ಬ್ರೇಕಿಂಗ್ ನ್ಯೂಸ್
27-08-25 12:33 pm Bangalore Correspondent ಕರ್ನಾಟಕ
ಬೆಂಗಳೂರು, ಆ 27 : ಮೈಸೂರು ಚಾಮುಂಡಿ ಬೆಟ್ಟ ಕೇವಲ ಹಿಂದೂಗಳ ಸ್ವತ್ತಲ್ಲ ಎನ್ನುವ ಡಿಸಿಎಂ ಡಿಕೆಶಿ ಹೇಳಿಕೆಗೆ ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.
ಚಾಮುಂಡಿ ಬೆಟ್ಟ ಪಕ್ಕಾ ಹಿಂದೂಗಳ ಸ್ವತ್ತು. ಮುಸ್ಲಿಮರ ಸ್ವತ್ತಲ್ಲ. ನೂರು ಡಿಕೆಶಿ ಬಂದರೂ ಏನು ಮಾಡೋಕೆ ಆಗಲ್ಲ. ಇದು ಹಿಂದೂಗಳ ಸ್ವತ್ತೆ. ಧರ್ಮಸ್ಥಳ, ತಿರುಪತಿ, ಎಲ್ಲವೂ ಹಿಂದೂಗಳ ಸ್ವತ್ತೆ. ಇದನ್ನ ಮುಟ್ಟಿದ್ರೆ ದಂಗೆ ಆಗುತ್ತೆ ಹುಷಾರ್ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.
ಎಲ್ಲಾ ಧರ್ಮವನ್ನ ಒಪ್ಪುತ್ತೇನೆ ಅನ್ನೋದು ಕಾಂಗ್ರೆಸ್‌ಗೆ ಅರ್ಥ ಆಗಲ್ಲ. ಇದನ್ನ ಒಪ್ಪಲ್ಲ. ನಮಸ್ತೆ ಇಟಲಿ ಅಂತ ಹೇಳಿದ್ರೆ ಡಿಕೆಶಿಗೆ ಅವಾರ್ಡ್ ಕೊಟ್ಟಿರುವರು. ಈಗ ಅವರನ್ನ ಎಲ್ಲರೂ ವಿರೋಧಿಸುತ್ತಿದ್ದಾರೆ. ಅವರ ಮೇಲೆ ಮುಗಿ ಬೀಳುತ್ತಿದ್ದಾರೆ. ಕಾಂಗ್ರೆಸ್‌ಗೆ ಉಳಿಗಾಲವಿಲ್ಲ. ಮುಂದೆ ಕಾಂಗ್ರೆಸ್‌ಗೆ ಭವಿಷ್ಯ ಇಲ್ಲ. ಕ್ಷಮೆ ಕೇಳೋದು ಯಾಕೆ? ಭಾರತಮಾತೆಗೆ ಅಥವಾ ಕನ್ನಡ ಮಾತೆ, ಮುಸ್ಲಿಮರಿಗೆ ಬೈಯ್ದಿದ್ದಾರಾ? ಆಶ್ಚರ್ಯ ಆಗ್ತಿದೆ. ತಪ್ಪು ಬಯ್ದಿದ್ದರೆ ಕ್ಷಮೆ ಕೇಳೋದು ಸರಿ. ಭಾರತ ಮಾತೆಗೆ ನಮಸ್ಕಾರ ಹೇಳುವುದರಲ್ಲಿ ತಪ್ಪೇನು ಎಂದು ಪ್ರಶ್ನಿಸಿದ್ದಾರೆ.
ಬಾನು ಮುಸ್ತಾಕ್ ದಸರಾ ಉದ್ಘಾಟನೆಗೆ ವಿರೋಧ ಕುರಿತು ಮಾತನಾಡಿ, ಮುಸ್ಲಿಮರೇ ಮೂರ್ತಿ ಪೂಜೆ ಮಾಡಲ್ಲ ಅಂತ ಹೇಳಿದ್ದಾರೆ. ಯಾರೇ ಹೇಳಿದ್ರು ಮೂರ್ತಿ ಪೂಜೆ ಅದು ಅಪರಾಧ ಅಂತಾರೆ. ಚಾಮುಂಡೇಶ್ವರಿ ಪೂಜೆ ಮಾಡಿ ದಸರಾ ಹೊರಡುವುದು. ಹೂ ಹಾಕಿ ಪೂಜೆ ಮಾಡಿ ಹೊರಡಬೇಕು. ಅವರ ಧರ್ಮದಲ್ಲಿ ಇದಕ್ಕೆ ಅವಕಾಶ ಇಲ್ಲ. ಕಾಂಗ್ರೆಸ್‌ಗೆ ಮುಸ್ಲಿಂ ವೋಟ್ ಬಿಟ್ಟರೆ ತಲೆಯಲ್ಲಿ ಬೇರೆನೂ ಇಲ್ಲ. ಹಿಂದೂಗಳಲ್ಲಿ ಯೋಗ್ಯತೆ ಇಲ್ವಾ? ದಸರಾ ಉದ್ಘಾಟನೆಗೆ ಹಿಂದೂಗಳು ಇರಲಿಲ್ವಾ? ನಮ್ಮ ಸರ್ಕಾರ ಬಂದಾಗ ಇದಕ್ಕೆ ಒಂದು ಕಾನೂನು ತರ್ತೀವಿ. ಚಾಮುಂಡಿಯನ್ನ ಯಾರು ಒಪ್ಪುವರೋ ಅವರು ಮಾತ್ರ ಉದ್ಘಾಟನೆ ಮಾಡಬೇಕು ಅನ್ನೋ ಕಾನೂನು ತರುತ್ತೇವೆ ಎಂದು ತಿಳಿಸಿದ್ದಾರೆ.
ಮೈಸೂರಿನಲ್ಲಿ ಪರಮೇಶ್ವರೋತ್ಸವ ವಿಚಾರವಾಗಿ ಮಾತನಾಡಿ, ಪರಮೇಶ್ವರ್ ಹಿರಿಯರು. ಎರಡು ಬಾರಿ ಕೆಪಿಸಿಸಿ ಅಧ್ಯಕ್ಷರಾಗಿದ್ದರು. ಪರಮೇಶ್ವರ್ ಯಾವತ್ತೋ ಮುಖ್ಯಮಂತ್ರಿ ಆಗಬೇಕಿತ್ತು. ಕಾಂಗ್ರೆಸ್ ಅವರನ್ನ ಕರಿಬೇವಿನ ಥರ ಬಳಕೆ ಮಾಡಿಕೊಳ್ಳುತ್ತಿದೆ. ಯಾವಾಗ ಬೇಕೋ ಅವಾಗ ಬಳಕೆ ಮಾಡಿಕೊಳ್ಳುತ್ತಾರೆ. ಊಟ ಮಾಡುವಾಗ ಎತ್ತಿ ಪಕ್ಕಕ್ಕೆ ಇಡುತ್ತಾರೆ. ಅವರು ಒಳ್ಳೆಯವರು ಎಂದು ಹೇಳಿದ್ದಾರೆ.
Opposition leader R. Ashoka has strongly countered Deputy Chief Minister DK Shivakumar’s recent statement that Chamundi Hill does not solely belong to Hindus. Ashoka asserted that Chamundi Hill is undeniably Hindu property and warned of serious consequences if such statements continue.
18-09-25 05:34 pm
Bangalore Correspondent
Ksrtc Bus, Driver, Heart Attack: ಬಸ್ ಓಡಿಸುವಾಗ...
17-09-25 06:02 pm
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
18-09-25 08:14 pm
HK News Desk
ಎರಡು ಬಾರಿ ಕಚ್ಚಿದ್ರೆ ಬೀದಿ ನಾಯಿಗೆ ಜೀವಾವಧಿ ಶಿಕ್ಷ...
16-09-25 10:11 pm
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
18-09-25 11:11 pm
Mangalore Correspondent
Mangalore, UT Khader: ಹಿಂದುಳಿದ ವರ್ಗಗಳ ಆಯೋಗ ಸ್...
18-09-25 09:12 pm
ಮಾಜಿ ಸೈನಿಕರಿಗೆ ಸರ್ಕಾರಿ ಸವಲತ್ತು ನೀಡದೆ ನಿರ್ಲಕ್ಷ...
18-09-25 09:09 pm
Banglegudde, Dharmasthala, SIT: ಬಂಗ್ಲೆಗುಡ್ಡೆ...
18-09-25 07:40 pm
Ajith Kumar Rai, Mangalore: ಬಂಟ- ನಾಡವರು ಒಂದೇ,...
18-09-25 06:11 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm