ಬ್ರೇಕಿಂಗ್ ನ್ಯೂಸ್
24-08-25 05:30 pm Bangalore Correspondent ಕರ್ನಾಟಕ
ಬೆಂಗಳೂರು, ಆ 24 : ನಗರದಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ ಶೇ.50ರಷ್ಟು ರಿಯಾಯಿತಿ ದಂಡ ಪಾವತಿಸಲು ನಿಗದಿಪಡಿಸಲಾಗಿದ್ದ ಅವಧಿಯ ಮೊದಲನೆಯ ದಿನವಾದ ಶನಿವಾರ ಎಲ್ಲ ವಿಧಾನಗಳ ಮೂಲಕ 1,48,747 ಪ್ರಕರಣಗಳು ಇತ್ಯರ್ಥಗೊಂಡು ಒಟ್ಟು 4,18,20,500 ರೂ. ದಂಡ ಪಾವತಿ ಆಗಿದೆ ಎಂದು ಸಂಚಾರ ವಿಭಾಗದ ಪೊಲೀಸರು ತಿಳಿಸಿದ್ದಾರೆ.
ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್ನಲ್ಲಿ ದಾಖಲಾದ ಪ್ರಕರಣಗಳಿಗೆ ದಂಡ ಪಾವತಿಸದೇ ಬಾಕಿ ಉಳಿಸಿಕೊಂಡಿರುವ ಪ್ರಕರಣಗಳಲ್ಲಿ ದಂಡ ಪಾವತಿಸಲು ರಿಯಾಯಿತಿ ನೀಡಿ ಸರ್ಕಾರ ಆದೇಶಿಸಿದೆ. ಈ ಆದೇಶ ಆ.23ರಿಂದ ಜಾರಿಗೆ ಬಂದಿದೆ. ಆ.23ರಿಂದ ಸೆ.12ರವರೆಗೆ ರಿಯಾಯಿತಿ ಜಾರಿಯಲ್ಲಿ ಇರುತ್ತದೆ ಆದರೆ, ಈ ರಿಯಾಯಿತಿ 2023ರ ಫೆಬ್ರವರಿ 11ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರವೇ ಅನ್ವಯ.
ವಾಹನದ ಮಾಲೀಕರಿಗೆ ಮತ್ತೊಂದು ಅವಕಾಶ: ಕಳೆದ ಎರಡು ವರ್ಷಗಳ ಹಿಂದೆ 2023ರಲ್ಲಿ ರಾಜ್ಯ ಸರ್ಕಾರವು ಸಂಚಾರ ನಿಯಮ ಉಲ್ಲಂಘನೆ ಪ್ರಕರಣದಲ್ಲಿ ಬಾಕಿ ಉಳಿಸಿಕೊಂಡ ದಂಡ ಪಾವತಿಸಲು ಶೇ.50ರಷ್ಟು ರಿಯಾಯಿತಿ ಘೋಷಣೆ ಮಾಡಿತ್ತು. ಆಗ ಅಂದಾಜು 250 ಕೋಟಿ ರೂ.ಗೂ ಹೆಚ್ಚಿನ ಪ್ರಮಾಣದ ದಂಡವನ್ನು ವಸೂಲಿ ಮಾಡಲಾಗಿತ್ತು. 2023ರ ಫೆಬ್ರವರಿ 23ಕ್ಕಿಂತ ಮುಂಚಿನ ಟ್ರಾಫಿಕ್ ಉಲ್ಲಂಘನೆ ಪ್ರಕರಣಗಳಲ್ಲಿ ದಂಡ ಪಾವತಿ ಮಾಡದೇ ಬಾಕಿ ಉಳಿಸಿಕೊಂಡ ವಾಹನಗಳ ಮಾಲೀಕರಿಗೆ ಮತ್ತೊಂದು ಅವಕಾಶವೆನ್ನುವಂತೆ ಶೇ.50ರಷ್ಟು ರಿಯಾಯಿತಿ ನೀಡಲಾಗಿದೆ.
ಎಲ್ಲ ವಾಹನ ಮಾಲೀಕರು ಮತ್ತು ಚಾಲಕರು ಈ ಸೀಮಿತ ಅವಧಿಯ ಅವಕಾಶವನ್ನು ಸಂಪೂರ್ಣವಾಗಿ ಬಳಸಿಕೊಳ್ಳಬೇಕು. ಹಾಗೂ ತಮ್ಮ ವಾಹನಗಳ ಮೇಲಿರುವ ಸಂಚಾರ ಉಲ್ಲಂಘನೆಗಳ ಬಾಕಿ ಇರುವ ದಂಡಗಳನ್ನು ಪಾವತಿಸಿ, ಮುಂದಿನ ದಿನಗಳಲ್ಲಿ ಸಂಚಾರ ನಿಯಮಗಳನ್ನು ಪಾಲಿಸುವಂತೆ ಸಿಎಂ ಕೋರಿದ್ದಾರೆ.
On the first day of the government’s 50% discount offer on pending traffic fines, a staggering ₹4.18 crore was collected from 1,48,747 cases, the traffic police department reported on Saturday.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm