ಬ್ರೇಕಿಂಗ್ ನ್ಯೂಸ್
21-08-25 10:21 pm HK News Desk ಕರ್ನಾಟಕ
ಹುಬ್ಬಳ್ಳಿ, ಆ 21: ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ವಿರುದ್ಧ ಷಡ್ಯಂತ್ರ ನಡೆಸಿರುವವರನ್ನು ಬಂಧಿಸುವಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರುತ್ತಿದೆ. ಸರ್ಕಾರದ ನಡೆಯಿಂದ ಬೇಸರವಾಗಿದೆ. ಆದ್ದರಿಂದ ಶೀಘ್ರು ಸಾಧು-ಸಂತರ ನಿಯೋಗದೊಂದಿಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಲಾಗುವುದು ಎಂದು ರಾಷ್ಟ್ರಸಂತ ಆಚಾರ್ಯ ಶ್ರೀ ಗುಣಧರನಂದಿ ಮಹಾರಾಜರು ಹೇಳಿದ್ದಾರೆ.
ಇಲ್ಲಿಗೆ ಸಮೀಪದ ವರೂರು ನವಗ್ರಹತೀರ್ಥ ಕ್ಷೇತ್ರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶ್ರೀಗಳು, ಧರ್ಮಸ್ಥಳದ ಮೇಲೆ ಆಗುತ್ತಿರುವ ಷಡ್ಯಂತ್ರದಿಂದ ಮನಸ್ಸಿಗೆ ಬಹಳ ನೋವಾಗಿದೆ. ನಿಯೋಗದ ಭೇಟಿಗೆ ನಿಗದಿತ ದಿನ ನೀಡುವಂತೆ ಕೋರಿ ಈಗಾಗಲೇ ಗೃಹ ಸಚಿವರಿಗೆ ಪತ್ರವನ್ನೂ ಬರೆಯಲಾಗಿದೆ ಎಂದರು. ವಚನಾನಂದ ಸ್ವಾಮೀಜಿ, ಹುಕ್ಕೇರಿಯ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಸೇರಿ ಎಲ್ಲ ಧರ್ಮದ ಮಠಾಧೀಶರು, ಸಂತರೊಂದಿಗೆ ಈಗಾಗಲೇ ಮಾತುಕತೆ ನಡೆಸಲಾಗಿದೆ. ಅನೇಕ ಸಾಧು-ಸಂತರು ಗೃಹ ಸಚಿವರ ಭೇಟಿಗೆ ಸಮ್ಮತಿ ಸೂಚಿಸಿದ್ದಾರೆ.
ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ವಿರುದ್ಧ ನಡೆಯುತ್ತಿರುವ ಷಡ್ಯಂತ್ರ ವಿರೋಧಿಸಿ ರಾಜ್ಯದ ಜನರು ಸರ್ಕಾರದ ನಡೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೂ, ಸರ್ಕಾರ ಎಚ್ಚೆತ್ತುಕೊಳ್ಳದೆ ಷಡ್ಯಂತ್ರ ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತಿಲ್ಲ ಎಂದು ದೂರಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡದೆ ಮೌನ ವಹಿಸಿರುವುದು ಏಕೆ ಎಂದು ಸ್ವಾಮೀಜಿ ಕಿಡಿ ಕಾರಿದ್ದಾರೆ .
Accusing the Karnataka government of inaction over an alleged conspiracy against Dharmasthala Dharmadhikari Dr. D. Veerendra Heggade, National Saint Acharya Sri Gunadharanandi Maharaj has announced that a delegation of sadhus and seers will soon meet Union Home Minister Amit Shah to seek intervention.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm