ಬ್ರೇಕಿಂಗ್ ನ್ಯೂಸ್
27-08-25 03:17 pm HK News Desk ಕರ್ನಾಟಕ
ಮೈಸೂರು, ಆ 27 : ನಾಡಹಬ್ಬ ದಸರಾ ಉದ್ಘಾಟಿಸಲು ಬಾನು ಮುಷ್ತಾಕ್ರು ಆಯ್ಕೆಯಾದಗಿನಿಂದಲೂ ಬಿಜೆಪಿ ನಾಯಕರು ನಾನ ತಕರಾರು ಶುರು ಮಾಡುತ್ತಲೇ ಇದ್ದಾರೆ. ಬಿಜೆಪಿ ನಾಯಕರ ಆಕ್ಷೇಪ ಒಂದೆಡೆಯಾದರೆ, ಕಾಂಗ್ರೆಸ್ ನಾಯಕರ ಸಮರ್ಥನೆ ಒಂದು ಕಡೆ. ಇಂದು ಸಹ ಮೈಸೂರಿನಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಈ ಬಗ್ಗೆ ಮಾತನಾಡಿ, ಅರಿಶಿನ ಕುಂಕುಮದ ಬಗ್ಗೆ ಬಾನು ಮುಷ್ತಾಕ್ ಗೆ ದ್ವೇಷದ ಭಾವನೆ ಇದೆ. ನೀವು ನಂಬಿರುವ ನಿಮ್ಮ ಅಲ್ಲಾ ನಿಮ್ಮನ್ನು ಮಸೀದಿಗೆ ಕರೆಸಿಕೊಳ್ಳುವುದಿಲ್ಲ. ನಮ್ಮ ದೇವರು ಹೇಗೆ ಕರೆಸಿ ಕೊಳ್ಳುತ್ತಾರೆ ಎಂದು ಪ್ರಶ್ನೆ ಮಾಡಿದ್ದಾರೆ.
ದಸರಾ ಉದ್ಘಾಟಕರ ಆಯ್ಕೆ ವಿವಾದ ವಿಚಾರದ ಬಗ್ಗೆ ಮೈಸೂರಿನಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಮಾತನಾಡಿ, ಬಾನು ಮುಷ್ತಾಕ್ ಮುಸ್ಲಿಂ ಅನ್ನುವ ಕಾರಣಕ್ಕೆ ನಾನು ವಿರೋಧಿಸುತ್ತಿಲ್ಲ. ಟಿಪ್ಪು ಜಯಂತಿ ಮಾಡಿ ಎಂದು ಮುಸ್ಲಿಮರು ಕೇಳಿರಲಿಲ್ಲ. ಸಿದ್ದರಾಮಯ್ಯ ಮುಸ್ಲಿಮರ ಓಲೈಕೆಗಾಗಿ ಟಿಪ್ಪು ಜಯಂತಿ ಮಾಡಿದರು. ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟನೆಗೆ ಕರೆಯಿರಿ ಎಂದು ಯಾವ ಮುಸ್ಲಿಂ ಕೇಳಿರಲಿಲ್ಲ. ಆದರೂ ಸಿದ್ದರಾಮಯ್ಯ ಮಾಡಿದರು ಎಂದು ಗುಡುಗಿದರು.
ಪ್ರತಾಪ್ಸಿಂಹರಿಂದ ಸಾಲು ಸಾಲು ಪ್ರಶ್ನೆ
ಬಾನು ಮುಷ್ತಾಕ್ ಅವರಿಗೆ ನೇರವಾಗಿ ಪ್ರಶ್ನೆ ಕೇಳ್ತೀನಿ, ಸಾಹಿತ್ಯ ಭಾಷಣದಲ್ಲಿ ನಿಮ್ಮ ಭಾಷಣ ಏನಿತ್ತು? ಮುಸ್ಲಿಮರು ಕನ್ನಡ ಕಲಿಯಲು ಭುವನೇಶ್ವರಿ ತಾಯಿ ಮೂರ್ತಿ ಅಡ್ಡಿಯಾಯಿತು ಎಂದು ಬಾನು ಮುಷ್ತಾಕ್ ಹೇಳಿದ್ದಾರೆ. ಭುವನೇಶ್ವರಿಗೆ ಅರಿಶಿನ ಕುಂಕುಮ ಇಟ್ಟಿದ್ದರಿಂದ ಮುಸ್ಲಿಮರು ಕನ್ನಡ ಕಲಿಯಲು ಆಗಿಲ್ಲ ಎಂದು ಮುಷ್ತಾಕ್ ಹೇಳಿದ್ದು ಸತ್ಯ ತಾನೇ?
ಕನ್ನಡವನ್ನು ಭುವನೇಶ್ವರಿ ಆಗಿ ಒಪ್ಪದ ಬಾನು ಮುಷ್ತಾಕ್ ನಾಡದೇವಿ ರೂಪದಲ್ಲಿನ ಚಾಮುಂಡಿಯನ್ನು ಒಪ್ಪುತ್ತಾರಾ ಎಂದು ಪ್ರತಪ್ ಸಿಂಹ ಬಾನು ಮುಷ್ತಾಕ್ರಿಗೆ ಪ್ರಶ್ನಿಸಿದರು.
ಅರಿಶಿನ ಕುಂಕುಮದ ಬಗ್ಗೆ ಯಾಕೆ ಬಾನು ಮುಷ್ತಾಕ್ ಗೆ ತಕಾರರು - ಕಿರಿಕಿರಿ ಇದೆ. ಹಿಂದೂಗಳ ಮನೆಯಲ್ಲಿ ಯಾರೇ ಸುಮಂಗಲಿ ಹೋದರು ಕುಂಕುಮ ಕೊಡುತ್ತಾರೆ. ದೇವಸ್ಥಾನಕ್ಕೆ ಹೋದರೆ ಕುಂಕುಮ ಪ್ರಸಾದವಾಗಿ ಕೊಡುತ್ತಾರೆ. ಇಂತಹ ಕುಂಕುಮವೇ ಬಾನು ಮುಷ್ತಾಕ್ ಗೆ ಕಿರಿಕಿರಿ ಉಂಟು ಮಾಡಿದೆ. ತಮಿಳುನಾಡಿನಲ್ಲಿ ಮುಸ್ಲಿಮರಿಗೆ ಮಾತೃ ಭಾಷೆ ತಮಿಳು. ಕರ್ನಾಟಕದಲ್ಲಿ ಯಾಕೆ ಮುಸ್ಲಿಮರಿಗೆ ಮಾತೃ ಭಾಷೆ ಕನ್ನಡ ಆಗಲ್ಲ? ತಲೆ ಮಾಸಿದ ಕಾಂಗ್ರೆಸ್ ನಾಯಕರು ನನಗೂ ಪ್ರಶ್ನೆ ಮಾಡಿದ್ದಾರೆ ಎಂದು ಕಿಡಿಕಾರಿದರು.
ನಂಬಿಕೆಗೆ ಧಕ್ಕೆಯಾಗ್ತಿದೆ;
ಇಸ್ಲಾಂ, ಕಿಶ್ಚಿಯನ್ ಅಕ್ರಮಣಕಾರಿ ಆಗಿ ಭಾರತಕ್ಕೆ ಬಂದವರು. ನಮ್ಮಆಚಾರ, ವಿಚಾರ, ಸಂಸ್ಕೃತಿ ಒಡೆದು ಹಾಕಲು ಯತ್ನಿಸಿದ್ದು, ಘಜ್ನಿ, ಮೊಗಲರು. ಇದೇ ರೀತಿ ನಮ್ಮ ನಂಬಿಕೆಯನ್ನು ಬಾನು ಮುಷ್ತಾಕ್ ಒಡೆಯುತ್ತಿದ್ದಾರೆ ಎಂದರು
The controversy surrounding the selection of acclaimed author Banumustak as the inaugurator of this year’s Mysuru Dasara festival continues to intensify. Former BJP MP Pratap Simha has now added fuel to the fire with sharp criticism and provocative remarks against Banumustak, questioning her beliefs and intentions.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm