ಬ್ರೇಕಿಂಗ್ ನ್ಯೂಸ್
31-08-25 07:17 pm HK News Desk ಕರ್ನಾಟಕ
ಮೈಸೂರು, ಆ 31 : ಸೋಮವಾರ ಸೆ 01 ಧರ್ಮಸ್ಥಳ ಚಲೋ ಕಾರ್ಯಕ್ರಮಕ್ಕೆ ಎಲ್ಲಾ ಹಿಂದೂಗಳು ಬರ್ಬೇಕು ಹಾಗೂ ಚಾಮುಂಡಿ ಬೆಟ್ಟದ ಬಗ್ಗೆ ಪದೇ ಪದೆ ಮಾತನಾಡಿದರೆ ಚಾಮುಂಡೇಶ್ವರಿ ಚಲೋ ಕೂಡ ಮಾಡ್ತೀವಿ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿದರು.
ಭಾನುವಾರ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಿಂದೂಗಳ ಭಾವನೆಗೆ ಧಕ್ಕೆ ತರದಂತೆ ಹಾಗೂ ಹಿಂದೂ ಶ್ರದ್ಧಾ ಕೇಂದ್ರಗಳನ್ನು ಟಾರ್ಗೆಟ್ ಮಾಡದಂತೆ ಕಾಂಗ್ರೆಸ್ ಸರ್ಕಾರಕ್ಕೆ ಒಳ್ಳೆ ಬುದ್ಧಿ ಕೊಡಲಿ ಎಂದು ಚಾಮುಂಡೇಶ್ವರಿ ತಾಯಿಯಲ್ಲಿ ಬೇಡಿಕೊಂಡಿದ್ದೇನೆ ಎಂದು ತಿಳಿಸಿದರು.
''ಚಾಮುಂಡೇಶ್ವರಿ ದೇವಾಲಯ ಹಿಂದೂಗಳದ್ದಲ್ಲ ಎಂದರೆ ಮತ್ಯಾರದ್ದು?. ನಿಮಗೆ ಧೈರ್ಯವಿದ್ದರೆ ಮಸೀದಿ ಮುಂದೆ ನಿಂತು ಇದು ಮುಸ್ಲಿಮರದ್ದಲ್ಲ ಎಂದು ಹೇಳಿ. ಅದನ್ನು ಬಿಟ್ಟು ಪದೇ ಪದೆ ಹಿಂದೂ ದೇವಾಲಯಗಳನ್ನು ಟಾರ್ಗೆಟ್ ಮಾಡಿತ್ತಿರುವುದೇಕೆ?. ಈಗ ಚುನಾವಣೆಯಿಲ್ಲ, ಸಮುದಾಯದ ಓಲೈಕೆ ಬೇಡ'' ಎಂದರು.
ಚಾಮುಂಡಿ ತಾಯಿಯಿಂದಲೇ ಕಾಂಗ್ರೆಸ್ ಅವನತಿ:
''ಧರ್ಮಸ್ಥಳ ಚಲೋ ಕಾರ್ಯಕ್ರಮಕ್ಕೆ ಎಲ್ಲಾ ಹಿಂದೂಗಳು ಬರಬೇಕು. ಮುಂದೆ ಚಾಮುಂಡೇಶ್ವರಿ ದೇವಾಲಯವನ್ನು ಟೂಲ್ಕಿಟ್ ಆಗಿ ಬಳಸಿದರೆ ಹಿಂದೂಗಳು ಸಹಿಸುವುದಿಲ್ಲ. ಮುಂದಿನ ದಿನಗಳಲ್ಲಿ ಚಾಮುಂಡೇಶ್ವರಿ ಚಲೋ ಕೂಡ ಮಾಡುವ ಎಚ್ಚರಿಕೆ ನೀಡಿದ ಆರ್. ಅಶೋಕ್, ಚಾಮುಂಡಿ ತಾಯಿಯಿಂದಲೇ ಕಾಂಗ್ರೆಸ್ ಅವನತಿ ಎಂದು ಹೇಳಿದರು.
ದಸರಾ ಉದ್ಘಾಟಕರಿಗೆ ಚಾಮುಂಡೇಶ್ವರಿ ಬಗ್ಗೆ ಭಕ್ತಿ ಇದೆಯಾ? ದಸರಾಗೆ ಸಾವಿರಾರು ವರ್ಷದ ಇತಿಹಾಸವಿದೆ. ಇಲ್ಲಿಗೆ ಬರುವವರು ಚಾಮುಂಡೇಶ್ವರಿ ತಾಯಿಯನ್ನು ಪೂಜಿಸುತ್ತಾರೆ. ಆದರೆ ದಸರಾ ಉದ್ಘಾಟಕರಾಗಿ ಆಯ್ಕೆಯಾಗಿರುವ ಬಾನು ಮುಷ್ತಾಕ್ ಅವರಿಗೆ ಚಾಮುಂಡೇಶ್ವರಿ ತಾಯಿಯ ಬಗ್ಗೆ ಭಕ್ತಿ ಇದೆಯಾ? ಎಂಬುದನ್ನು ಸ್ಪಷ್ಟಪಡಿಸಬೇಕು. ಜೊತೆಗೆ ಈ ಹಿಂದೆ ಭಾಷಣದಲ್ಲಿ ಕನ್ನಡಾಂಬೆ ಭುವನೇಶ್ವರಿ ಬಗ್ಗೆ ಹಾಗೂ ಕನ್ನಡದ ಬಾವುಟದ ಬಗ್ಗೆ ಆಡಿರುವ ಮಾತಿನ ಕುರಿತು ಕನ್ನಡಿಗರಿಗೆ ಕ್ಷಮೆ ಕೇಳಬೇಕು. ನಂತರ ದಸರಾ ಉದ್ಘಾಟನೆ, ಇಲ್ಲಿನ ಸಂಪ್ರದಾಯ, ಆಚರಣೆ ಬಗ್ಗೆ ಸ್ಪಷ್ಟೀಕರಣ ನೀಡಬೇಕು ಎಂದು ಅವರು ಒತ್ತಾಯಿಸಿದರು.
ದಸರಾ ಉದ್ಘಾಟನೆಗೆ ನಾಡಿನ 6ಕೋಟಿ ಹಿಂದೂಗಳಲ್ಲಿ ಒಬ್ಬ ಸಾಧಕ ಸಿಗುವುದಿಲ್ಲವೇ? ಕನ್ನಡದ ಬಗ್ಗೆ ಅಗೌರವ ತೋರಿದವರನ್ನೇ ಕರೆಯಬೇಕಿತ್ತಾ? ಈ ಹಿಂದೆ ನಿತ್ಯೋತ್ಸವ ಕವಿ ನಿಸಾರ್ ಅಹಮದ್ ದಸರಾ ಉದ್ಘಾಟನೆ ಮಾಡಿದ್ದರು. ಅವರು ಧರ್ಮದ ವಿರೋಧಿಯಲ್ಲ, ಅವರು ಎಲ್ಲರನ್ನು ಗೌರವಿಸುತ್ತಾರೆ. ಜೋಗದ ಜಲಸಿರಿ ಕುರಿತು ನಿತ್ಯೋತ್ಸವ ಕವಿತೆಯನ್ನು ಬರೆದಿದ್ದಾರೆ ಎಂದರು.
ದಸರಾ ವಿಚಾರವಾಗಿ ಮುಷ್ತಾಕ್ ಹಿಂದೂಗಳ ಭಾವನಗೆ ಧಕ್ಕೆ ತರದಂತೆ ಸರ್ಕಾರ ಮುಂದಿನ ನಿರ್ಧಾರ ತೆಗೆದುಕೊಳ್ಳಲಿ. ಒಂದು ಕೋಮಿನರನ್ನು ಸಂತೃಪ್ತಿ ಪಡಿಸಲು ಕಾಂಗ್ರೆಸ್ ಪ್ರಯತ್ನ ಮಾಡುತ್ತಿದೆ. ಅಯ್ಯಪ್ಪ, ತಿರುಪತಿ ಈಗ ಧರ್ಮಸ್ಥಳವಾಗಿದೆ. ಮುಂದೆ ಚಾಮುಂಡೇಶ್ವರಿ ದೇವಾಲಯದ ಮೇಲೆ ಕಾಂಗ್ರೆಸ್ಸಿನವರ ಕಣ್ಣು ಬೀಳಲಿದೆ ಎಂದು ಆರ್ ಅಶೋಕ್ ಹೇಳಿದರು.
Leader of the Opposition R. Ashoka has called upon all Hindus to participate in the ‘Dharmasthala Chalo’ rally on September 1, warning that if Congress continues to target Hindu religious centers, a ‘Chamundeshwari Chalo’ movement will also be launched.
30-12-25 11:12 pm
HK News Desk
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
ಕೇರಳದಲ್ಲಿ ಚುನಾವಣೆಯಾದ್ರೆ ಪಿಣರಾಯಿಗೆ ಕರ್ನಾಟಕದಲ್ಲ...
30-12-25 05:10 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
30-12-25 10:43 pm
Mangalore Correspondent
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
ಉಡುಪಿ ; ಬುದ್ದಿ ಮಾತು ಹೇಳಿದ್ದಕ್ಕೆ 17 ವರ್ಷದ ಯುವತ...
29-12-25 01:24 pm
30-12-25 10:40 pm
Mangalore Correspondent
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm
ಯೆಯ್ಯಾಡಿ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಕರಿಮಣಿ...
29-12-25 03:02 pm
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm