ಬ್ರೇಕಿಂಗ್ ನ್ಯೂಸ್
18-08-25 08:45 pm Mangalore Correspondent ಕರ್ನಾಟಕ
ಬೆಂಗಳೂರು, ಆ 18 : ಧರ್ಮಸ್ಥಳ ವಿಚಾರದಲ್ಲಿ ಸುಳ್ಳು ಆಪಾದನೆ ಮಾಡಿದ್ದರೆ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿಯವರೇ ಭರವಸೆ ನೀಡಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.
ಸೋಮವಾರ ವಿಧಾನಸಭೆ ಕಲಾಪದ ವೇಳೆ ಧರ್ಮಸ್ಥಳ ಕೇಸ್ ಚರ್ಚಾ ಸಮಯದಲ್ಲಿ ಮಾತನಾಡಿದ ಅವರು, “ಜವಾಬ್ದಾರಿಯುತ ದಕ್ಷ ಹಿರಿಯ ಅಧಿಕಾರಿಗಳಿಗೆ ತನಿಖೆಯ ಜವಾಬ್ದಾರಿ ನೀಡಲಾಗಿದೆ. ಅಧಿಕಾರಿಗಳ ಮೇಲೆ ನಮಗೆ ನಂಬಿಕೆಯಿದೆ. ಮುಖ್ಯಮಂತ್ರಿಗಳು ಧರ್ಮಸ್ಥಳದ ಪ್ರಕೃತಿ ಚಿಕಿತ್ಸಾಲಯಕ್ಕೆ ತೆರಳಿ ಪ್ರತಿವರ್ಷ ಚಿಕಿತ್ಸೆ ಪಡೆದುಕೊಂಡು ಬಂದಿದ್ದಾರೆ. ಅವರಿಗೂ ಆ ಕ್ಷೇತ್ರದ ಮೇಲೆ ನಂಬಿಕೆಯಿದೆ. ಸಿಎಲ್ ಪಿ ಸಭೆಯಲ್ಲಿ ಶಾಸಕರಾದ ಶಿವಲಿಂಗೇಗೌಡರು ಹಾಗೂ ಬೇಳೂರು ಗೋಪಾಲಕೃಷ್ಣ ಅವರು ಪ್ರಸ್ತಾಪಿಸಿದಾಗ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ” ಎಂದರು.
ಒಂದೆರಡು ದಿನ ಸುಮ್ಮನಿರಿ;
“ಧರ್ಮಸ್ಥಳ ವಿಚಾರದಲ್ಲಿ ಮುಖ್ಯಮಂತ್ರಿಗಳು ಸಹ ಸೂಚನೆ ನೀಡಿದ್ದು ಯಾರಿಗೆ ಯಾವ ರೀತಿ ಬಲಿ ತೆಗೆದುಕೊಳ್ಳಬೇಕೋ, ಯಾವ ಕಾನೂನು ಬಳಸಬೇಕೋ ಅದನ್ನು ಮಾಡಲಾಗುತ್ತದೆ. ಗೃಹಸಚಿವರು ಇದಕ್ಕೆ ಬದ್ದವಾಗಿದ್ದಾರೆ. ಈ ವಿಚಾರದಲ್ಲಿ ಒಂದೆರಡು ದಿನ ಸುಮ್ಮನಿರಿ. ನೀವೆಲ್ಲರೂ ತಾಳ್ಮೆವಹಿಸಿ” ಎಂದು ಪ್ರತಿಪಕ್ಷಗಳಿಗೆ ಆಗ್ರಹಿಸಿದರು.
“ಪ್ರತಿಪಕ್ಷದವರು ಮೊದಲೇ ಎಸ್ ಐಟಿ ರಚನೆ ಬೇಡ ಎಂದು ಹೇಳಬೇಕಿತ್ತು. ಆದರೆ ಹದಿನೈದು ದಿನ ಕಳೆದ ನಂತರ ಹೇಳುತ್ತಾ ಇದ್ದೀರಿ. ಈ ವಿಚಾರದಲ್ಲಿ ಮೊದಲು ನೀವು ಮಾತನಾಡಿಯೇ ಇಲ್ಲ. ದಿನಬೆಳಗಾದರೆ ನಿಮ್ಮ (ಪ್ರತಿಪಕ್ಷಗಳ ನಾಯಕರು) ಮುಖ್ಯಮಂತ್ರಿಗಳ ಮೇಲೆ, ನನ್ನ ಮೇಲೆ ಸೇರಿದಂತೆ ಅನೇಕರ ಮೇಲೆ ಯಾರೋ ಒಬ್ಬ ಆಪಾದನೆ ಮಾಡಿದ್ದಾರೆ. ಇದರಲ್ಲಿ ಷಡ್ಯಂತ್ರ ಇರಬಹುದು. ಇದೆಲ್ಲವೂ ಆಚೆ ಬರಬೇಕು ಅದಕ್ಕಾಗಿ ಗೃಹಸಚಿವರು ಕಾನೂನಿನ ಅಡಿ ಕೆಲಸ ಮಾಡುತ್ತಿದ್ದಾರೆ” ಎಂದು ಹೇಳಿದರು.
ರಾಜಕಾರಣದಲ್ಲಿ ಧರ್ಮ ಇರಬೇಕೇ ಹೊರತು ಧರ್ಮದಲ್ಲಿ ರಾಜಕಾರಣವಲ್ಲ ;
“ಯಾವುದೇ ಗೌಪ್ಯ ಮಾಹಿತಿಗಳನ್ನು ಬಹಿರಂಗಗೊಳಿಸುವುದಿಲ್ಲ ಎಂದು ಗೃಹಸಚಿವರು ಪ್ರಮಾಣ ವಚನ ತೆಗೆದುಕೊಂಡಿರುತ್ತಾರೆ. ವಿರೋಧ ಪಕ್ಷದಲ್ಲಿ ಇರುವ ನೀವುಗಳು ಸಹ ಅಧಿಕಾರದಲ್ಲಿದ್ದವರು. ತನಿಖೆ ವಿಚಾರವನ್ನು ಬಹಿರಂಗಪಡಿಸುವ ಮೊದಲು ಎಲ್ಲರೂ ತಾಳ್ಮೆಯಿಂದ ಇರಬೇಕು. ರಾಜಕಾರಣದಲ್ಲಿ ಧರ್ಮ ಇರಬೇಕೇ ಹೊರತು ಧರ್ಮದಲ್ಲಿ ರಾಜಕಾರಣವಿರಬಾರದು. ಇದರಲ್ಲಿ ರಾಜಕೀಯ ಮಾಡಬೇಡಿ” ಎಂದರು.
ತಪ್ಪು ಯಾರೇ ಮಾಡಿದ್ದರು ಶಿಕ್ಷೆ ಆಗಿಯೇ ಆಗುತ್ತದೆ. ಸೌಜನ್ಯ ಪ್ರಕರಣದಲ್ಲಿ ಯಾವುದೇ ತನಿಖೆ ನಡೆಯಲಿ ಎಂದು ಪ್ರತಿಪಕ್ಷವರು ಹೇಳಿದರು. ನಾವು ಅದನ್ನು ಗೌರವಿಸಿದೆವು. ಕೊನೆಗೆ ನ್ಯಾಯಲಯ ಹಾಗೂ ಸಿಬಿಐ ನವರು ಅಂತಿಮ ತೀರ್ಪು ನೀಡಿದಾಗ ಏನೂ ಇಲ್ಲ ಎಂದು ತಿಳಿಯಿತು” ಎಂದು ಹೇಳಿದರು.
“ತನಿಖೆ ಯಾವ ಕಾರಣಕ್ಕೆ ಪ್ರಾರಂಭವಾಗುತ್ತದೆ ಎಂಬುದು ಪ್ರತಿಪಕ್ಷಗಳಿಗೂ ತಿಳಿದಿದೆ. ಧರ್ಮಸ್ಥಳ ವಿಚಾರದಲ್ಲಿ ಸರಿತಪ್ಪುಗಳಿವೆಯೋ, ಷಡ್ಯಂತ್ರವಿದೆಯೋ ಎಂಬುದು ತನಿಖೆ ನಂತರ ತಿಳಿಯುತ್ತದೆ. ವ್ಯಕ್ತಿಯೊಬ್ಬ ತಲೆಬುರುಡೆ ಹಿಡಿದುಕೊಂಡು ನ್ಯಾಯಲಯದ ಮುಂದೆ ಹೇಳಿಕೆ ನೀಡಿದ ಮೇಲೆ ಇದನ್ನು ಇಡೀ ದೇಶ ನೋಡಿತು. ಜೊತೆಗೆ ಎಲ್ಲಾ ಮಾಧ್ಯಮಗಳು ಇದರ ಬಗ್ಗೆ ಗಮನ ಸೆಳೆಯಿತು” ಎಂದರು.
Deputy Chief Minister D.K. Shivakumar has stated that stern action will be taken against anyone found making false accusations in the Dharmasthala case, following assurances from Chief Minister Siddaramaiah during a Congress Legislature Party (CLP) meeting.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am