ಬ್ರೇಕಿಂಗ್ ನ್ಯೂಸ್
01-08-25 10:45 pm Bangalore Correspondent ಕರ್ನಾಟಕ
ಬೆಂಗಳೂರು, ಆ.1 : ಜೀ ಕನ್ನಡ ವಾಹಿನಿಯ ರಿಯಾಲಿಟಿ ಶೋ 'ಕಾಮಿಡಿ ಕಿಲಾಡಿಗಳು' ಕಾರ್ಯಕ್ರಮದಲ್ಲಿ ಹೆಸರು ಮಾಡಿದ್ದ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಮೂಲದ ಕಲಾವಿದ ಚಂದ್ರಶೇಖರ್ ಸಿದ್ದಿ ತನ್ನ ಊರಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ವಜ್ರಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಚಿಮನಳ್ಳಿಯ ಸಿದ್ದಿ ಜನಾಂಗದ ಯುವಕ, ಕಾಮಿಡಿ ಕಿಲಾಡಿಗಳು ರಿಯಾಲಿಟಿ ಶೋ ಮೂಲಕ ರಾಜ್ಯಕ್ಕೆ ಪರಿಚಯವಾಗಿದ್ದರು.
ನೀನಾಸಂನಲ್ಲಿ ನಾಟಕ ತರಬೇತಿ ಪಡೆದಿದ್ದ ಚಂದ್ರು ಉತ್ತಮ ಯೋಗಪಟುವೂ ಆಗಿದ್ದರು. ರಿಯಾಲಿಟಿ ಶೋ ನಂತರ ಧಾರವಾಹಿಗಳಲ್ಲಿ ಚಿಕ್ಕ ಪುಟ್ಟ ಪಾತ್ರಗಳನ್ನು ಮಾಡುತ್ತಿದ್ದ ಇವರಿಗೆ ಅವಕಾಶಗಳು ಹೆಚ್ಚು ಸಿಕ್ಕಿರಲಿಲ್ಲ. ಇದರಿಂದಾಗಿ ಯಲ್ಲಾಪುರದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು. ರಿಯಾಲಿಟಿ ಶೋನಿಂದಾಗಿ ಸಾಕಷ್ಟು ಅಭಿಮಾನಿಗಳನ್ನೂ ಹೊಂದಿದ್ದರು. ಆದರೆ, ಹೆಚ್ಚಿನ ಅವಕಾಶ ಸಿಗದೇ ಜೀವನಕ್ಕಾಗಿ ಕೂಲಿ ಕೆಲಸ ಹೋಗಬೇಕಾಗಿ ಬಂದಿತ್ತು.
ಇದೇ ಕಾರಣಕ್ಕೆ ಖಿನ್ನತೆಗೆ ಒಳಗಾಗಿದ್ದರು. ಮೂರು ತಿಂಗಳ ಹಿಂದೆ ನನ್ನ ಬಗ್ಗೆ ಜನ ಆಡಿಕೊಳ್ಳುತ್ತಾರೆ, ಟಾರ್ಗೆಟ್ ಮಾಡಿ ನಗುತ್ತಾರೆ, ಜೀವನ ಬೇಡ ಅನಿಸುತ್ತಿದೆ’ ಎಂದು ಮಾನಸಿಕ ತಜ್ಞರಲ್ಲಿ ಹೇಳಿಕೊಂಡಿದ್ದರು. ಕ್ರಿಮ್ಸ್‌ನಲ್ಲಿ ಚಿಕಿತ್ಸೆಯನ್ನೂ ಪಡೆದಿದ್ದರು. ಶುಕ್ರವಾರ ತನ್ನ ಊರು ಯಲ್ಲಾಪುರದಲ್ಲಿ ಕೆಲಸಕ್ಕಾಗಿ ತೆರಳಿದ್ದಾಗ ಅರಣ್ಯಕ್ಕೆ ಹೋಗಿ ಆತ್ಮಹತ್ಯೆ ಮಾಡಿದ್ದಾರೆ. ಘಟನೆ ಸಂಬಂಧ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident, Chandrashekhar Siddi — a young actor known for his appearance on Zee Kannada’s popular reality show ‘Comedy Kiladigalu’ — has died by suicide in his native village near Yellapur, Uttara Kannada district. He was found hanging in a forest area on Friday.
28-08-25 06:23 pm
HK News Desk
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 11:00 pm
Mangalore Correspondent
Mangalore Rain, School College Holiday: ಭಾರೀ...
28-08-25 10:07 pm
Soujanya Murder Case, Mother SIT: ಸೌಜನ್ಯಾ ಕೊಲ...
28-08-25 08:31 pm
Talapady Accident, Mangalore, Auto bus: ಕೇರಳ...
28-08-25 04:05 pm
Loudspeaker, Punjalkatte,Farangipete: ಪುಂಜಾಲ...
28-08-25 02:51 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm