ಬ್ರೇಕಿಂಗ್ ನ್ಯೂಸ್
18-08-25 01:25 pm Bangalore Correspondent ಕರ್ನಾಟಕ
ಬೆಂಗಳೂರು, ಆ 18 : ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆ ಮುಂದುವರಿದಿದೆ. ಆದರೆ ಎಸ್‌ಐಟಿ ತನಿಖೆ ನಡೆಯುತ್ತಿರುವ ಸಂದರ್ಭದಲ್ಲಿಯೇ ಭಾರೀ ಪರ - ವಿರೋಧ ವ್ಯಕ್ತವಾಗುತ್ತಿದೆ. ಧರ್ಮಸ್ಥಳ ಕ್ಷೇತ್ರದಲ್ಲಿ ಎಸ್‌ಐಟಿ ತನಿಖೆ ನಡೆಸುವುದಕ್ಕೆ ಆ ಅಯೋಗ್ಯ ಹೇಳಿರುವುದೇ ಕಾರಣ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಇದು ಭಾರೀ ಚರ್ಚೆಗೆ ಕಾರಣವಾಗಿದೆ. ಪ್ರಹ್ಲಾದ್ ಜೋಶಿ ಅವರು ಯಾರನ್ನು ಅಯೋಗ್ಯ ಎಂದರು ಹಾಗೂ ಧರ್ಮಸ್ಥಳ ವಿಚಾರವಾಗಿ ಅವರು ಮಾತನಾಡಿದ ಸ್ಫೋಟಕ ವಿಚಾರಗಳು ಏನು ಎನ್ನುವ ವಿವರ ಇಲ್ಲಿದೆ.
ಕರ್ನಾಟಕದ ಧರ್ಮಸ್ಥಳ ವಿಚಾರವು ಇತ್ತೀಚಿನ ದಿನಗಳಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಮಾತ್ರವಲ್ಲ ಅಂತಾರರಾಷ್ಟ್ರೀಯ ಮಟ್ಟದಲ್ಲೂ ಚರ್ಚೆಗೆ ಕಾರಣವಾಗಿದೆ. ಧರ್ಮಸ್ಥಳದ ವಿವಿಧ ಪ್ರದೇಶಗಳಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎನ್ನುವ ವಿಚಾರವು ಭಾರೀ ಚರ್ಚೆಗೆ ಕಾರಣವಾಗಿದೆ. ಆ ವಿಷಯದ ಬಗ್ಗೆ ಎಸ್‌ಐಟಿ ತನಿಖೆ ಮುಂದುವರಿದಿದೆ. ವಿವಿಧ ಜಾಗಗಳಲ್ಲಿ ಉತ್ಖನನ ಮಾಡಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ. ಈ ರೀತಿ ಇರುವಾಗಲೇ ಮಹತ್ವದ ಮಾಹಿತಿಯನ್ನು ಪ್ರಹ್ಲಾದ್ ಜೋಶಿ ಹಂಚಿಕೊಂಡಿದ್ದಾರೆ.
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಧಾರ ಹಾಗೂ ನಡೆಯನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಖಂಡಿಸಿದ್ದಾರೆ. ಮುಸ್ಲಿಂ ಲೀಗ್ ಸೇರಿದಂತೆ ಹಲವು ಹಿಂದೂ ವಿರೋಧಿ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಕಾಂಗ್ರೆಸ್ ದೇಶದಲ್ಲಿಯೇ ಹಿಂದೂ ದೇವಾಲಯಗಳನ್ನು ಮುಚ್ಚುವ ಪ್ರಯತ್ನ ನಡೆಸಿದೆ ಎನ್ನುವ ಗಂಭೀರವಾದ ಆರೋಪವನ್ನು ಪ್ರಹ್ಲಾದ್ ಜೋಶಿ ಮಾಡಿದ್ದಾರೆ.
ಯಾರೋ ಅಯೋಗ್ಯ ಹೇಳಿದಾ ಅಂತಾ ಧರ್ಮಸ್ಥಳ ಪ್ರಕರಣವನ್ನು ತನಿಖೆ ಮಾಡುವುದಕ್ಕೆ ಕೊಟ್ಟಿದ್ದಾರೆ. ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಅವರ ವಿರುದ್ಧ ಬಾಯಿಗೆ ಬಂದ ರೀತಿ ಮಾತನಾಡಿದ್ದಾರೆ. ಈ ರೀತಿಯ ಅಯೋಗ್ಯರು ಎಲ್ಲಿ ಹುಡುಕಿದರೂ ಸಿಗುವುದಿಲ್ಲ ಎಂದು ಆಕ್ರೋಶ ಹೊರ ಹಾಕಿದ್ದಾರೆ. ಈ ಸರ್ಕಾರಕ್ಕೆ ಯಾವುದೇ ಬದ್ಧತೆ ಎನ್ನುವುದೇ ಇಲ್ಲ. ಇವರು ಎರಡು ದೋಣಿಗಳ ಮೇಲೆ ಕಾಲಿರಿಸಿದ್ದಾರೆ. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಹೇಳಿಕೆಗಳೇ ಉದಾ ಎಂದು ಜೋಶಿ ಕಿಡಿರಿದ್ದಾರೆ .
The ongoing SIT investigation into the alleged murder case in Dharmasthala has sparked widespread reactions across the state. Union Minister Pralhad Joshi made explosive statements today, slamming the Congress government for what he termed a politically motivated investigation driven by baseless remarks.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm