ಸಿಎಂ ಯಡಿಯೂರಪ್ಪ ಆಸ್ಪತ್ರೆಯಿಂದ ಡಿಸ್ಚಾರ್ಜ್

10-08-20 01:02 pm       Bangalore Correspondent   ಕರ್ನಾಟಕ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು  ಕೋವಿಡ್ 19 ನಿಂದ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ  ಬಿಡುಗಡೆಯಾದರು.

ಬೆಂಗಳೂರು, ಆಗಸ್ಟ್‌ 10: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು  ಕೋವಿಡ್ 19 ನಿಂದ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ  ಬಿಡುಗಡೆಯಾದರು.

ಕೋವಿಡ್ 19 ಸೋಂಕು ಕಾಣಿಸಿಕೊಂಡಿರುವ ಕಾರಣ ಬಿ ಎಸ್ ಯಡಿಯೂರಪ್ಪ ಅವರು ಆಗಸ್ಟ್ ಎರಡರಂದು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು.

ಸದ್ಯ ಮುಖ್ಯಮಂತ್ರಿಗಳು ಸಂಪೂರ್ಣ ಗುಣಮುಖರಾಗಿದ್ದು, ಕೋವಿಡ್ ಪರೀಕ್ಷೆಯಲ್ಲಿ ನೆಗೆಟಿವ್ ಬಂದ ಕಾರಣ ಬಿಡುಗಡೆ ಮಾಡಲಾಗಿದೆ. ಪೊಲೀಸ್ ಬಿಗುಭದ್ರತೆಯಲ್ಲಿ ಆಸ್ಪತ್ರೆಯಿಂದ ಮನೆಗೆ ಕರೆದೊಯ್ಯಲಾಯಿತು.

ಸೋಂಕಿನ ಯಾವುದೇ ಲಕ್ಷಣವಿಲ್ಲದ ಹಿನ್ನೆಲೆ ಮುಖ್ಯಮಂತ್ರಿಗಳು ಆಸ್ಪತ್ರೆಯ ಕೊಠಡಿಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳೊಂದಿಗೆ ಕಚೇರಿಯ ದೈನಂದಿನ ಕೆಲಸ ಕಾರ್ಯಗಳನ್ನು ನಿರ್ವಹಿಸುತ್ತಿದ್ದರು.