ಬ್ರೇಕಿಂಗ್ ನ್ಯೂಸ್
20-08-25 12:33 pm Bangalore Correspondent ಕರ್ನಾಟಕ
ಬೆಂಗಳೂರು, ಆ 20 : ರಾಜ್ಯದಲ್ಲಿ ಕಳೆದ ಮೂರು ವರ್ಷದಲ್ಲಿ ಹೃದಯಾಘಾತದಿಂದ 1,004 ಮಂದಿ ಮೃತಪಟ್ಟಿದ್ದಾರೆ. ಇವರೆಲ್ಲರೂ ತೃತೀಯ ಹಂತದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವಾಗ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟವರು ಎಂದು ಸರಕಾರ ವಿಧಾನ ಪರಿಷತ್ ಮಾಹಿತಿ ನೀಡಿದೆ. ಜೀವನ ಶೈಲಿ ಬದಲಾವಣೆಯಿಂದ ಇಂಥ ಅಪತ್ತು ಎದುರಾಗಿದೆ ಎಂದು ಸರಕಾರ ಕಳವಳ ವ್ಯಕ್ತಪಡಿಸಿದೆ.
ಬಿಜೆಪಿಯ ಧನಂಜಯ ಸರ್ಜಿ, ಕಾಂಗ್ರೆಸ್ ದಿನೇಶ್ ಗೂಳಿಗೌಡ ಕೇಳಿದ ಪ್ರಶ್ನೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ನೀಡಿದ ಅಂಕಿ ಅಂಶಗಳಿವು. ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಕಳೆದ 3 ವರ್ಷದಲ್ಲಿ ಹೃದಯಾಘಾತ ಸಂಭವಿಸಿರುವ ಪ್ರಕರಣಗಳು 61,299 ಇದ್ದು, ಇದರಲ್ಲಿ 45 ವರ್ಷಕ್ಕಿಂತ ಕಡಿಮೆ ವಯಸ್ಸಿನವರಲ್ಲಿ ಹಠಾತ್ ಹೃದಯಾಘಾತದಿಂದ ಮೃತಪಟ್ಟವರ ಸಂಖ್ಯೆ 472 ಇದೆ.
ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿಲ್ಲ. ಕೋವಿಡ್ ನಂತರ ತಪ್ಪು ಗ್ರಹಿಕೆಯಿಂದಾಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವವರ ಸಂಖ್ಯೆ ಹೆಚ್ಚಾಗಿದೆ. ಆದರೆ, ಬದಲಾದ ಜೀವನ ಶೈಲಿ ಹಾಗೂ ಆಹಾರ ಕ್ರಮ ಹೃದಯ ಸಂಬಂಧಿ ಸಮಸ್ಯೆಗಳಿಗೆ ಕಾರಣವಾಗಿದ್ದು, ಜನರಲ್ಲಿ ಜಾಗೃತಿಯ ಅಗತ್ಯವಿದೆ ಎಂದು ಸಚಿವರು ಹೇಳಿದರು.
'ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆಯಡಿ ರಾಜ್ಯದ 86 ಸರಕಾರಿ ಆಸ್ಪತ್ರೆಗಳಲ್ಲಿ ಹಠಾತ್ ಹೃದಯಾಘಾತಗಳನ್ನು ತಡೆಯಲು 'ಹಬ್ ಅಂಡ್ ಸ್ಪೋಕ್' ಮಾದರಿಯಲ್ಲಿ ಚಿಕಿತ್ಸೆ ಒದಗಿಸಲಾಗುತ್ತಿದೆ. ಯೋಜನೆಯಡಿ 25 ಸಾವಿರ ರೂ. ವೆಚ್ಚದ ಟೆನೆಕ್ಸ್ಪ್ಲಸ್ ಇನ್ಜೆಕ್ಷನ್ ಉಚಿತವಾಗಿ ನೀಡಲಾಗುತ್ತಿದೆ. ಯೋಜನೆಯನ್ನು ರಾಜ್ಯದ ಎಲ್ಲ ತಾಲೂಕು ಆಸ್ಪತ್ರೆ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಿಗೆ ವಿಸ್ತರಿಸಲು ಕ್ರಮಕೈಗೊಳ್ಳಲಾಗುತ್ತಿದೆ,'' ಎಂದರು

ಕ್ಯಾತ್ ಲ್ಯಾಬ್ ;
''ಮಂಗಳೂರಿನ ವೆನ್ಲಾಕ್ ಆಸ್ಪತ್ರೆ, ಬೆಂಗಳೂರಿನ ಸರ್ ಸಿ.ವಿ ರಾಮನ್ನಗರ ಸಾರ್ವಜನಿಕ ಆಸ್ಪತ್ರೆ ಹಾಗೂ ಹೊಸಪೇಟೆ ಆಸ್ಪತ್ರೆಗಳಲ್ಲಿ ಹೃದಯ ರಕ್ತನಾಳಗಳ ಸಂಬಂಧಿತ ಚಿಕಿತ್ಸೆ ನೀಡುವ ಕ್ಯಾತ್ ಲ್ಯಾಬ್ ತೆರೆಯಲಾಗುವುದು. ಹೃದಯಘಾತ, ಸ್ಟೋಕ್, ಕಿಡ್ನಿ ವೈಫಲ್ಯದಂತಹ ಪ್ರಮುಖ ಕಾಯಿಲೆಗಳಿಗೆ ರಕ್ತದೊತ್ತಡ ಹಾಗೂ ಮಧುಮೇಹ ಹಾಗೂ ಹೆಚ್ಚಿನ ಚಿಕಿತ್ಸೆ ಅವಶ್ಯಕತೆ ಇರುವವರನ್ನು ಜಿಲ್ಲಾ ಹಾಗೂ ಸೌಲಭ್ಯ ಇರುವ ಆಸ್ಪತ್ರೆಗಳಿಗೆ ಶಿಫಾರಸು ಮಾಡುವ ಕಾರ್ಯ ಕೈಗೊಳ್ಳಲಾಗಿದೆ,'' ಎಂದು ತಿಳಿಸಿದರು.
"ಹೃದಯಾಘಾತದಿಂದ ಉಂಟಾಗುತ್ತಿರುವ ಸಾವುಗಳನ್ನು ತಡೆಯುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ತಾಲೂಕು ಆಸ್ಪತ್ರೆಗಳು ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಟೆಲಿ ಇಸಿಜಿ ವ್ಯವಸ್ಥೆ ಕಲ್ಪಿಸಲಾಗುವುದು. ಇದರಿಂದ ಜನರಿಗೆ ಸ್ಥಳೀಯ ಮಟ್ಟದಲ್ಲಿ ತಪಾಸಣೆಗೆ ಅನುಕೂಲವಾಗಲಿದೆ. ತಜ್ಞವೈದ್ಯರ ಮಾರ್ಗದರ್ಶನ ಪಡೆದು ಆರಂಭದಲ್ಲೇ ಸಮಸ್ಯೆ ಯನ್ನು ನಿಯಂತ್ರಿಸಬಹುದಾಗಿದೆ,'' ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸದನಕ್ಕೆ ತಿಳಿಸಿದರು.
ಹೃದ್ರೋಗ ಘಟಕಗಳ ಸ್ಥಾಪನೆ:
ಹೆಚ್ಚುತ್ತಿರುವ ಹೃದ್ರೋಗ ಸಮಸ್ಯೆ ನಿಯಂತ್ರಿಸಲು ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಡಿ ಬೆಂಗಳೂರಿನ ಕೆ.ಸಿ.ಜಿ. ಆಸ್ಪತ್ರೆ, ಇಎಸ್ಐಸಿ ಆಸ್ಪತ್ರೆಯಲ್ಲಿ ಹಾಗೂ ಮೈಸೂರು, ಕಲಬುರಗಿಯಲ್ಲಿ ಈಗಾಗಲೇ ಶಾಖೆಗಳನ್ನು ತೆರೆದು ಸೇವೆ ಒದಗಿಸಲಾಗುತ್ತಿದೆ.
ಹುಬ್ಬಳ್ಳಿಯಲ್ಲಿ ಶೇ. 80 ಕಾರ್ಯ ಪೂರ್ಣಗೊಂಡಿದ್ದು, 8 ತಿಂಗಳಲ್ಲಿ ಘಟಕ ಕಾರ್ಯಾರಂಭವಾಗಲಿದೆ. ಬೆಳಗಾವಿ ಘಟಕ ಈಗಾಗಲೇ ಸೇವೆ ಒದಗಿಸುತ್ತಿದ್ದು, 2 ತಿಂಗಳಲ್ಲಿ ಅಧಿಕೃತವಾಗಿ ಕೇಂದ್ರವನ್ನು ಉದ್ಘಾಟಿಸಲಾಗುವುದು. ಉಳಿದಂತೆ ಬಾಗಲಕೋಟೆ, ಯಾದಗಿರಿ, ಕೊಪ್ಪಳದಲ್ಲಿ ಶೀಘ್ರದಲ್ಲೇ ರಾಯಚೂರು, ಬೀದರ್ ಮತ್ತು ಕಾರ್ಯಾರಂಭವಾಗಲಿವೆ ಎಂದರು.
In a concerning revelation, over 1,004 people have died due to heart attacks in Karnataka in the past three years. These individuals reportedly died either while being brought to tertiary care hospitals or during treatment that did not succeed, the state government informed the Legislative Council.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm