ಬ್ರೇಕಿಂಗ್ ನ್ಯೂಸ್
01-08-25 11:34 pm Mangaluru Correspondent ಕರ್ನಾಟಕ
ಬೆಂಗಳೂರು, ಆ.1: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟಿದ್ದೇನೆಂಬ ವ್ಯಕ್ತಿಯ ದೂರಿನ ನೆಪದಲ್ಲಿ ಧರ್ಮಸ್ಥಳದ ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬದ ಹರ್ಷೇಂದ್ರ ಕುಮಾರ್ ವಿರುದ್ಧ ಮಾನಹಾನಿಕರ ಸುದ್ದಿ ಪ್ರಸಾರ ಮಾಡದಂತೆ ವಿಧಿಸಲಾಗಿದ್ದ ನಿರ್ಬಂಧವನ್ನು ಹೈಕೋರ್ಟ್ ತೆರವುಗೊಳಿಸಿದೆ.
ಧರ್ಮಸ್ಥಳ ಮತ್ತು ಹರ್ಷೇಂದ್ರ ಕುಮಾರ್ ವಿರುದ್ಧ ಯಾವುದೇ ಮಾನಹಾನಿ ವಿಷಯ ಪ್ರಸಾರ ಅಥವಾ ಪ್ರಕಟ ಮಾಡದಂತೆ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಇತ್ತೀಚಿಗೆ ಆದೇಶ ಹೊರಡಿಸಿತ್ತು. ಜೊತೆಗೆ ಇದಕ್ಕೆ ಸಂಬಂಧಪಟ್ಟ 8 ಸಾವಿರ ಸುದ್ದಿ ಲಿಂಕ್ ಗಳನ್ನು ಡಿಲೀಟ್ ಮಾಡುವಂತೆ ಕೋರ್ಟ್ ಸೂಚನೆ ನೀಡಿತ್ತು. ಮಾಧ್ಯಮ ನಿರ್ಬಂಧ ಪ್ರಶ್ನಿಸಿ ಕೆಲವು ಯುಟ್ಯೂಬ್ ಚಾನೆಲ್‌ಗಳು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದವು. ಆ ಬಳಿಕ ಹೈಕೋರ್ಟ್‌ಗೆ ತೆರಳುವಂತೆ ಸೂಚಿಸಲಾಗಿತ್ತು. ಹೈಕೋರ್ಟ್ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ವಿಚಾರಣೆ ನಡೆಸಿದ್ದು ನಿರ್ಬಂಧ ಆದೇಶಕ್ಕೆ ತಡೆ ನೀಡಿದೆ.
ವಿಚಾರಣೆ ನಡೆಸಿದ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು, ಕುಡ್ಲ ರ‍್ಯಾಂಪೇಜ್ ಯೂಟ್ಯೂಬ್ ಚಾನೆಲ್ ಸಲ್ಲಿಸಿರುವ ಅರ್ಜಿಯನ್ನು ಭಾಗಶಃ ಪುರಸ್ಕರಿಸಿ ಮಾಧ್ಯಮಗಳ ನಿರ್ಬಂಧ ಆದೇಶ ತೆರವುಗೊಳಿಸಿತು. ಅಲ್ಲದೆ, ಹೊಸದಾಗಿ ಮಧ್ಯಂತರ ಅರ್ಜಿಯನ್ನು ಪರಿಗಣಿಸುವಂತೆ ವಿಚಾರಣಾಧೀನ ನ್ಯಾಯಾಲಯಕ್ಕೆ ಸೂಚಿಸಿದೆ. ಮಾಧ್ಯಮಗಳು ತಮ್ಮ ಕುಟುಂಬದ ವಿರುದ್ಧ ಸುದ್ದಿ ಪ್ರಸಾರ ಮಾಡುತ್ತಿರುವುದನ್ನು ವಿರೋಧಿಸಿ ಹರ್ಷೇಂದ್ರ ಕುಮಾರ್ ಬೆಂಗಳೂರು ಕೋರ್ಟಿನಲ್ಲಿ ತಡೆಯಾಜ್ಞೆ ತಂದಿದ್ದರು.
The Karnataka High Court has lifted the interim media gag order that had restrained the press from publishing or broadcasting news related to Dharmasthala Dharmadhikari Veerendra Heggade and his family member Harshendra Kumar in connection with the ongoing investigation into alleged buried human remains near the Nethravathi river.
25-10-25 09:33 pm
Bangalore Correspondent
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
25-10-25 09:36 pm
HK News Desk
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
25-10-25 08:08 pm
Mangalore Correspondent
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
Mangalore Land Fraud, Lawyer, Mohiuddin Bava:...
24-10-25 07:57 pm
Police Commissioner Sudheer Reddy, Mangalore:...
24-10-25 11:57 am
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm