ಬ್ರೇಕಿಂಗ್ ನ್ಯೂಸ್
10-08-25 09:12 pm HK News Desk ಕರ್ನಾಟಕ
ಕೊಪ್ಪಳ, ಆ.10: ಅನ್ಯಧರ್ಮದ ಯುವತಿಯನ್ನು ಹಿಂದೂ ಯುವಕ 30 ವರ್ಷದ ಗವಿ ಸಿದ್ದಪ್ಪ ನಾಯಕ್ ಎಂಬ ಯುವಕ ಪ್ರೀತಿಸುತ್ತಿದ್ದ ಎಂಬುದಕ್ಕೆ ಮುಸ್ಲಿಂ ಯುವಕನೊಬ್ಬ ಬರ್ಬರವಾಗಿ ಕೊಲೆ ಮಾಡಿರುವ ಪ್ರಕರಣ ಇತ್ತೀಚೆಗೆ ಬೆಳಕಿಗೆ ಬಂದಿತ್ತು. ಸಾದಿಕ್ ಎಂಬಾತ ಗವಿಸಿದ್ದಪ್ಪನನ್ನು ಕೊಲೆ ಮಾಡಿ ತಾನೇ ಕೃತ್ಯ ಎಸಗಿದ್ದಾಗಿ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ. ಇದೀಗ ಕೊಲೆಯಾದ ಗವಿಸಿದ್ದಪ್ಪನ ಮನೆಗೆ ಭೇಟಿ ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಬಸನಗೌಡ ಪಾಟೀಲ ಯತ್ನಾಳ್, ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಮುಸ್ಲಿಂ ಯುವತಿಯರನ್ನ ಮದುವೆಯಾದರೆ 5 ಲಕ್ಷ ನೀಡುವುದಾಗಿ ಕರೆ ನೀಡಿದ್ದಾರೆ.
ಕೊಪ್ಪಳ ಜಿಲ್ಲೆಯಲ್ಲಿ ಗವಿಸಿದ್ದಪ್ಪ ನಾಯಕ್ ಎಂಬ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊಲೆಯಾದ ಗವಿಸಿದ್ದಪ್ಪನ ಮನೆಗೆ ಭೇಟಿ ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಯತ್ನಾಳ್, ಈ ಘಟನೆಯನ್ನು "ಲವ್ ಜಿಹಾದ್" ಎಂದು ಬಣ್ಣಿಸಿ, ಸರ್ಕಾರವು ಹಿಂದುಗಳಿಗೆ ರಕ್ಷಣೆ ನೀಡುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.
ಮುಸ್ಲಿಂ ಯುವತಿಯರನ್ನ ಮದುವೆಯಾದ್ರೆ 5 ಲಕ್ಷ ರೂಪಾಯಿ; ಯತ್ನಾಳ್
ಕೊಲೆಯಾದ ಗವಿಸಿದ್ದಪ್ಪ ನಾಯಕ್ ಮನೆಗೆ ಭೇಟಿಯಾದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಯತ್ನಾಳ್, ಮುಸ್ಲಿಂ ಯುವತಿಯರನ್ನು ಮದುವೆಯಾದ್ರೆ 5 ಲಕ್ಷ ನೀಡುವುದಾಗಿ ಘೋಷಿಸಿದ್ದಾರೆ. ಅಲ್ಲದೇ ಇದಕ್ಕಾಗಿ ಅಭಿಯಾನವನ್ನೂ ಆರಂಭಿಸುತ್ತೇವೆ ಎಂದು ಹೇಳಿದ್ದಾರೆ.
ಹಿಂದುಗಳಿಗೆ ರಕ್ಷಣೆಯೇ ಇಲ್ಲ; ಯತ್ನಾಳ್
ಯತ್ನಾಳ್ ಈ ಘಟನೆಯನ್ನು "ಲವ್ ಜಿಹಾದ್" ಎಂದು ಕರೆದಿದ್ದಾರೆ. "ಹಿಂದುಗಳನ್ನು ಕೊಲೆ ಮಾಡುವ ಮನಸ್ಥಿತಿ ಮುಸ್ಲಿಂರಲ್ಲಿದೆ" ಎಂದು ಆರೋಪಿಸಿರುವ ಅವರು, ರಾಜ್ಯ ಸರ್ಕಾರವು ಅಲ್ಪಸಂಖ್ಯಾತರಿಗೆ ಮಾತ್ರ ರಕ್ಷಣೆ ನೀಡುತ್ತಿದೆ ಎಂದು ಕಿಡಿಕಾರಿದ್ದಾರೆ. "ಈ ಸರ್ಕಾರದಲ್ಲಿ ಹಿಂದುಗಳಿಗೆ ರಕ್ಷಣೆ ಇಲ್ಲ" ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಮಸೀದಿಯ ಮುಂದೆಯೇ ಗವಿಸಿದ್ದಪ್ಪ ಕೊಲೆಯಾಗಿದೆ. ಆದರೆ ಈ ಸಂದರ್ಭದಲ್ಲಿ ಯಾರೂ ಯಾಕೆ ತಡೆಯಲಿಲ್ಲ. ರೀಲ್ಸ್ ನಲ್ಲಿ ಮಚ್ಚು ತೋರಿಸಿದ್ದಾನೆ, ಈಗಾಗಲೇ ನಾಲ್ಕು ಜನರನ್ನು ಬಂಧಿಸಿದ್ದಾರೆ. ಆ ಹುಡುಗಿಯನ್ನೂ ಅರೆಸ್ಟ್ ಮಾಡಬೇಕು. ಜಿಲ್ಲಾ ಉಸ್ತುವಾರಿ ಸಚಿವರು ಕೇವಲ ಸಾಂತ್ವಾನ ಹೇಳಿದರೆ ಸಾಲದು ಕುಟುಂಬದ ನೆರವಿಗೆ ಬರಬೇಕು ಎಂದು ಆಕ್ರೋಶ ಹೊರಹಾಕಿದ್ದಾರೆ.
ಸಾಬರ ಸರ್ಕಾರವಾಗಿಬಿಟ್ಟಿದೆ ; ಯತ್ನಾಳ್
ಯತ್ನಾಳ್ ಈ ಘಟನೆಗೆ ಸರ್ಕಾರವೇ ಹೊಣೆ ಎಂದು ಆರೋಪಿಸಿದ್ದಾರೆ. "ಸರ್ಕಾರವು ಸಾಬರ ಸರ್ಕಾರವಾಗಿದೆ, ಮಚ್ಚು ತೆಗೆದುಕೊಂಡು ಓಡಾಡುವವರಿಗೆ ಬೆಂಬಲವಿದೆ" ಎಂದು ಟೀಕಿಸಿದ್ದಾರೆ. "ನನ್ನ ಫೋಟೊ ಹಿಡಿದವರಿಗೆ ಪ್ರಾಣ ಹೋದರೆ ಭಯಪಡುತ್ತಾರೆ, ಆದರೆ ಹಿಂದುಗಳಾರೂ ಭಯಪಡುವುದಿಲ್ಲ" ಎಂದು ಹೇಳಿದ್ದಾರೆ.
BJP MLA from Vijayapura, Basanagouda Patil Yatnal, has sparked controversy by announcing ₹5 lakh as an incentive to Hindu men who marry Muslim women, following his visit to the family of Gavisiddappa Naik – a 30-year-old Hindu man recently murdered in Koppal district.
25-10-25 09:33 pm
Bangalore Correspondent
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
25-10-25 09:36 pm
HK News Desk
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
25-10-25 08:08 pm
Mangalore Correspondent
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
Mangalore Land Fraud, Lawyer, Mohiuddin Bava:...
24-10-25 07:57 pm
Police Commissioner Sudheer Reddy, Mangalore:...
24-10-25 11:57 am
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm