ಬ್ರೇಕಿಂಗ್ ನ್ಯೂಸ್
14-08-25 03:51 pm Bangalore Correspondent ಕರ್ನಾಟಕ
ಬೆಂಗಳೂರು, ಆ 14 : "ಇತ್ತೀಚಿನ ವರ್ಷಗಳಲ್ಲಿ ಕೋಮುಭಾವನೆಗೆ ಧಕ್ಕೆ ತರುವ ಹಾಗೂ ಪ್ರಚೋದಿಸುವ ದ್ವೇಷ ಭಾಷಣ ಮಾಡುವವರ ವಿರುದ್ಧ ಹೊಸ ಕಾನೂನು ತರಲಾಗುವುದು" ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು.
ಕರಾವಳಿ ಭಾಗದಲ್ಲಿ ಇತ್ತೀಚಿನ ವರ್ಷಗಳಲ್ಲಿ ಕೋಮು ಸಾಮರಸ್ಯ ಕದಡುವ ಕೆಲಸವಾಗುತ್ತಿದೆ. ಹೀಗಾಗಿ ಕೊಲೆ, ಹಿಂಸಾಚಾರದಂತಹ ಘಟನೆಗಳು ನಡೆಯುತ್ತಿವೆ. ಇದನ್ನು ಹತ್ತಿಕ್ಕಲು ವಿಶೇಷ ಕಾರ್ಯ ಪಡೆ ರಚಿಸಲಾಗಿದೆ. ಅನಗತ್ಯವಾಗಿ ಸಾಮಾಜಿಕ ಮಾಧ್ಯಮಗಳ ಮೂಲಕ ದ್ವೇಷ ಭಾಷಣ ಹಾಗೂ ಪ್ರಚೋದನಕಾರಿ ಪೋಸ್ಟ್ಗಳಿಂದ ಹಿಂಸಾಚಾರಕ್ಕೆ ಕಾರಣವಾಗಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ದ್ವೇಷ ಭಾಷಣ ಮಾಡುವವರ ವಿರುದ್ಧ ಹೊಸ ಕಾನೂನು ಜಾರಿ ಮಾಡಲಾಗುವುದು ಎಂದರು.
ಕಳೆದ ಜೂನ್ 11 ರಂದು ದಕ್ಷಿಣ ಕನ್ನಡ, ಶಿವಮೊಗ್ಗ ಹಾಗೂ ಉಡುಪಿಗಳಲ್ಲಿ ಕೋಮು ಹಿಂಸಾಚಾರ ನಿಯಂತ್ರಿಸಲು ವಿಶೇಷ ಕಾರ್ಯಪಡೆ ರಚಿಸಲಾಗಿದೆ. ದ್ವೇಷ ಭಾಷಣ, ಕೋಮು ಸಂಬಂಧಿತ ಘಟನೆಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವವರ ಮೇಲೆ ನಿಗಾ ವಹಿಸುತ್ತಿದೆ. ಸಂಭಾವ್ಯ ಕೋಮು ಹಿಂಸಾಚಾರ ಬಗ್ಗೆ ಕಣ್ಗಾವಲು ಇರಿಸುತ್ತಿದೆ. ವಿಶೇಷ ಕಾರ್ಯಪಡೆ ಸಿಬ್ಬಂದಿಗೆ ಗುಪ್ತಚರ ಹಾಗೂ ತಂತ್ರಜ್ಞಾನ ಬಳಕೆ ತರಬೇತಿ ಕೊಡಲಾಗಿದೆ. ಬೆಂಗಳೂರು ಹೊರತುಪಡಿಸಿ ಮಂಗಳೂರು ರಾಜ್ಯದ ಜಿಡಿಪಿಯಲ್ಲಿ ಶೇ.6ರಷ್ಟು ಕೊಡುಗೆಯಿದೆ. ಹೀಗಾಗಿ ಕೋಮುಸಾಮರಸ್ಯ ಹತ್ತಿಕ್ಕಲು ಕಾರ್ಯಪಡೆ ಕಾರ್ಯನಿರ್ವಹಿಸುತ್ತಿದೆ. ಇದುವರೆಗೂ ಹಿಂಸಾಚಾರ ಆಥವಾ ಕೋಮು ಭಾವನೆಗೆ ಧಕ್ಕೆ ತರುವ ರೀತಿ ಯಾವುದೇ ಘಟನೆಗಳು ಸಂಭವಿಸಿಲ್ಲ" ಎಂದು ಹೇಳಿದರು.
ಇನ್ನು, ಇದೇ ಉದ್ದೇಶದಿಂದ ಉಡುಪಿ ಜಿಲ್ಲೆಯ 207 ಕಡೆಗಳಲ್ಲಿ ಸಿಸಿ ಕ್ಯಾಮರಾ ಕಣ್ಗಾವಲು ಇಡಲಾಗುತ್ತಿದೆ. ಸೂಕ್ಷ್ಮವಲಯ ಹೊಂದಿರುವ ಉಡುಪಿ ಜಿಲ್ಲೆಯಲ್ಲಿ ನಡೆಯುವ ಅಪರಾಧ ಚಟುವಟಿಕೆಗಳ ಮೇಲೆ ಕಣ್ಗಾವಲು ಇರಿಸುವ ಸಲುವಾಗಿ ಕೋಮುಸೂಕ್ಷ್ಮ ಮತ್ತು ಆಯಕಟ್ಟಿನ 207 ಪ್ರದೇಶಗಳಲ್ಲಿ 601 ಸಿಸಿ ಕ್ಯಾಮರಾಗಳನ್ನು ಅಳವಡಿಸುವ ಯೋಜನೆಯನ್ನು ಹಾಕಿಕೊಳ್ಳಲಾಗಿದೆ. ಈ ಬಗ್ಗೆ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಮಾಧ್ಯಮಗೋಷ್ಟಿ ಮೂಲಕ ತಿಳಿಸಿದ್ದರು.
ಒಟ್ಟು 2.50 ಕೋಟಿ ರೂ. ವೆಚ್ಚದಲ್ಲಿ ಈ ಯೋಜನೆ ಇದ್ದು, ಇದಕ್ಕೆ ಛೇಂಬರ್ ಆಫ್ ಕಾಮರ್ಸ್ ಕೈಜೋಡಿಸಿದೆ. ಈ ಯೋಜನೆಯ ಆರಂಭಿಕ ಹಂತದಲ್ಲಿ ಜಿಲ್ಲೆಯ ಗಡಿ ಪ್ರದೇಶಗಳು, ಮತೀಯ ಸೂಕ್ಷ್ಮ ಸ್ಥಳಗಳನ್ನು ಆಯ್ಕೆ ಮಾಡಲಾಗಿದ್ದು, ಕ್ಯಾಮರಾಗಳ ಮೂಲಕ ಸ್ಥಳೀಯ ಪೊಲೀಸ್ ಠಾಣೆ ಹಾಗೂ ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಮ್ನಲ್ಲಿ ನಿರಂತರವಾಗಿ ವೀಕ್ಷಣೆ ನಡೆಸಲಾಗುವುದು.
ಕಾರ್ಕಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಮಾಳ, ಹೊಸ್ಮಾರು, ಸಚ್ಚರಿಪೇಟೆ, ಕಾರ್ಕಳ ನಗರ ಠಾಣಾ ವ್ಯಾಪ್ತಿಯ ಸಾಣೂರು, ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮೇಶ್ವರ, ಅಮಾಸೆಬೈಲು ಠಾಣಾ ವ್ಯಾಪ್ತಿಯ ಹೊಸಂಗಡಿ, ಕೊಲ್ಲೂರು ಠಾಣಾ ವ್ಯಾಪ್ತಿಯ ದಳಿ, ಗಂಗೊಳ್ಳಿ ಠಾಣಾ ವ್ಯಾಪ್ತಿಯ ಮೇಲ್ ಗಂಗೊಳ್ಳಿ, ಮಲ್ಪೆ ಠಾಣಾ ವ್ಯಾಪ್ತಿಯ ಮಲ್ಪೆ ಬೀಚ್ ಮತ್ತು ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸಿಟಿ ಬಸ್ ನಿಲ್ದಾಣಗಳಲ್ಲಿ ಒಟ್ಟು 10 ಸ್ವಯಂ ಚಾಲಿತ ನಂಬರ್ ಪ್ಲೇಟ್ ರೀಡರ್ ಕ್ಯಾಮರಾ ಹಾಗೇ, ಕಲ್ಸಂಕ, ಕರಾವಳಿ ಜಂಕ್ಷನ್, ಇಂದ್ರಾಳಿ ಬ್ರಿಡ್ಜ್, ಸಂತೆಕಟ್ಟೆ, ಸರ್ವಿಸ್ ಬಸ್ ನಿಲ್ದಾಣ ಮತ್ತು ಹಳೆ ಕೆಎಸ್‌ಆರ್‌ಟಿಸಿ ನಿಲ್ದಾಣ ಹಾಗೂ ಕುಂದಾಪುರ ಉಪವಿಭಾಗ ವ್ಯಾಪ್ತಿಯ ಎಂ ಕೋಡಿ ಜಂಕ್ಷನ್, ಕಂಡ್ಲೂರು ಪೇಟೆ ಹಾಗೂ ಕಾರ್ಕಳ ಉಪವಿಭಾಗ ವ್ಯಾಪ್ತಿಯ ಬಾರಾಡಿ ಮತ್ತು ನಾರಾವಿ ಸ್ಥಳಗಳಲ್ಲಿ ಒಟ್ಟು 10 ಉತ್ತಮ ಗುಣಮಟ್ಟದ ಕ್ಯಾಮರಾ ಅಳವಡಿಸಲಾಗುತ್ತದೆ.
Home Minister G. Parameshwara has announced that the Karnataka government will soon introduce a new law to take strict action against those delivering hate speeches that incite communal tensions.
18-09-25 05:34 pm
Bangalore Correspondent
Ksrtc Bus, Driver, Heart Attack: ಬಸ್ ಓಡಿಸುವಾಗ...
17-09-25 06:02 pm
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
18-09-25 08:14 pm
HK News Desk
ಎರಡು ಬಾರಿ ಕಚ್ಚಿದ್ರೆ ಬೀದಿ ನಾಯಿಗೆ ಜೀವಾವಧಿ ಶಿಕ್ಷ...
16-09-25 10:11 pm
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
18-09-25 11:11 pm
Mangalore Correspondent
Mangalore, UT Khader: ಹಿಂದುಳಿದ ವರ್ಗಗಳ ಆಯೋಗ ಸ್...
18-09-25 09:12 pm
ಮಾಜಿ ಸೈನಿಕರಿಗೆ ಸರ್ಕಾರಿ ಸವಲತ್ತು ನೀಡದೆ ನಿರ್ಲಕ್ಷ...
18-09-25 09:09 pm
Banglegudde, Dharmasthala, SIT: ಬಂಗ್ಲೆಗುಡ್ಡೆ...
18-09-25 07:40 pm
Ajith Kumar Rai, Mangalore: ಬಂಟ- ನಾಡವರು ಒಂದೇ,...
18-09-25 06:11 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm