ಬ್ರೇಕಿಂಗ್ ನ್ಯೂಸ್
01-09-25 06:59 pm Bangalore Correspondent ಕರ್ನಾಟಕ
ಬೆಂಗಳೂರು, ಸೆ 01 : ಸೋಶಿಯಲ್ ಮೀಡಿಯಾದ ಬಳಕೆಯಲ್ಲಿ ಜನರು ಎಚ್ಚರಿಕೆಯಿಂದಿರಬೇಕೆಂದು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಕಟ್ಟುನಿಟ್ಟಿನ ಎಚ್ಚರಿಕೆ ಸಂದೇಶವನ್ನು ನೀಡಿದೆ. ಸೋಷಿಯಲ್ ಮೀಡಿಯಾದಲ್ಲಿ ಅವಹೇಳನಕಾರಿ, ಶಾಂತಿಭಂಗಕ್ಕೆ ಕಾರಣವಾಗುವ, ಅಥವಾ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಪೋಸ್ಟ್‌ಗಳನ್ನು ಹಾಕಿದವರ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಎಚ್ಚರಿಸಿದ್ದಾರೆ. ಈ ಸಂದೇಶವು ರಾಜ್ಯದಾದ್ಯಂತ ಸಾಮಾಜಿಕ ಜಾಲತಾಣ ಬಳಕೆದಾರರಿಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಹಂಚಿಕೊಳ್ಳಲಾಗಿದೆ.
ಸೋಷಿಯಲ್ ಮೀಡಿಯಾ ಪ್ರಿಯರೇ ಎಚ್ಚರ!
ಸೋಷಿಯಲ್ ಮೀಡಿಯಾದಲ್ಲಿ ಧಾರ್ಮಿಕ, ಜಾತೀಯ, ಅಥವಾ ರಾಜಕೀಯವಾಗಿ ಸೂಕ್ಷ್ಮವಾದ ವಿಷಯಗಳ ಕುರಿತು ಭಾವನಾತ್ಮಕವಾಗಿ ಕೆರಳಿಸುವ ಅಥವಾ ತಪ್ಪು ಮಾಹಿತಿಯನ್ನು ಹರಡುವ ಪೋಸ್ಟ್‌ಗಳು ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುತ್ತಿವೆ. ಇಂತಹ ಚಟುವಟಿಕೆಗಳಿಂದಾಗಿ ಸಾಮಾಜಿಕ ಸೌಹಾರ್ದತೆಗೆ ಭಂಗ ಬರುವ ಸಾಧ್ಯತೆಯಿದೆ ಎಂದು ಕರ್ನಾಟಕ ಪೊಲೀಸ್ ಇಲಾಖೆ ಎಚ್ಚರಿಸಿದೆ. ಹೀಗಾಗಿ ಸೋಷಿಯಲ್ ಮೀಡಿಯಾ ಪ್ರಿಯರು ಪೋಸ್ಟ್ ಮಾಡುವ ಮುನ್ನ ಜಾಗರೂಕರಾಗಿರಿ, ಇದು ಮುನ್ನೆಚ್ಚರಿಕೆ ಎಂದು ಸೂಚಿಸಿದ್ದಾರೆ.
ಪೊಲೀಸರ ಎಚ್ಚರಿಕೆ ಸಂದೇಶ !
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ತನ್ನ ಅಧಿಕೃತ ಎಕ್ಸ್ ಖಾತೆಯ ಮೂಲಕ, “ಸೋಷಿಯಲ್ ಮೀಡಿಯಾದಲ್ಲಿ ಯಾವುದೇ ಪೋಸ್ಟ್ ಹಾಕುವ ಮುನ್ನ ಎಚ್ಚರಿಕೆಯಿಂದಿರಿ. ಯಾವುದೇ ಸಂಘಟನೆ, ಸಂಸ್ಥೆ, ಅಥವಾ ವ್ಯಕ್ತಿಯ ವಿರುದ್ಧ ಅವಹೇಳನಕಾರಿ ಅಥವಾ ಶಾಂತಿಭಂಗಕ್ಕೆ ಕಾರಣವಾಗುವ ಪೋಸ್ಟ್‌ಗಳನ್ನು ಹಾಕಿದರೆ, ಬಿಎನ್‌ಎಸ್ ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆ (ಐಟಿ ಆಕ್ಟ್) ಅಡಿಯಲ್ಲಿ ಕಠಿಣ ಕಾನೂನು ಕ್ರಮಕ್ಕೆ ಒಳಗಾಗುತ್ತೀರಿ,” ಎಂದು ಎಚ್ಚರಿಕೆ ನೀಡಿದೆ
ಈ ಸಂದೇಶವನ್ನು ರಾಜ್ಯದಾದ್ಯಂತ ಪೊಲೀಸ್ ಠಾಣೆಗಳ ಮೂಲಕವೂ ಪ್ರಕಟಿಸಲಾಗಿದೆ. ಪುನರಾವರ್ತಿತ ತಪ್ಪುಗಳು ಕಾನೂನಿನ ಉಲ್ಲಂಘನೆಯ ಗಂಭೀರ ಕ್ರಮಗಳಿಗೆ ದಾರಿ ಮಾಡಿಕೊಡುತ್ತವೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
In a stern message to social media users, the Karnataka State Police has issued a statewide alert urging citizens to exercise caution while posting content online. The department has warned that legal action will be taken against individuals who share defamatory, provocative, or law-and-order-threatening content on social media platforms.
24-10-25 06:04 pm
HK News Desk
ಧರ್ಮಸ್ಥಳ ಪ್ರಕರಣಕ್ಕೆ ಕ್ಲೈಮ್ಯಾಕ್ಸ್ ; ಇದೇ ತಿಂಗಳಾ...
24-10-25 01:11 pm
ಪ್ರಿಯಾಂಕ ಖರ್ಗೆ ಹೊಸ ಸಂಪುಟದಲ್ಲಿ ಉಪ ಮುಖ್ಯಮಂತ್ರಿ...
23-10-25 03:42 pm
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
24-10-25 05:43 pm
HK News Desk
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
24-10-25 07:57 pm
Mangalore Correspondent
Police Commissioner Sudheer Reddy, Mangalore:...
24-10-25 11:57 am
ಎಸ್ ಸಿಎಸ್ ಆಸ್ಪತ್ರೆಯ 38ನೇ ವರ್ಷದ ಸಂಭ್ರಮಾಚರಣೆ ;...
23-10-25 10:52 pm
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
24-10-25 08:20 pm
Mangalore Correspondent
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am