ್ಯಕ್ತಿಯೊಬ್ಬ ಪೊಂಗಲ್ ಸೇವಿಸುತ್ತಿದ್ದಾಗ ಹುಳ ಪತ್ತೆಯಾಗಿದೆ ಎಂದು ವಿಡಿಯೋ ಮಾಡಿದ್ದು ಜಾಲತಾಣದಲ್ಲಿ ವಿಡಿಯೋ ವೈರಲ್ ಆದ ಬೆನ್ನಲ್ಲೇ ಗ್ರಾಹಕನ ವಿರುದ್ಧ 25 ಲಕ್ಷ ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಮಾಡಿರುವ ಆರೋಪದಲ್ಲಿ ಹೊಟೇಲ್ ಮಾಲಕರು ದೂರು ದಾಖಲಿಸಿದ್ದಾರೆ.
ಗುರುವಾರ ಬೆಳಗ್ಗೆ ಬೆಂಗಳೂರು ಏರ್ಪೋರ್ಟ್ ಆವರಣದ ರಾಮೇಶ್ವರಂ ಕೆಫೆಯಲ್ಲಿ ಗ್ರಾಹಕನೋರ್ವ ಪೊಂಗಲ್ ಖರೀದಿಸಿ, ಸೇವಿಸುತ್ತಿರುವಾಗ ಅದರಲ್ಲಿ ಹುಳ ಪತ್ತೆಯಾಗಿದೆ ಎಂದು ಹೇಳಿ ಅದರ ವಿಡಿಯೋ ಮಾಡಿದ್ದ. ಅಲ್ಲದೆ, ಈ ವೇಳೆ ಹೊಟೇಲ್ ಸಿಬಂದಿಯನ್ನು ಪ್ರಶ್ನೆ ಮಾಡಿದಾಗ, ಆತ ಕೈಮುಗಿದು ಕ್ಷಮೆ ಕೇಳುವುದು ವಿಡಿಯೋದಲ್ಲಿದೆ. ಆನಂತರ, ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದರು. ವಿಡಿಯೋ ವೈರಲ್ ಆಗುತ್ತಿದ್ದಂತೆ ರಾಮೇಶ್ವರಂ ಕೆಫೆ ಮಾಲೀಕರು ಸ್ಪಷ್ಟನೆ ನೀಡಿದ್ದು ಸ್ವಚ್ಛತೆಗೆ ವಿಶೇಷ ಆದ್ಯತೆ ನೀಡುತ್ತೇವೆಂದು ಹೇಳಿದ್ದಾರೆ. ಗ್ರಾಹಕರು ಆಹಾರದಲ್ಲಿ ಹುಳ ಇದೆಯೆಂದು ಸುಳ್ಳು ಆರೋಪ ಹೊರಿಸುತ್ತಿದ್ದು, ಈ ಮೂಲಕ ನಮ್ಮ ಬ್ರ್ಯಾಂಡ್ ಮೇಲೆ ಹಾನಿ ಮಾಡಲು ಹೊರಟಿದ್ದಾರೆ. ಜೊತೆಗೆ ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಕುರಿತು ಚಾಟ್ ಮಾಡಿರುವುದು, ಹಣಕ್ಕಾಗಿ ಮೆಸೇಜ್ ಮಾಡಿರುವುದು, ಕರೆ ಮಾಡಿರುವುದು ನಮ್ಮ ಬಳಿ ಇದೆ. ಅದನ್ನು ಪೊಲೀಸರಿಗೆ ನೀಡಿದ್ದೇವೆ ಎಂದು ಕೆಫೆ ಮಾಲಕ ರಾಘವೇಂದ್ರ ರಾವ್ ತಿಳಿಸಿದ್ದಾರೆ.
ಭಾರತದ ಅತ್ಯಂತ ಜನಪ್ರಿಯ ಕ್ವಿಕ್ ಸರ್ವಿಸ್ ರೆಸ್ಟೋರೆಂಟ್ ಬ್ರ್ಯಾಂಡ್‌ಗಳಲ್ಲಿ ಒಂದಾದ ರಾಮೇಶ್ವರಂ ಕೆಫೆ, ಬೆಂಗಳೂರು ನಗರದಲ್ಲಿ ಹಲವು ಕಡೆ ಔಟ್ಲೆಟ್ ಹೊಂದಿದೆ. ಬ್ರ‍್ಯಾಂಡ್‌ನ ಮುಖ್ಯಸ್ಥರು ನೀಡಿದ ದೂರಿನ ಪ್ರಕಾರ, ಜು.24ರ ಬೆಳಗ್ಗೆ ಈ ಘಟನೆ ಸಂಭವಿಸಿದೆ, 5-7 ವ್ಯಕ್ತಿಗಳ ಗುಂಪು ಸಾರ್ವಜನಿಕವಾಗಿ ಗೊಂದಲ ಸೃಷ್ಟಿಸಿದ್ದಾರೆ. ಆಹಾರದಲ್ಲಿ ಜಿರಳೆಯಿದೆ ಎಂದು ಆರೋಪಿಸಿದ್ದಾರೆ. ಬಳಿಕ ವ್ಯಕ್ತಿಗಳು ನಮಗೆ ಪರಿಹಾರ ನೀಡದಿದ್ದಲ್ಲಿ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಉಲ್ಲೇಖಿಸಿದ್ದಾರೆ. ಸ್ವಲ್ಪ ಸಮಯದ ನಂತರ ಕೆಫೆಗೆ 25 ಲಕ್ಷ ರೂ. ನಗದು ನೀಡುವಂತೆ ಬೆದರಿಕೆ ಕರೆ ಬಂದಿತ್ತು. ಬಳಿಕ ಕೆಫೆಯ ಕಡೆಯಿಂದ ಕರೆ ದಾಖಲೆಗಳು, ಸಂದೇಶಗಳ ಸ್ಕ್ರೀನ್‌ಶಾಟ್ ಮತ್ತು ಇತರ ದಾಖಲಾತಿಗಳನ್ನು ಪೊಲೀಸರಿಗೆ ಸಲ್ಲಿಸಿದೆ.
ಆರೋಪವನ್ನು ತಳ್ಳಿಹಾಕಿರುವ ರಾಮೇಶ್ವರಂ ಕೆಫೆಯ ಸಂಸ್ಥಾಪಕಿ ದಿವ್ಯಾ ರಾವ್, ನಮ್ಮ ಆಹಾರದಲ್ಲಿ ಹುಳು ಅಥವಾ ಕೀಟ ಕಂಡುಬಂದಿದೆ ಎಂಬ ಆಧಾರರಹಿತ ಆರೋಪವನ್ನು ನಾವು ಒಪ್ಪುವುದಿಲ್ಲ. ನಾವು ಕಟ್ಟುನಿಟ್ಟಾದ, ಗುಣಮಟ್ಟದ ಪ್ರೋಟೋಕಾಲ್‌ಗಳ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತೇವೆ. ವಿಶೇಷವಾಗಿ ವಿಮಾನ ನಿಲ್ದಾಣಗಳು ಮತ್ತು ಸೂಕ್ಷ್ಮ ಸ್ಥಳಗಳಲ್ಲಿ ಇದು ಸ್ಪಷ್ಟವಾಗಿ ಹಣ ಸುಲಿಗೆ ಮಾಡುವ ಮತ್ತು ನಮ್ಮ ಬ್ರ‍್ಯಾಂಡ್‌ಗೆ ಹಾನಿ ಮಾಡುವ ದುರುದ್ದೇಶದ ಕೃತ್ಯವಾಗಿದೆ ಎಂದಿದ್ದಾರೆ. ಈ ಹಿಂದೆಯೂ ಇದೇ ರೀತಿಯ ಪ್ರಯತ್ನಗಳು ನಡೆದಿದ್ದವು. ಆಹಾರದಲ್ಲಿ ಕಲ್ಲು, ಕೀಟಗಳನ್ನು ಹಾಕಿ ಬಳಿಕ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ನಾವು ಬೆದರಿಕೆ ಅಥವಾ ಬ್ಲ್ಯಾಕ್‌ಮೇಲ್‌ಗೆ ಹೆದರುವುದಿಲ್ಲ. ಈ ಘಟನೆ ಸಂಬಂಧ ನಾವು ಅಧಿಕಾರಿಗಳೊಂದಿಗೆ ಸಂಪೂರ್ಣ ಸಹಕರಿಸುತ್ತಿದ್ದೇವೆ. ಇಂತಹ ಅನುಚಿತ ಕೃತ್ಯಗಳನ್ನು ಬಹಿರಂಗಪಡಿಸಿ, ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದೇವೆ ಎಂದರು.
A customer’s breakfast at #Bengaluru’s #RameshwaramCafe inside Kempegowda International Airport (#KIA) took a shocking turn when he allegedly found a worm in his #Pongal.
— Hate Detector 🔍 (@HateDetectors) July 24, 2025
The incident happened on Thursday.#BengaluruAirport #KempegowdaInternationalAirport pic.twitter.com/198bZ0vIxr
A video showing an alleged worm in a serving of Pongal at the popular Rameshwaram Café near Kempegowda International Airport has gone viral on social media, prompting strong reactions from both the public and the café's management. Following the incident, the café’s owners have filed a police complaint accusing the customer of blackmail and attempting to damage the brand’s reputation.
19-09-25 10:04 pm
Bangalore Correspondent
Caste survey: ಜಾತಿ ಸಮೀಕ್ಷೆಗೆ ಸರ್ಕಾರದ ಸಚಿವರಿಂದ...
19-09-25 02:16 pm
ಮೋಸದಿಂದಲೇ ಕಣ್ರೀ ಬಿಜೆಪಿ ಚುನಾವಣೆ ಗೆದ್ದಿದೆ! ರಾಹು...
19-09-25 09:45 am
ಬೆಂಗಳೂರು ಗಬ್ಬೆದ್ದು ನಾರುತ್ತಿದೆ, ರಾಜಧಾನಿ ಈಗ ಗುಂ...
19-09-25 09:42 am
Traffic Violation, Bangalore: ರಾಜ್ಯದಲ್ಲಿ ಸಂಚಾ...
18-09-25 05:34 pm
20-09-25 11:42 am
HK News Desk
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
ಎರಡು ಬಾರಿ ಕಚ್ಚಿದ್ರೆ ಬೀದಿ ನಾಯಿಗೆ ಜೀವಾವಧಿ ಶಿಕ್ಷ...
16-09-25 10:11 pm
19-09-25 10:46 pm
Mangalore Correspondent
ಕಟೀಲು ದೇಗುಲದಲ್ಲಿ ಸೇವಾ ದರ ಏಕಾಏಕಿ ದುಪ್ಪಟ್ಟು ; ಬ...
19-09-25 10:21 pm
ಧರ್ಮಸ್ಥಳ ಕೇಸ್ ; ಅನೇಕ ಶವಗಳನ್ನು ಹೂತಿದ್ದೆವು ಎಂದಿ...
19-09-25 09:59 pm
Kadri, Mangalore, Smart City: ‘ಸ್ಮಾರ್ಟ್ ಸಿಟಿ’...
19-09-25 07:53 pm
ಇನ್ಸ್ಟಾ ಗ್ರಾಂನಲ್ಲಿ ಪ್ರಚೋದನಕಾರಿ ಪೋಸ್ಟ್ ; ಆರೋಪಿ...
19-09-25 04:58 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm